ಅಮೆರಿಕಗೆ ತೆರಳಲು ನೋ ಕ್ಲಿಯರೆನ್ಸ್ – ಪ್ರಿಯಾಂಕ್ ಖರ್ಗೆಗೆ ಬಿಗ್‌ ಶಾಕ್‌

Public TV
1 Min Read

ಬೆಂಗಳೂರು: ಪ್ಯಾರಿಸ್ (Paris) ಪ್ರವಾಸ ಮುಗಿಸಿ ಅಮೆರಿಕಗೆ (USA) ತೆರಳಬೇಕಿದ್ದ ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆಗೆ (Priyank Kharge) ಶಾಕ್ ಸಿಕ್ಕಿದೆ. ಕ್ಲಿಯರೆನ್ಸ್‌ ಸಿಗದ ಕಾರಣ ಅಮೆರಿಕದಲ್ಲಿ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಬೇಕಿದ್ದ ಪ್ರಿಯಾಂಕ್ ಖರ್ಗೆಗೆ ನಿರಾಸೆಯಾಗಿದೆ.

ಅಮೆರಿಕ ಭೇಟಿಗೆ ಕ್ಲಿಯರೆನ್ಸ್ ಸಿಗದ ಬಗ್ಗೆ ಪ್ರಿಯಾಂಕ್ ಖರ್ಗೆಗೆ ಬೇಸರ ವ್ಯಕ್ತಪಡಿಸಿದ್ದಾರೆ. ಕ್ಲಿಯರೆನ್ಸ್ ನಿರಾಕರಣೆ ಮಾಡಿದ್ದು ಯಾರು ಎಂಬುದರ ಬಗ್ಗೆ ಗೊಂದಲ ಇದೆ.

ಭಾರತದಿಂದ ಕ್ಲಿಯರೆನ್ಸ್ ಸಿಕ್ಕಿಲ್ಲವೋ? ಅಥವಾ ಅಮೆರಿಕದಿಂದ ಸಿಕ್ಕಿಲ್ಲವಾ ಎಂಬ ಬಗ್ಗೆ ಗೊಂದಲದಲ್ಲಿದ್ದು, ಕರ್ನಾಟಕಕ್ಕೆ ವಾಪಸ್ ಆದ ಬಳಿಕ ಪ್ರಿಯಾಂಕ್ ಖರ್ಗೆ ಮಹತ್ವದ ಸುದ್ದಿಗೋಷ್ಠಿ ನಡೆಸುವ ಸಾಧ್ಯತೆಯಿದೆ.

ಐಟಿ ಬಿಟಿಗೆ ಸಂಬಂಧಪಟ್ಟಂತೆ ಪ್ರಿಯಾಂಕ್ ಖರ್ಗೆ ಬೋಸ್ಟನ್, ಸ್ಯಾನ್‌ಫ್ರಾನ್ಸಿಸ್ಕೋ ನಗರಗಳಲ್ಲಿ ಆಯೋಜನೆಗೊಂಡಿದ್ದ ಕಾನ್ಫರೆನ್ಸ್‌ನಲ್ಲಿ ಭಾಗವಹಿಸಬೇಕಿತ್ತು. ಪ್ರಿಯಾಂಕ್‌ ಜೊತೆ ತೆರಳಿದ್ದ ಐಎಎಸ್ ಅಧಿಕಾರಿಗೆ ಅಮೆರಿಕಗೆ ತೆರಳಲು ಕ್ಲಿಯರೆನ್ಸ್ ಸಿಕ್ಕಿದೆ.  ಪ್ಯಾರಿಸ್‌ ಏರ್‌ ಶೋನಲ್ಲಿ ಭಾಗಿಯಾಗಿದ್ದಪ್ರಿಯಾಂಕ್ ಖರ್ಗೆ ಗುರುವಾರ ಬೆಂಗಳೂರಿಗೆ ಮರಳಲಿದ್ದಾರೆ.

Share This Article