ಬೇಸ್ ಕ್ಯಾಂಪಸ್ ಉದ್ಘಾಟನೆ ಮಾಡಲಿದ್ದಾರೆ ಪ್ರಧಾನಿ ನರೇಂದ್ರ ಮೋದಿ

Public TV
1 Min Read

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇದೇ 20ರಂದು ನಾಗರಬಾವಿ ಸಮೀಪದ ಡಾ. ಬಿಆರ್ ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ವಿಶ್ವವಿದ್ಯಾಲಯದ(ಬೇಸ್) ನೂತನ ಕ್ಯಾಂಪಸ್ ಅನ್ನು ಉದ್ಘಾಟಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಸಚಿವ ಡಾ. ಸಿಎನ್ ಅಶ್ವತ್ಥನಾರಾಯಣ ಅವರು ಸೋಮವಾರ ಕ್ಯಾಂಪಸ್‌ಗೆ ಭೇಟಿ ನೀಡಿ, ಪೂರ್ವಸಿದ್ಧತೆ ಮತ್ತಿತರ ವ್ಯವಸ್ಥೆಗಳನ್ನು ಕೂಲಂಕಷವಾಗಿ ಪರಿಶೀಲಿಸಿದರು.

ಟಾಟಾ ಸಮೂಹ ಸಂಸ್ಥೆಯ ಸಹಾಯದೊಂದಿಗೆ ನಾಲ್ಕೂವರೆ ಸಾವಿರ ಕೋಟಿ ರೂ.ಗಳಿಗೂ ಹೆಚ್ಚು ವೆಚ್ಚದಲ್ಲಿ ಉನ್ನತೀಕರಿಸಿರುವ 150 ಸರ್ಕಾರಿ ಐಟಿಐ ಸಂಸ್ಥೆಗಳನ್ನು ಕೂಡ ಮೋದಿಯವರು ಈ ಕ್ಯಾಂಪಸ್‌ನಿಂದಲೇ ಲೋಕಾರ್ಪಣೆ ಮಾಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಐಟಿಐ ಸಂಸ್ಥೆಯ ಮಾದರಿ ಪ್ರತಿಕೃತಿ ಮತ್ತು ಅತ್ಯಾಧುನಿಕ ಪ್ರಯೋಗಾಲಯದ ಮಾದರಿಗಳನ್ನು ಇಲ್ಲಿ ಸೃಷ್ಟಿಸಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಬೆಂಗ್ಳೂರಲ್ಲಿ 400 ಕೇಸ್ – ಸಕ್ರಿಯ ಪ್ರಕರಣಗಳ ಸಂಖ್ಯೆ 3,545ಕ್ಕೆ ಏರಿಕೆ

ಈ ಸಂದರ್ಭದಲ್ಲಿ ಸಂಸ್ಥೆಯ ಮುಖ್ಯಸ್ಥರು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಯಾವ್ಯಾವ ವಿಭಾಗದವರು, ಯಾವ್ಯಾವ ಕೆಲಸಗಳನ್ನು ಮಾಡಬೇಕು ಎಂದು ಸೂಕ್ತ ಸೂಚನೆಗಳನ್ನು ನೀಡಿದರು.

ಪ್ರಧಾನಿಯವರ ಆಗಮನದ ಹಿನ್ನೆಲೆಯಲ್ಲಿ ಎಲ್ಲಾ ವ್ಯವಸ್ಥೆಯೂ ಸಮರ್ಪಕವಾಗಿರಬೇಕು. ಇದರಲ್ಲಿ ಯಾವುದೇ ಲೋಪದೋಷಗಳಿಗೆ ಆಸ್ಪದ ಕೊಡಬಾರದು. 250 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ಬೇಸ್ ಕ್ಯಾಂಪಸ್, ಎನ್‌ಇಪಿ ಅಳವಡಿಕೆ ದೃಷ್ಟಿಯಿಂದಲೂ ಗಮನ ಸೆಳೆಯುತ್ತಿದೆ. ಮೋದಿಯವರ ಭೇಟಿಯ ಸಂದರ್ಭದಲ್ಲಿ ಇದನ್ನು ಕೂಡ ಬಿಂಬಿಸಲು ಯೋಜಿಸಬೇಕು ಎಂದು ಸಚಿವರು ತಾಕೀತು ಮಾಡಿದರು. ಇದನ್ನೂ ಓದಿ: ಸೈನಿಕರ ಪರವಾಗಿ ಒಮ್ಮೆಯೂ ಕಾಂಗ್ರೆಸ್ ದನಿ ಎತ್ತಲಿಲ್ಲ ನಕಲಿ ಗಾಂಧಿಗಳಿಗೆ ED ನೋಟಿಸ್ ಕೊಟ್ಟಾಗ ಬೀದಿಗೆ ಬಂದಿದೆ: ಬಿಜೆಪಿ

ಐಟಿಐಗಳ ಲೋಕಾರ್ಪಣೆಗೆ ಮಾಡಿಕೊಂಡಿರುವ ವ್ಯವಸ್ಥೆಗಳನ್ನು ವೀಕ್ಷಿಸಿದ ಸಚಿವರು, ಪ್ರಯೋಗಾಲಯಗಳಲ್ಲಿ ಇರುವ ಆಧುನಿಕ ಸಾಧನಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.

Share This Article
Leave a Comment

Leave a Reply

Your email address will not be published. Required fields are marked *