ಮರಕ್ಕೆ ಡಿಕ್ಕಿಯಾಗಿ ಖಾಸಗಿ ವಿಮಾನ ಪತನ

1 Min Read

ರಾಯ್ಪುರ್‌: ಖಾಸಗಿ ವಿಮಾನವೊಂದು ಮರಕ್ಕೆ ಡಿಕ್ಕಿಯಾಗಿ ಪತನಗೊಂಡ ಘಟನೆ ಛತ್ತೀಸ್‌ಗಢದ ಜಶ್‌ಪುರ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ನಡೆದಿದೆ. ಅಪಘಾತದ ವೇಳೆ ವಿಮಾನ ನೆಲದಿಂದ ಕೇವಲ 30 ಅಡಿ ಎತ್ತರದಲ್ಲಿ ಹಾರುತ್ತಿತ್ತು ಎಂದು ವರದಿಯಾಗಿದೆ.

ನಾರಾಯಣಪುರ ಪೊಲೀಸ್ ಠಾಣೆ ಪ್ರದೇಶದ ಖುರಾಸಗಢ ಗ್ರಾಮದ ಬಳಿಯ ರತನ್‌ಪಹ್ಲಿ ಅರಣ್ಯದಲ್ಲಿ ಈ ಅವಘಡ ಸಂಭವಿಸಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ವಿಮಾನವು ನೆಲದಿಂದ ಸುಮಾರು 30 ಅಡಿ ಎತ್ತರದಲ್ಲಿ ಹಾರುತ್ತ, ಮರಕ್ಕೆ ಡಿಕ್ಕಿಯಾಗಿದೆ. ವಿಮಾನ ಪತನಗೊಂಡ ಸ್ಥಳದಲ್ಲಿ ದಟ್ಟ ಹೊಗೆ ಆವರಿಸಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಇದನ್ನೂ ಓದಿ: ವಿಜಯಪುರದ ಮಂಗಳೂರಿನಲ್ಲಿ ಖಾಸಗಿ ವಿಮಾನ ಪತನ

ಅಪಘಾತಕ್ಕೂ ಕೆಲವೇ ಕ್ಷಣಗಳ ಮುನ್ನ ಭಾರೀ ಕೆಳಮಟ್ಟದಲ್ಲಿ ಸಣ್ಣ ಸಿಂಗಲ್-ಎಂಜಿನ್ ಪ್ರೊಪೆಲ್ಲರ್ ವಿಮಾನ ಕೆಳಕ್ಕೆ ಹಾರುತ್ತಿರುವ ದೃಶ್ಯಗಳು ಕ್ಯಾಮೆರಾದಲ್ಲಿ ಸೆರೆಯಾಗಿದೆ. ರಕ್ಷಣಾ ತಂಡ ಸ್ಥಳಕ್ಕೆ ಧಾವಿಸಿ, ಪರಿಶೀಲನೆ ನಡೆಸುತ್ತಿದೆ.

ಅಪಘಾತವನ್ನು ಇನ್ನೂ ಅಧಿಕೃತವಾಗಿ ದೃಢೀಕರಿಸಿಲ್ಲ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಅಸ್ಸಾಂನಲ್ಲಿ ಸುಖೋಯ್ Su-30 ವಿಮಾನ ಪತನ – ಇಬ್ಬರು ವಾಯುಪಡೆಯ ಪೈಲಟ್‌ಗಳು ಹುತಾತ್ಮ

Share This Article