ತಂದೆ-ತಾಯಿಯಾದ ಪ್ರಿಯಾಂಕಾ ಚೋಪ್ರಾ, ನಿಕ್ ಜೋನಸ್!

By
1 Min Read

ಮುಂಬೈ: ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ, ನಿಕ್ ಜೋನಸ್ ದಂಪತಿ ಸರೋಗಸಿ (ಬಾಡಿಗೆ ತಾಯ್ತನ) ಮೂಲಕವಾಗಿ ಪೋಷಕರಾಗಿ ಬಡ್ತಿಯನ್ನು ಪಡೆದಿದ್ದಾರೆ. ಈ ವಿಚಾರವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಸರೋಗಸಿ ಮೂಲಕ ನಾವು ಮಗುವನ್ನು ಸ್ವಾಗತಿಸಿದ್ದೇವೆ. ನಾವು ಕುಟುಂಬದ ಕಡೆಗೆ ಈ ವಿಶೇಷ ಸಮಯದಲ್ಲಿ ಹೆಚ್ಚಿನ ಗಮನ ಕೊಡಬೇಕಾಗಿರೋದರಿಂದ ನಮಗೆ ಪ್ರೈವಸಿ ಬೇಕಿದೆ. ಧನ್ಯವಾದಗಳು ಎಂದು ಪ್ರಿಯಾಂಕಾ ಚೋಪ್ರಾ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಅನೇಕ ಸೆಲೆಬ್ರಿಟಿಗಳು, ಅಭಿಮಾನಿಗಳು ದಂಪತಿಗೆ ಶುಭಾಶಯ ತಿಳಿಸಿದ್ದಾರೆ.ಇದನ್ನೂ ಓದಿ:ಹೊಸ ಉದ್ಯಮದತ್ತ ಮುಖ ಮಾಡಿದ ಪ್ರಿಯಾಂಕಾ ಚೋಪ್ರಾ

 

View this post on Instagram

 

A post shared by Priyanka (@priyankachopra)

ಮಗುವಿನ ವಿಚಾರ ಹೇಳಿಕೊಂಡಿರುವ ಪ್ರಿಯಾಂಕಾ ಚೋಪ್ರಾ ಯಾವ ಮಗು ಎಂದು ಮಾತ್ರ ಹೇಳಿಲ್ಲ. ಒಟ್ಟಿನಲ್ಲಿ ಇಷ್ಟುದಿನಗಳ ಕಾಲವೂ ಪ್ರಿಯಾಂಕಾ ಚೋಪ್ರಾ, ನಿಕ್ ಜೋನಾಸ್ ದಂಪತಿ ಮಗುವಿನ ವಿಚಾರವಾಗಿ ಗೌಪ್ಯತೆ ಕಾಪಾಡಿಕೊಂಡಿದ್ದಾರೆ. ಆದರೆ ಕೆಲವು ದಿನಗಳ ಹಿಂದೆ ಪ್ರಿಯಾಂಕಾ ಚೋಪ್ರಾ ಸಂದರ್ಶನವೊಂದರಲ್ಲಿ, ಭವಿಷ್ಯದಲ್ಲಿ ತಾವು ತಾಯಿಯಾಗುವ ಬಯಕೆ ವ್ಯಕ್ತಪಡಿಸಿದ್ದರು. ಈ ಮೊದಲೇ ಮಗು ಕುರಿತಾಗಿ ಸುಳಿವು ನೀಡಿದ್ದರು. ಇದನ್ನೂ ಓದಿ: ಮಗು ಪಡೆಯುವುದು ನಮ್ಮ ಜೀವನದ ಅತಿ ದೊಡ್ಡ ಕನಸು: ಪ್ರಿಯಾಂಕಾ ಚೋಪ್ರಾ

ಮಗು ಪಡೆದುಕೊಳ್ಳಬೇಕೆಂಬುದು ನಮ್ಮ ಜೀವನದ ಅತಿ ದೊಡ್ಡ ಕನಸಾಗಿದೆ. ದೇವರ ದಯೆಯಿಂದ ಅದು ಯಾವಾಗ ಸಂಭವಿಸುತ್ತದೋ ಆಗಲೇ ಸಂಭವಿಸಲಿ. ನಾನು ಸಾಲು, ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದೇನೆ. ನಮ್ಮ ಜೀವನದಲ್ಲಿ ಮಗು ಆಗಮನವಾಗುವ ಸಂದರ್ಭದಲ್ಲಿ ನಾನು ಚಿತ್ರರಂಗದಿಂದ ನಿಧಾನವಾಗಿ ಬ್ರೇಕ್ ತೆಗೆದುಕೊಳ್ಳಲು ಆರಂಭಿಸುತ್ತೇವೆ ಎಂದು ಪ್ರಿಯಾಂಕಾ ಈ ಹಿಂದೆಯೇ ಹೇಳಿದ್ದರು.

2018ರಲ್ಲಿ ನಿಕ್ ಜೋನಾಸ್, ಪ್ರಿಯಾಂಕಾ ಚೋಪ್ರಾ ಅವರು ಜೋಧಪುರದಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಮದುವೆ ನಂತರ ಪ್ರಿಯಾಂಕಾ ಚೋಪ್ರಾ ಅವರು ಹಾಲಿವುಡ್‍ನಲ್ಲಿ ಬ್ಯುಸಿಯಾಗಿದ್ದಾರೆ. ಪತಿ ಜೊತೆ ಅಮೆರಿಕದಲ್ಲಿ ನೆಲೆಸಿರುವ ಪ್ರಿಯಾಂಕಾ ಚೋಪ್ರಾ ಅವರು ಅಲ್ಲಿಯೇ ಭಾರತೀಯ ರೆಸ್ಟೋರೆಂಟ್ ಕೂಡ ಆರಂಭಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *