ರಾಷ್ಟ್ರೀಯ ಹೆದ್ದಾರಿಯಲ್ಲಿ ಹೊತ್ತಿ ಉರಿದ ಖಾಸಗಿ ಬಸ್‌ – ತಪ್ಪಿದ ಅನಾಹುತ

1 Min Read

ನೆಲಮಂಗಲ: ಬೆಂಗಳೂರಿನಿಂದ ಕಲಬುರಗಿಗೆ ಹೊರಟಿದ್ದ ಖಾಸಗಿ ಬಸ್‌ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದು ಬೆಂಕಿಗೆ (Bus Fire) ಆಹುತಿಯಾಗಿರುವ ಘಟನೆ ನಡೆದಿದೆ.

ತುಮಕೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 48ರ (Tumkur To Bengaluru National Highway) ಹನುಮಂತಪುರ ಗೇಟ್ ಬಳಿ ಸಂಜನಾ ಟ್ರಾವೆಲ್ಸ್‌ಗೆ ಸೇರಿದ ಖಾಸಗಿ ಬಸ್‌ ಹೊತ್ತಿ ಉರಿದಿದೆ. ಘಟನೆ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಳಿಕ ನೆಲಮಂಗಲ ಸಂಚಾರ ಪೊಲೀಸರು (Nelamangala Traffic Police) ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಕೆಲ ದಿನಗಳ ಹಿಂದೆಯಷ್ಟೇ ಬೆಂಗಳೂರಿನಿಂದ ರಾಯಚೂರಿಗೆ (Raichur) ಹೊರಟಿದ್ದ ಬಸ್‌ ಅನಂತಪುರದ ಬಳಿ ಚಲಿಸುತ್ತಿದ್ದಾಗ ಬೆಂಕಿಗೆ ಆಹುತಿಯಾದ ಘಟನೆ ನಡೆದಿತ್ತು. ಅದೃಷ್ಟವಶಾತ್‌ ಬಸ್‌ನಲ್ಲಿದ್ದ 36 ಮಂದಿ ಪ್ರಯಾಣಿಕರು ಸೇಫ್‌ ಆಗಿದ್ದರು. ಇದಕ್ಕೂ ಮುನ್ನ ಬೆಂಗಳೂರಿನಿಂದ ಗೋಕರ್ಣಕ್ಕೆ ಹೊರಟಿದ್ದ ಸೀಬರ್ಡ್‌ ಸ್ಲೀಪರ್‌ ಬಸ್‌ ಬೆಂಕಿಗೆ ಆಹುತಿಯಾಗಿತ್ತು. ಈ ವೇಳೆ 29 ಜನ ಪ್ರಯಾಣಿಸುತ್ತಿದ್ದರು. ಆದ್ರೆ ಈ ಪ್ರಕರಣದಲ್ಲಿ ಪ್ರಾಣಹಾನಿ ಸಂಭವಿಸಿತ್ತು. ಇದೀಗ ಮತ್ತೊಂದು ದುರಂತ ಸಂಭವಿಸಿದ್ದು, ಅದೃಷ್ಟವಶಾತ್‌ ಯಾವುದೇ ಪ್ರಾಣಹಾನಿಯಾಗಿಲ್ಲ.

ಕಲಬುರಗಿಗೆ ಹೊರಿಟಿದ್ದ ಬಸ್‌
ಬೆಂಕಿಗೆ ಆಹುತಿಯಾದ ಬಸ್‌ ಬೆಂಗಳೂರಿನಿಂದ ಕಲಬುರಗಿಗೆ ಹೊರಟಿತ್ತು. ಹನುಮಂತಪುರ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗುತ್ತಿದ್ದಾಗ ಬೆಳಗ್ಗಿನ ಜಾವ 3 ಗಂಟೆ ಸುಮಾರಿಗೆ ವಿದ್ಯುತ್‌ ಕಂಬಕ್ಕೆ ಡಿಕ್ಕಿಯಾಗಿ ಬಸ್‌ ಹೊತ್ತಿ ಉರಿದಿದೆ. ಬಸ್ಸಿನಲ್ಲಿ ಚಾಲಕರು ಸೇರಿದಂತೆ ಸುಮಾರು 40 ಮಂದಿ ಪ್ರಯಾಣಿಕರು ಇದ್ದರು. ಎಲ್ಲರೂ ಪಾರಾಗಿದ್ದಾರೆ.

ವಸ್ತುಗಳು ಸುಟ್ಟು ಭಸ್ಮ
ಇನ್ನೂ ಬಸ್‌ ಲಗೇಜ್‌ ಬಾಕ್ಸ್‌ನಲ್ಲಿ ಇಟ್ಟಿದ್ದ ವಸ್ತುಗಳೆಲ್ಲ ಸುಟ್ಟು ಭಸ್ಮ ಆಗಿವೆ. ಬೆಂಕಿ ದೊಡ್ಡ ಗಾತ್ರದಲ್ಲಿ ವ್ಯಾಪಿಸಿದ ಹಿನ್ನೆಲೆ ಬೆಲೆ ಬಾಳುವ ವಸ್ತುಗಳೆಲ್ಲ ಹೊತ್ತಿ ಉರಿದಿದ್ದು, ಪ್ರಯಾಣಿಕರು ಕಣ್ಣೀರು ಹಾಕಿದ್ದಾರೆ.

Share This Article