ಕಮಲ್ ಹಾಸನ್ ವಿರುದ್ಧ ಕನಕಪುರ ಕೋರ್ಟ್‌ನಲ್ಲಿ ಖಾಸಗಿ ದೂರು – ಜು.5ಕ್ಕೆ ವಿಚಾರಣೆ

Public TV
1 Min Read

ರಾಮನಗರ: ಕನ್ನಡದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ನಟ ಕಮಲ್ ಹಾಸನ್ (Kamal Haasan) ವಿರುದ್ಧ ಕನಕಪುರದ (Kanakapura) ಎರಡನೇ ಅಪರ ಸಿವಿಲ್ ಹಾಗೂ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ದೂರು ದಾಖಲಾಗಿದೆ.

ಶ್ರೀರಾಮ ಸೇನೆ ಜಿಲ್ಲಾಧ್ಯಕ್ಷ ನಾಗಾರ್ಜುನ್ ಗೌಡ ಎಂಬುವವರು ಕೋರ್ಟ್‌ಗೆ ಖಾಸಗಿ ದೂರು ದಾಖಲು ಮಾಡಿದ್ದಾರೆ. ಕನ್ನಡದ (Kannada) ಬಗ್ಗೆ ಕಮಲ್ ಹಾಸನ್ ಅವಹೇಳನ ಮಾಡಿರೋದು ವೈಯಕ್ತಿಕವಾಗಿ ನೋವು ತಂದಿದೆ. ಜೊತೆಗೆ ಮಾನಸಿಕವಾಗಿ ಖಿನ್ನತೆಯನ್ನ ತರಿಸಿದೆ. ಕನ್ನಡಕ್ಕೆ ಅಪಮಾನ ಮಾಡಿದ ಬಗ್ಗೆ ಕ್ಷಮೆ ಕೇಳದೇ ಉದ್ಧಟತನ ತೋರಿದ್ದಾರೆ ಎಂದು ದಾವೆಹೂಡಿರೋ ನಾಗಾರ್ಜುನ್, ಪ್ರಕರಣದ ಸಾಕ್ಷಿಯಾಗಿ ನಟ ಶಿವರಾಜ್ ಕುಮಾರ್ ರನ್ನ ಪರಿಗಣಿಸುವಂತೆ ಕೋರ್ಟ್‌ಗೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಏಷ್ಯಾ ಕಪ್‌ ಟೂರ್ನಿಗೆ ಮುಹೂರ್ತ ಫಿಕ್ಸ್‌; ಸೆ.7ಕ್ಕೆ ಭಾರತ-ಪಾಕ್‌ ಮುಖಾಮುಖಿ

ನಾಗಾರ್ಜುನ ಗೌಡ ಪರ ವಕೀಲ ವಿನೋದ್ ಎಂಬುವವರು ಕೋರ್ಟ್ನಲ್ಲಿ ಈ ಬಗ್ಗೆ ವಾದ ಮಂಡಿಸಿದ್ದು, ಪ್ರಕರಣವನ್ನ ಜುಲೈ 5ಕ್ಕೆ ವಿಚಾರಣೆಗೆ ಮುಂದೂಡಿ ಕೋರ್ಟ್ ಆದೇಶಿಸಿದೆ. ಕನಕಪುರದ 2ನೇ ಅಪರ ಸಿವಿಲ್ ಹಾಗೂ ಜೆಎಂಎಫ್ ಸಿ ನ್ಯಾಯಾಲಯದಲ್ಲಿ ಈ ಪ್ರಕರಣದ ವಿಚಾರಣೆ ನಡೆಸಲಾಗುತ್ತಿದೆ. ಇದನ್ನೂ ಓದಿ: ಬೈಕ್ ಟ್ಯಾಕ್ಸಿಗೆ ಕೇಂದ್ರದಿಂದ ಅಸ್ತು – ಮಾರ್ಗಸೂಚಿ ಬಿಡುಗಡೆ

Share This Article