ಯಾದಗಿರಿಯಲ್ಲಿ ಖಾಸಗಿ ಬಸ್ ಪಲ್ಟಿ – ಇಬ್ಬರು ಪ್ರಯಾಣಿಕರ ಸಾವು, 7 ಮಂದಿ ಗಂಭೀರ

Public TV
1 Min Read

ಯಾದಗಿರಿ: ಖಾಸಗಿ ಬಸ್ ಪಲ್ಟಿಯಾಗಿ ಇಬ್ಬರು ಪ್ರಯಾಣಿಕರು ಮೃತಪಟ್ಟು, 7 ಜನ ಪ್ರಯಾಣಿಕರ ಸ್ಥಿತಿ ಚಿಂತಾಜನಕವಾಗಿರುವ ಘಟನೆ ಯಾದಗಿರಿ (Yadagiri) ಜಿಲ್ಲೆಯ ಶಹಾಪುರ (Shahapura) ತಾಲೂಕಿನ ಹತ್ತಿಗುಡೂರು ಬಳಿ ನಡೆದಿದೆ.

ಕಲಬುರಗಿಯಿಂದ ಬೆಂಗಳೂರು ಕಡೆ ತೆರಳುತ್ತಿದ್ದ ಬಸ್‌ನಲ್ಲಿ (Bus) 37 ಜನ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಹತ್ತಿಗುಡೂರು ಬಳಿಯ ಹಳ್ಳದ ಸೇತುವೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ. ಘಟನೆಯ ಪರಿಣಾಮ ಸ್ಥಳದಲ್ಲೇ ಇಬ್ಬರು ಪ್ರಯಾಣಿಕರು ಮೃತಪಟ್ಟಿದ್ದಾರೆ. ಇದನ್ನೂ ಓದಿ: ರಾಜ್ಯದ ಹಲವೆಡೆ ಮುಂದಿನ ಮೂರು ಗಂಟೆಗಳ ಕಾಲ ಭಾರೀ ಮಳೆಯ ಎಚ್ಚರಿಕೆ

ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಸುರಪುರ ಪೊಲೀಸರು ಬಸ್‌ನಲ್ಲಿ ಸಿಲುಕಿದ್ದ ಗಾಯಾಳುಗಳನ್ನು ಹೊರತೆಗೆಯಲು ಹರಸಾಹಸ ಪಟ್ಟಿದ್ದಾರೆ. ಸ್ಥಳೀಯರ ಸಹಾಯದಿಂದ ಗಾಯಾಳುಗಳನ್ನ ಬಸ್‌ನಿಂದ ಹೊರತೆಗೆದು ಚಿಕಿತ್ಸೆಗಾಗಿ ಶಹಾಪುರ ತಾಲೂಕು ಆಸ್ಪತ್ರೆಗೆ ದಾಖಲಿಸಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಕೆಲ ಗಾಯಳುಗಳನ್ನು ಚಿಕಿತ್ಸೆಗಾಗಿ ಕಲಬುರಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಹಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.  ಇದನ್ನೂ ಓದಿ: ಸೋಮವಾರದಿಂದ ಅಮುಲ್‌ ಹಾಲಿನ ದರದಲ್ಲಿ 2 ರೂ. ಹೆಚ್ಚಳ

Share This Article