ಅಮೆರಿಕದ ಸಿಂಗರ್ ಜೊತೆ ಪ್ರಿಯಾಂಕಾ ಚೋಪ್ರಾ ಡೇಟಿಂಗ್!

Public TV
1 Min Read

ಮುಂಬೈ: ಬಾಲಿವುಡ್‍ನ ದೇಸಿ ಗರ್ಲ್ ಪ್ರಿಯಾಂಕಾ ಚೋಪ್ರಾ ಅಮೆರಿಕದ ಗಾಯಕ ನಿಕ್ ಜೋನಸ್ ಜೊತೆ ಡೇಟಿಂಗ್ ಮಾಡುತ್ತಿದ್ದಾರೆ. ಆದರೆ ಈಗ ಕೆಲವು ದಿನಗಳಿಂದ ಒಬ್ಬರಿಗೊಬ್ಬರು ತಮ್ಮ ಇನ್‍ಸ್ಟಾಗ್ರಾಂ ಪೋಸ್ಟ್ ಲೈಕ್ ಮಾಡುವುದರ ಮೂಲಕ ತಮ್ಮ ರಿಲೇಷನ್‍ಶಿಪ್ ಬಗ್ಗೆ ಕನ್ಫರ್ಮ್ ಮಾಡಿದ್ದಾರೆ.

ಪ್ರಿಯಾಂಕಾ ಚೋಪ್ರಾ ಕೆಲವು ದಿನಗಳಿಂದ ಅಮೆರಿಕದಲ್ಲೇ ವಾಸಿಸುತ್ತಿದ್ದು, ಈಗ ಅವರು ಪ್ರೀತಿಯಲ್ಲಿ ಬಿದ್ದಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಜೋಡಿ ಒಬ್ಬರನೊಬ್ಬರ ಪೋಸ್ಟ್ ಲೈಕ್ ಹಾಗೂ ಕಮೆಂಟ್ ಮಾಡುವ ಮೂಲಕ ಎಲ್ಲರ ಗಮನ ಸೆಳೆಯುತ್ತಿದ್ದಾರೆ.

ಸದ್ಯ ಈ ಇಬ್ಬರು ತಮ್ಮ ರಿಲೇಷನ್ ಶಿಪ್ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ. ಆದರೆ ಅಮೆರಿಕದಲ್ಲಿ ಇವರಿಬ್ಬರು ಜೊತೆಯಲ್ಲಿ ಸುತ್ತಾಡುತ್ತಿದ್ದಾರೆ ಎಂಬ ಸುದ್ದಿ ಬಾಲಿವುಡ್ ಅಂಗಳದಲ್ಲಿ ಕೇಳಿ ಬರುತ್ತಿದೆ.

ಪ್ರಿಯಾಂಕಾ ತನ್ನ ಗೆಳೆಯ ನಿಕ್ ಜೀನಸ್ ಜೊತೆ ಪಾರ್ಟಿ, ರೆಸ್ಟೋರೆಂಟ್‍ಗಳಿಗೆ ಒಟ್ಟಿಗೆ ತಿರುಗಾಡುತ್ತಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಅಷ್ಟೇ ಅಲ್ಲದೇ ಜೊತೆಯಲ್ಲಿ ಒಬ್ಬರಿಗೊಬ್ಬರು ಹೆಚ್ಚು ಸಮಯ ಕಳೆಯುತ್ತಿದ್ದಾರೆ ಎಂದು ಹೇಳಲಾಗಿದೆ.

ಪ್ರಿಯಾಂಕಾ ಚೋಪ್ರಾಗೆ 35 ವರ್ಷಗಳಾಗಿದ್ದು, ಜೋನಸ್ 25 ವರ್ಷದ ಗಾಯಕ. ತಮಗಿಂತ 10 ವರ್ಷ ಚಿಕ್ಕ ವಯಸ್ಸಿನ ಯುವಕನ ಜೊತೆ ಪ್ರಿಯಾಂಕಾ ಓಡಾಡುತ್ತಿರುವುದು ಹಾಗೂ ಡೇಟಿಂಗ್ ನಡೆಸುತ್ತಿರುವುದರ ಬಗ್ಗೆ ಹಲವಾರು ಮಂದಿ ಮಾತನಾಡಿಕೊಳ್ಳುತ್ತಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *