ಆ.2 ರಿಂದ 15ರವರೆಗೆ ರಾಷ್ಟ್ರಧ್ವಜವನ್ನು ನಿಮ್ಮ ಪ್ರೊಫೈಲ್ ಚಿತ್ರವಾಗಿ ಬಳಸಿ: ಮೋದಿ

Public TV
2 Min Read
ನವದೆಹಲಿ: ಆ.2 ರಿಂದ 15ರವರೆಗೆ ರಾಷ್ಟ್ರಧ್ವಜವನ್ನು ಸಾಮಾಜಿಕ ಜಾಲತಾಣದ ನಿಮ್ಮ ಪ್ರೊಫೈಲ್ ಚಿತ್ರಗಳಾಗಿ ಬಳಸಿಕೊಳ್ಳಿ ಎಂದು ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ.
ಮನ್ ಕಿ ಬಾತ್‍ನಲ್ಲಿ ಮಾತನಾಡಿದ ಅವರು, ಇದು ಆಜಾದಿ ಕಾ ಅಮೃತ್ ಮಹೋತ್ಸವದ ಒಂದು ಭಾಗವಾಗಿದೆ. ಇದನ್ನು ಈ ವರ್ಷ ಸ್ವಾತಂತ್ರ್ಯದ 75ನೇ ವಾರ್ಷಿಕೋತ್ಸವದ ಪೂರ್ವಭಾವಿಯಾಗಿ ಹಲವಾರು ಕಾರ್ಯಕ್ರಮಗಳು ಹಾಗೂ ಯೋಜನೆಗಳನ್ನು ಆಚರಿಸಲಾಗುತ್ತಿದೆ. ಅಷ್ಟೇ ಅಲ್ಲದೇ ಇದು ಸಾಮೂಹಿಕ ಆಂದೋಲನವಾಗಿ ಬದಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಸಾಮಾಜಿಕ ಜಾಲತಾಣದಗಳಲ್ಲಿ ಪ್ರೋಫೈಲ್ ಪಿಕ್ಚರ್ ಡ್ರೈವ್ ಅನ್ನು ಪ್ರಾರಂಭಿಸಲು ಆ.2ಅನ್ನು ಆಯ್ಕೆ ಮಾಡಿದ್ದೇವೆ. ಈ ದಿನಾಂಕವು ನಮ್ಮ ರಾಷ್ಟ್ರಧ್ವಜವನ್ನು ವಿನ್ಯಾಸಗೊಳಿಸಿದ ಪಿಂಗಲ್ ವೆಂಕಯ್ಯ ಅವರ ಜನ್ಮದಿನವಾಗಿದೆ ಎಂದರು.
ಆಗಸ್ಟ್ 13 ರಿಂದ 15ರ ವರೆಗೆ ಹರ್ ಘರ್ ತಿರಂಗಾ ಎನ್ನುವ ಆಂದೋಲವನ್ನು ಆಯೋಜಿಸಲಾಗಿದೆ. ಈ ಹಿನ್ನೆಲೆಯಲ್ಲಿ ನಮ್ಮ ಮನೆಗಳಲ್ಲಿ ರಾಷ್ಟ್ರಧ್ವಜವನ್ನು ಹಾರಿಸುವ ಮೂಲಕ ಈ ಆಂದೋಲನವನ್ನು ಮುಂದುವರಿಸೋಣ ಎಂದು ತಿಳಿಸಿದರು. ಇದನ್ನೂ ಓದಿ: ಆರೋಪಿಗಳೊಂದಿಗೆ ಅಜಿತ್‍ಗೆ ಸಂಪರ್ಕವಿದೆ – ಆದಷ್ಟು ಬೇಗ ಇತರ ಆರೋಪಿಗಳನ್ನು ಬಂಧಿಸುತ್ತೇವೆ: ಶಶಿಕುಮಾರ್
ಈ ಮಹೋತ್ಸವದ ಅಂಗವಾಗಿ ಸಮಾಜದ ಎಲ್ಲಾ ವರ್ಗದ ಜನರು ದೇಶದಾದ್ಯಂತ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದಾರೆ. ಭಾರತವು ತನ್ನ ಸ್ವಾತಂತ್ರ್ಯದ 75 ವರ್ಷಗಳನ್ನು ಪೂರ್ಣಗೊಳಿಸಿದಾಗ, ನಾವೆಲ್ಲರೂ ಅದ್ಭುತ ಮತ್ತು ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿದ್ದೇವೆ ಎಂದು ಅಭಿಪ್ರಾಯಪಟ್ಟರು. ಇದನ್ನೂ ಓದಿ: ಭಾವನಾತ್ಮಕ ವಿಷಯ ಕೆದಕಿ ಕೆಲ ಪಕ್ಷಗಳು ರಾಜಕೀಯ ಲಾಭ ಪಡೆಯಲು ಹೊರಟಿವೆ: ಹೆಚ್‍ಡಿಕೆ ಕಿಡಿ

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *