ಖಾಸಗಿ ಬಸ್ ಪಲ್ಟಿ- ಮೂವರ ದುರ್ಮರಣ, 38 ಮಂದಿಗೆ ಗಾಯ

Public TV
1 Min Read

ಚಿತ್ರದುರ್ಗ: ಖಾಸಗಿ ಬಸ್ಸೊಂದು (Private Bus) ಪಲ್ಟಿಯಾಗಿ ಮೂವರು ಪ್ರಯಾಣಿಕರು ಸ್ಥಳದಲ್ಲೇ ದುರ್ಮರಣಕ್ಕೀಡಾಗಿರುವ ಘಟನೆ ಚಿತ್ರದುರ್ಗ (Chitradurga) ಜಿಲ್ಲೆ ಹೊಳಲ್ಕೆರೆ ಪಟ್ಟಣದ ಕಣಿವೆ ಬಳಿ ನಡೆದಿದೆ.

ಬೆಂಗಳೂರಿನಿಂದ (Bengaluru) ಶಿವಮೊಗ್ಗಕ್ಕೆ ತೆರಳುತ್ತಿದ್ದ ಖಾಸಗಿ ಸ್ಲೀಪರ್‌ಕೋಚ್ ಬಸ್ ಬೆಳಗ್ಗಿನ ಜಾವ 4:30ರ ಸಮಯದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ಬಸ್‌ನಲ್ಲಿ 50 ಜನ ಪ್ರಯಾಣ ಬೆಳೆಸಿದ್ದು, ಬಸ್ ಪಲ್ಟಿಯಿಂದಾಗಿ 38 ಜನರು ಗಾಯಗೊಂಡಿದ್ದಾರೆ. ಇಬ್ಬರು ಪ್ರಯಾಣಿಕರ ಸ್ಥಿತಿ ಗಂಭೀರವಾಗಿದೆ. ಉಳಿದ ಗಾಯಾಳುಗಳಿಗೆ ಹೊಳಲ್ಕೆರೆ (Holalkere) ತಾಲೂಕು ಆಸ್ಪತ್ರೆಯಲ್ಲಿ ನೆಲದ ಮೇಲೆ ಬೆಡ್ ಹಾಕಿ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ಮುಂಜಾನೆ ಬೆಂಗಳೂರಿನ ಟೈಯರ್ ಗೋಡೌನ್‍ನಲ್ಲಿ ಅಗ್ನಿ ಅವಘಡ

ಮೃತ ಮೂವರ ದೇಹಗಳನ್ನು ಶವಗಾರಕ್ಕೆ ಶಿಫ್ಟ್ ಮಾಡಲಾಗಿದೆ. ಘಟನಾ ಸ್ಥಳಕ್ಕೆ ಹೊಳಲ್ಕೆರೆ ಪಿಎಸ್‌ಐ ಸುರೇಶ್ ಭೇಟಿ ನೀಡಿ, ಪರಿಶೀಲನೆ ನೆಡೆಸಿದ್ದಾರೆ. ಈ ಘಟನೆ ಹೊಳಲ್ಕೆರೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇದನ್ನೂ ಓದಿ: Exclusive: ಈ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಹಿನ್ನಡೆಯಾದ್ರೆ ಸಿದ್ದರಾಮಯ್ಯ ತಲೆದಂಡ ಆಗುತ್ತಾ? – ಡಿಕೆಶಿ ಹೇಳಿದ್ದೇನು?

Share This Article