ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ – 28 ಪ್ರಯಾಣಿಕರಿಗೆ ಗಾಯ

Public TV
1 Min Read

ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ (Bus) ಪಲ್ಟಿಯಾದ ಘಟನೆ ಶಿವಮೊಗ್ಗ (Shivamogga)  ಜಿಲ್ಲೆಯ ಸಾಗರ (Sagara) ತಾಲೂಕಿನ ಆನಂದಪುರ ಸಮೀಪದ ಮುಂಬಾಳು ತಿರುವಿನಲ್ಲಿ ನಡೆದಿದೆ.

ಖಾಸಗಿ ಬಸ್ ಸಾಗರದಿಂದ ಶಿವಮೊಗ್ಗ ಮಾರ್ಗವಾಗಿ ಧರ್ಮಸ್ಥಳಕ್ಕೆ ತೆರಳುತಿತ್ತು. ಈ ವೇಳೆ ಅವಘಡ ಸಂಭವಿಸಿದೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಇದನ್ನೂ ಓದಿ: ಹಾವೇರಿಯಲ್ಲಿ 7.91 ಲಕ್ಷ ರೂ. ಮೌಲ್ಯದ ಗಾಂಜಾ ಜಪ್ತಿ – ನಾಲ್ವರು ಆರೋಪಿಗಳು ಅರೆಸ್ಟ್

ಬಸ್ಸಿನಲ್ಲಿದ್ದ ಸುಮಾರು 28 ಮಂದಿಗೆ ಗಾಯವಾಗಿದ್ದು, ಗಾಯಾಳುಗಳಿಗೆ ಸ್ಥಳೀಯ ಆನಂದಪುರ ಹಾಗು ಸಾಗರದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಸ್ಥಳಕ್ಕೆ ಆನಂದಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಆನಂದಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ನವೀನ್‌ ಪಟ್ನಾಯಕ್‌ ಆಪ್ತ ವಿ.ಕೆ.ಪಾಂಡಿಯನ್‌ ಸಕ್ರಿಯ ರಾಜಕಾರಣಕ್ಕೆ ವಿದಾಯ

Share This Article