1.5 ವರ್ಷದಲ್ಲಿ 10 ಲಕ್ಷ ಮಂದಿಗೆ ಉದ್ಯೋಗ ನೀಡಲು ಮುಂದಾದ ಮೋದಿ ಸರ್ಕಾರ

Public TV
1 Min Read

ನವದೆಹಲಿ: ಮೋದಿ ಸರ್ಕಾರವು ಮುಂದಿನ 1.5 ವರ್ಷಗಳಲ್ಲಿ ವಿವಿಧ ಇಲಾಖೆಗಳಿಗೆ ಹಾಗೂ ಸಚಿವಾಲಯಗಳಲ್ಲಿ 10 ಲಕ್ಷ ಜನರನ್ನು ನೇಮಿಸಿಕೊಳ್ಳಲಿದೆ ಎಂದು ಪ್ರಧಾನ ಮಂತ್ರಿ ಕಚೇರಿ ತಿಳಿಸಿದೆ.

ಈ ಬಗ್ಗೆ ಪಿಎಂ ಇಂಡಿಯಾ ಟ್ವೀಟ್ ಮಾಡಿದ್ದು, ಮಿಷನ್ ಮೋಡ್‍ನಡಿಯಲ್ಲಿ ನೇಮಕಾತಿಯನ್ನು ಪ್ರಾರಂಭಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲಾ ಇಲಾಖೆಗಳಿಗೆ ಹಾಗೂ ಸಚಿವಾಲಯಗಳಿಗೆ ನಿರ್ದೇಶನ ನೀಡಿದ್ದಾರೆ ಎಂದು ತಿಳಿಸಿದೆ.

ನಿರುದ್ಯೋಗ ಸಮಸ್ಯೆಗೆ ಸಂಬಂಧಿಸಿದಂತೆ ಪ್ರತಿ ಪಕ್ಷಗಳು ಸೇರಿದಂತೆ ಸ್ವಪಕ್ಷದ ಸಂಸದ ವರುಣ್ ಗಾಂಧಿ ಪದೇ ಪದೇ ಟೀಕಿಸುತ್ತಿರುವ ಹಿನ್ನೆಲೆಯಲ್ಲೇ ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲಾ ಇಲಾಖೆಗಳು ಮತ್ತು ಸಚಿವಾಲಯಗಳಲ್ಲಿ ಉದ್ಯೋಗಿಗಳ ಸ್ಥಿತಿಗತಿಯನ್ನು ಪರಿಶೀಲಿಸಿದ್ದು, ಈ ಹಿನ್ನೆಲೆಯಲ್ಲಿ ಮುಂದಿನ 1.5 ವರ್ಷಗಳಲ್ಲಿ 10 ಲಕ್ಷ ಜನರನ್ನು ನೇಮಕ ಮಾಡುವಂತೆ ತಿಳಿಸಿದ್ದಾರೆ. ಇದನ್ನೂ ಓದಿ: ಭಯೋತ್ಪಾದಕರಿಗೆ ಧನಸಹಾಯ ಮಾಡುತ್ತಿದ್ದ 4ನೇ ಶಂಕಿತ ಅರೆಸ್ಟ್

ಈ ಹಿಂದೆ ಏಪ್ರಿಲ್‍ನಲ್ಲಿ ಪ್ರಧಾನಿ ಮೋದಿ ಅವರು ಉನ್ನತ ಸರ್ಕಾರಿ ಅಧಿಕಾರಿಗಳನ್ನು ಭೇಟಿ ಮಾಡಿ ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆಗೆ ಆದ್ಯತೆ ನೀಡುವಂತೆ ಸೂಚಿಸಿದ್ದರು. ಇದರಿಂದಾಗಿ ಹೆಚ್ಚಿನ ಅವಕಾಶಗಳು ಸೃಷ್ಟಿಯಾಗಿದೆ.

ಫೆಬ್ರವರಿಯಲ್ಲಿ ರಾಜ್ಯಸಭೆಯಲ್ಲಿ ಮಂಡಿಸಲಾದ ಸರ್ಕಾರದ ಅಂಕಿಅಂಶಗಳ ಪ್ರಕಾರ, 2020ರ ಮಾರ್ಚ್ 1ರವರೆಗೆ ಕೇಂದ್ರ ಸರ್ಕಾರದ ಇಲಾಖೆಗಳಲ್ಲಿ 87 ಲಕ್ಷ ಹುದ್ದೆಗಳು ಖಾಲಿ ಇವೆ. ಇದನ್ನೂ ಓದಿ: ಮತ್ತೆ ಮುನ್ನೆಲೆಗೆ ಬಂದ ಫಿಲ್ಮ್ ಸಿಟಿ: ಸಿಎಂ ಹೇಳಿದ್ದೇನು?

Share This Article
Leave a Comment

Leave a Reply

Your email address will not be published. Required fields are marked *