ಯಾದಗಿರಿಯಲ್ಲಿ ಖಾಸಗಿ ಬಸ್ ಪಲ್ಟಿ – ಓರ್ವ ಸಾವು, ಹಲವರಿಗೆ ಗಂಭೀರ ಗಾಯ

Public TV
1 Min Read

ಯಾದಗಿರಿ: ಖಾಸಗಿ ಬಸ್ ಪಲ್ಟಿಯಾಗಿ (Overturn) ಓರ್ವ ಸಾವನ್ನಪ್ಪಿ, ಹಲವರಿಗೆ ಗಂಭೀರ ಗಾಯವಾಗಿರುವ ಘಟನೆ ಯಾದಗಿರಿ (Yadgiri) ಜಿಲ್ಲೆಯ ಸುರಪುರ (Surapura) ತಾಲೂಕಿನ ಕವಡಿಮಟ್ಟಿ ಗ್ರಾಮದ ಬಳಿ ಭಾನುವಾರ ಮುಂಜಾನೆ ನಡೆದಿದೆ.

ಖಾಸಗಿ ಬಸ್‌ನಲ್ಲಿ 30ಕ್ಕೂ ಹೆಚ್ಚು ಜನ ಪ್ರಯಾಣಿಕರಿದ್ದು, ಬಸ್ ಬೆಂಗಳೂರಿನಿಂದ (Bengaluru) ಸುರಪುರ ಮಾರ್ಗವಾಗಿ ಹುಮ್ನಾಬಾದ್(Humnabad) ಕಡೆ ಚಲಿಸುತ್ತಿತ್ತು. ಬಸ್ ಓವರ್ ಸ್ಪೀಡ್ (Over Speed) ಇದ್ದ ಕಾರಣ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕವಡಿಮಟ್ಟಿ ಬಳಿ ಪಲ್ಟಿಯಾಗಿದೆ. ಬಸ್ ಪಲ್ಟಿಯಾದ ಸುದ್ದಿ ತಿಳಿದ ಗ್ರಾಮಸ್ಥರು ಸ್ಥಳಕ್ಕೆ ದೌಡಾಯಿಸಿ ಬಸ್‌ನಲ್ಲಿ ಸಿಲುಕಿದ್ದ ಪ್ರಯಾಣಿಕರನ್ನು ಹೊರ ತೆಗೆದಿದ್ದಾರೆ. ಬಸ್ ಪಲ್ಟಿಯ ರಭಸಕ್ಕೆ ಕೆಲವರಿಗೆ ಗಂಭೀರ ಗಾಯಗಳಾಗಿದ್ದು, ಸ್ಥಿತಿ ಚಿಂತಾಜನಕವಾಗಿದೆ. ಇದನ್ನು ಓದಿ: ಕೊಡೇಕಲ್‌ನಲ್ಲಿ ಕಲ್ಲು ತೂರಾಟ ಪ್ರಕರಣ – ಸುರಪುರ ಕ್ಷೇತ್ರದಲ್ಲಿ ನಿಷೇಧಾಜ್ಞೆ ವಿಸ್ತರಣೆ 

ಸುರಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪಲ್ಟಿಯಾದ ಬಸ್ ತೆರವುಗೊಳಿಸಿದ್ದಾರೆ. ಘಟನೆಯಲ್ಲಿ ಗಾಯಗೊಂಡಿದ್ದವರನ್ನು ಸ್ಥಳೀಯರ ನೆರವಿನೊಂದಿಗೆ ಸುರಪುರ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನು ಓದಿ: ಬಂಡೀಪುರಕ್ಕೆ ಪ್ರಧಾನಿ ಮೋದಿ ಆಗಮನ

Share This Article