40ಕ್ಕೂ ಅಧಿಕ ಪ್ರಯಾಣಿಕರಿದ್ದ ಬಸ್ಸಿನಲ್ಲಿ ಬೆಂಕಿ.!

Public TV
1 Min Read

ಬೆಂಗಳೂರು: ಪ್ರಯಾಣಿಕರನ್ನು ಹೊತ್ತು ಬರುತ್ತಿದ್ದ ಖಾಸಗಿ ಬಸ್ಸಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಬಸ್ ಸಂಪೂರ್ಣ ಭಸ್ಮವಾಗಿರುವ ಘಟನೆ ತಮಿಳುನಾಡಿನ ಹೊಸೂರು ಸಮೀಪ ನಡೆದಿದೆ.

ಹೊಸೂರು ಕೃಷ್ಣಗಿರಿ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 7ರಲ್ಲಿ ತಮಿಳುನಾಡಿನ ತೂಪುರ್ ಬಳಿ ಈ ಅವಘಡ ಸಂಭವಿಸಿದೆ. ಇದು ಕೆ.ಪಿ.ಎನ್ ಸಂಸ್ಥೆಗೆ ಸೇರಿದ ಖಾಸಗಿ ಬಸ್ಸಾಗಿದ್ದು, ಪ್ರಯಾಣಿಕರನ್ನು ಕರೆದುಕೊಂಡು ಮಧುರೈನಿಂದ ಬೆಂಗಳೂರಿಗೆ ಬರುತ್ತಿತ್ತು.

ಈ ಸಮಯದಲ್ಲಿ ಬಸ್ ಇಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬಸ್ ಚಾಲಕನ ಗಮನಕ್ಕೆ ಬಂದಿದೆ. ತಕ್ಷಣ ಬಸ್ ನಿಲ್ಲಿಸಿ ಪ್ರಯಾಣಿಕರನ್ನು ಇಳಿಸಿದ್ದಾನೆ. ನಂತರ ಬಸ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಈ ಬಸ್ಸಿನಲ್ಲಿ ಸುಮಾರು 40ಕ್ಕೂ ಅಧಿಕ ಮಂದಿ ಪ್ರಯಾಣಿಸುತ್ತಿದ್ದರು. ಸದ್ಯ ಚಾಲಕನ ಸಮಯ ಪ್ರಜ್ಞೆಯಿಂದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.

ಈ ಘಟನೆಯಿಂದ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತವಾಗಿದ್ದು, ಸ್ಥಳಕ್ಕೆ ಕೃಷ್ಣಗಿರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಕೃಷ್ಣಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *