ಮೋಟೆಬೆನ್ನೂರಿನಲ್ಲಿ ಖಾಸಗಿ ಬಸ್‌ ಪಲ್ಟಿ – ಇಬ್ಬರು ಸಾವು, 6 ಜನರಿಗೆ ಗಂಭೀರ ಗಾಯ

Public TV
1 Min Read

ಹಾವೇರಿ: ಚಾಲಕನ (Driver) ನಿಯಂತ್ರಣ ತಪ್ಪಿ ಖಾಸಗಿ ಬಸ್ (Private Bus) ಪಲ್ಟಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿ 6 ಜನ ಗಂಭೀರವಾಗಿ ಗಾಯಗೊಂಡ ಘಟನೆ ಬ್ಯಾಡಗಿ (Byadagi) ತಾಲೂಕಿನ ಮೋಟೆಬೆನ್ನೂರಿನಲ್ಲಿ (Motebennur) ಸಾಗುವ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ನಡೆದಿದೆ.

ಅರ್ನವಿ(11), ಯಶ್(20) ಸ್ಥಳದಲ್ಲೇ ಮೃತಪಟ್ಟಿದ್ದು, 29 ಜನ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮಹಾರಾಷ್ಟ್ರದ ಸಾಂಗ್ಲಿಯಿಂದ ತಮಿಳುನಾಡು ಕಡೆ ಸಂಚರಿಸುತ್ತಿತ್ತು. ಮೊಟೇಬೆನ್ನೂರು ಗ್ರಾಮದ ಬಳಿ‌ ಬಸ್ ಮುಂದೆ ಕಾರು ಬಂದಿದೆ. ಕಾರಿಗೆ ಗುದ್ದುವುದನ್ನು ತಪ್ಪಿಸಲು ಹೋಗಿ ಬಸ್ ಚಾಲಕ ಬ್ರೇಕ್ ಹಾಕಿದ್ದಾನೆ. ಇದನ್ನೂ ಓದಿ: ರಾಜ್ಯದಲ್ಲಿ ಮುಂದುವರಿದ ವರುಣಾರ್ಭಟ ಹಾಸನದ ಕೆಲವು ತಾಲೂಕಿನ, ಉಡುಪಿಯ ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ

ಪರಿಣಾಮ ಡಿವೈಡರಿಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಬಸ್ ಬಿದ್ದಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬ್ಯಾಡಗಿ ಪೊಲೀಸರು ಹಾಗೂ ಎಸ್‌ಪಿ ಯಶೋದಾ ವಂಟಗೋಡಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸತತ ಒಂದೂವರೆ ಗಂಟೆಗಳ ಕಾರ್ಯಚರಣೆ ನಡೆಸಿ ಬಸ್ ಮೇಲಕ್ಕೆ ಎತ್ತುವ ಕಾರ್ಯ ಮಾಡಲಾತು. ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿ ಗಾಯಾಳುಗಳ ರಕ್ಷಣಾ ಕಾರ್ಯ ಮಾಡಿದ್ದು ಜಿಲ್ಲಾಸ್ಪತ್ರೆಗೆ ರವಾನೆ ಮಾಡಿದರು.

ಹಲವು ಪುಟ್ಟ ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಬ್ಯಾಡಗಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Share This Article