ಬಿಜೆಪಿಯಲ್ಲಿ ನಡೆಯಲಾರದ ನಾಣ್ಯಗಳು ಚಾಲ್ತಿಗೆ ಬರೋಕೆ ದಸರಾ ಬಗ್ಗೆ ಮಾತು – ಪ್ರಿಯಾಂಕ್ ಖರ್ಗೆ

Public TV
2 Min Read

-ಬಿಜೆಪಿಯವರು ಯಾರಾದ್ರು ಒಬ್ಬರು ಹೋಗಿ ಬೂಕರ್ ಪ್ರಶಸ್ತಿ ತರಲಿ ನೋಡೋಣ ಎಂದು ಸವಾಲ್

ಬೆಂಗಳೂರು: ಬಿಜೆಪಿಯಲ್ಲಿ (BJP) ನಡೆಯಲಾರದ ನಾಣ್ಯಗಳು ಚಾಲ್ತಿಗೆ ಬರೋಕೆ ದಸರಾ ಉದ್ಘಾಟನೆ (Dasara Inauguration) ವಿಚಾರವಾಗಿ ವಿವಾದ ಮಾಡುತ್ತಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದ್ದಾರೆ.

ಬಾನು ಮುಷ್ತಾಕ್ (Banu Mushtaq) ಅವರಿಂದ ದಸರಾ ಉದ್ಘಾಟನೆಗೆ ಬಿಜೆಪಿ ನಾಯಕರ ವಿರೋಧ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಈ ಬಗ್ಗೆ ಮಾಜಿ ಸಂಸದರು, ಮಾಜಿ ಬಿಜೆಪಿ ಶಾಸಕರು ನಡೆಯಲಾರದ ನಾಣ್ಯಗಳು ಚಾಲ್ತಿಯಲ್ಲಿ ಬರೋಕೆ ಹೀಗೆ ಮಾತಾಡ್ತಿದ್ದಾರೆ. ನಿಸಾರ್ ಅಹಮದ್ ದಸರಾ ಉದ್ಘಾಟನೆ ಮಾಡಿಲ್ಲವಾ? ಬಿಜೆಪಿ ಸರ್ಕಾರ ಇದ್ದಾಗ ಅಬ್ದುಲ್ ಕಲಾಂ ಅವರನ್ನ ದಸರಾಗೆ ಕರೆದಿದ್ದರು. ಅವರು ಬಂದಿರಲಿಲ್ಲ. ಕಲಾಂ, ನಿಸಾರ್ ಅಹಮದ್ ಮುಸ್ಲಿಮರು ಅಂತ ಅವರನ್ನ ಕರೆಸಿದ್ದಾ? ಅವರ ಕೊಡುಗೆ, ಸಾಮರ್ಥ್ಯ ನೋಡಿ ಕರೆಸಿದ್ದಾ? ನಮ್ಮ ನಾಡಿಗೆ ಅವರು ಕೊಡುಗೆ ಕೊಟ್ಟಿರಲಿಲ್ಲವಾ? ಕನ್ನಡ ಪರವಾಗಿ ಬಾನು ಮುಷ್ತಾಕ್ ಅವರು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ್ದಾರೆ. ಬಾನು ಮುಷ್ತಾಕ್ ಅವರ ಸಾಧನೆ ನೋಡಿ ಮೆಚ್ಚಿ ನಾವು ಉದ್ಘಾಟನೆಗೆ ಕರೆಸಿದ್ದೇವೆ. ಅದರಲ್ಲಿ ತಪ್ಪೇನಿದೆ. ಮಾಜಿ ಸಂಸದರಿಗೆ ಏನು ಇದರಲ್ಲಿ ಅಷ್ಟು ಕಳಕಳಿ ಎಂದು ಪ್ರಶ್ನೆ ಮಾಡಿದರು.ಇದನ್ನೂ ಓದಿ: ಚೀನಾದಲ್ಲಿ ಪುಟಿನ್‌ ಜೊತೆ ಒಂದೇ ಕಾರಿನಲ್ಲಿ ಮೋದಿ ಪ್ರಯಾಣ

ಟಿಪ್ಪು, ಹೈದರ್ ಅಲಿ ಇದ್ದಾಗಲು ದಸರಾ ನಡೆದಿತ್ತು. ನಿಂತಿರಲಿಲ್ಲ. ತಾಯಿ ಚಾಮುಂಡಿಯೇ ಏನು ಮಾತಾಡಲ್ಲ. ಇವರೇ ಚಾಮುಂಡೇಶ್ವರಿ ವಕ್ತಾರರ ತರಹ ಮಾತಾಡ್ತಾರೆ. ಯಾರು ಇವರೆಲ್ಲ ಮಾತಾಡೋಕೆ? ಬಿಜೆಪಿ ಅವರ ಕೊಡುಗೆ ಶೂನ್ಯ. ಕರ್ನಾಟಕ, ಭಾಷೆ, ನಾಡಿಗೆ ಕೊಡುಗೆ ಕೊಟ್ಟಿರೋರು ಉದ್ಘಾಟನೆ ಮಾಡಬಾರದು ಅಂದರೆ ಹೇಗೆ? ಇದು ಬಿಜೆಪಿ ಅವರ ರಾಜಕೀಯ ಅಷ್ಟೇ. ಇವರಿಗೆ ಕೆಲಸ ಇಲ್ಲ. ರಾಜಕೀಯ ಅಸ್ಥಿತ್ವ ಉಳಿಸಿಕೊಳ್ಳಲು ಹೀಗೆ ಮಾತಾಡ್ತಿದ್ದಾರೆ ಅಷ್ಟೆ. ಬಿಜೆಪಿ ಅವರು ಯಾರಾದ್ರು ಒಬ್ಬರು ಹೋಗಿ ಬೂಕರ್ ಪ್ರಶಸ್ತಿ ತರಲಿ ನೋಡೋಣ ಎಂದು ಸವಾಲು ಹಾಕಿದರು.

ಚಾಮುಂಡೇಶ್ವರಿ ಹಿಂದೂಗಳ ಆಸ್ತಿಯಲ್ಲ ಎಂಬ ಡಿಕೆಶಿ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಅನೇಕ ಕಡೆ ಕೋಮು ಸೌಹಾರ್ದತೆಗೋಸ್ಕರ ಒಟ್ಟಾಗಿ ಕೆಲಸ ಮಾಡ್ತಾರೆ. ಹಿಂದೂಗಳು ದರ್ಗಾಕ್ಕೆ ಹೋಗ್ತಾರೆ. ಮುಸ್ಲಿಮರು ದೇವಸ್ಥಾನಕ್ಕೆ ಹೋಗ್ತಾರೆ. ತಪ್ಪೇನು? ನಮ್ಮೂರಲ್ಲೂ ಇಂತಹ ಪದ್ಧತಿಗಳು ಈಗಲೂ ಇವೆ. ಎಲ್ಲಾ ದೇವರಿಗೆ ಈ ಬಿಜೆಪಿಯವರು ವಕ್ತಾರರಾಗಿದ್ದಾರೆ. ಇವರು ಮಾತಾಡೋಕೆ ಯಾರು? ಟಿಪ್ಪು, ಹೈದರ್, ಒಡೆಯರ ಕಾಲದಿಂದಲೂ ದಸರಾ ನಡೆದಿತ್ತು ಅಲ್ಲವಾ ಎಂದು ಆಕ್ರೋಶ ಹೊರಹಾಕಿದರು.ಇದನ್ನೂ ಓದಿ: ಧರ್ಮಸ್ಥಳದ ವಿರುದ್ಧ ಪಿತೂರಿಗೆ ವಿದೇಶದಿಂದ ಫಂಡಿಂಗ್‌ – ಎನ್‌ಐಎ ತನಿಖೆಗೆ ಬಿವೈವಿ ಒತ್ತಾಯ

Share This Article