ಭದ್ರಾವತಿ ಈದ್‌ ಮೆರವಣಿಗೆಯಲ್ಲಿ ಪಾಕ್‌ ಪರ ಘೋಷಣೆ

Public TV
1 Min Read

ಶಿವಮೊಗ್ಗ: ಭದ್ರಾವತಿಯಲ್ಲಿ (Bhadravathi) ನಡೆದ ಈದ್ ಮಿಲಾದ್ ಮೆರವಣಿಗೆ (Eid Procession) ವೇಳೆ ಪಾಕಿಸ್ತಾನ ಪರ ಘೋಷಣೆ ಕೂಗಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಭದ್ರಾವತಿ ನಗರದ ಅಂಬೇಡ್ಕರ್ ವೃತ್ತದಲ್ಲಿ ಸೋಮವಾರ ರಾತ್ರಿ ನಡೆದ ಈದ್ ಮಿಲಾದ್ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಕೆಲ ಯುವಕರು ಪಾಕಿಸ್ತಾನ ಜಿಂದಾಬಾದ್ (Pakistan Zindabad) ಎಂದು ಘೋಷಣೆ ಕೂಗಿದ್ದಾರೆ.

ಈ ಸಂಬಂಧ ಭದ್ರಾವತಿಯ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿಡಿಯೋ ಸತ್ಯಾಸತ್ಯತೆ ಜೊತೆಗೆ ಘೋಷಣೆ ಕೂಗಿದವರ ಶೋಧಕ್ಕೆ ಪೊಲೀಸರು ಮುಂದಾಗಿದ್ದಾರೆ. ಇದನ್ನೂ ಓದಿ: ಈದ್‌ಮಿಲಾದ್ ವೇಳೆ 15 ನಿಮಿಷ ಪೊಲೀಸರನ್ನ ಸುಮ್ಮನಿರಿಸಿ ಹಾಡು ಪ್ರಸಾರ ಮೂವರ ವಿರುದ್ಧ ಕೇಸ್ ದಾಖಲು

 

ಮಾಧ್ಯಮಗಳಿಗೆ ಮಾಹಿತಿ ನೀಡಿದ ಶಿವಮೊಗ್ಗ ಎಸ್‌ಪಿ ಜಿ.ಕೆ.ಮಿಥುನ್ ಕುಮಾರ್, ಇಂದು ಬೆಳಗ್ಗೆಯಿಂದ 12 ಸೆಕೆಂಡ್‌ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆ ಎನ್ನಲಾಗಿದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸ್ವಯಂಪ್ರೇರಿತ ಕೇಸ್‌ ದಾಖಲಿಸಿದ್ದೇವೆ ಎಂದರು. ಇದನ್ನೂ ಓದಿ: ಮದ್ದೂರಿನಲ್ಲಿ ಗಣೇಶನ ಮೇಲೆ ಕಲ್ಲು ತೂರಲು ಪ್ರಚೋದನೆ ಏನು? ಇಲ್ಲಿದೆ ಇನ್‌ಸೈಡ್‌ ಸ್ಟೋರಿ

ವಿಡಿಯೋವನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಈಗಾಗಲೇ ಕಳುಹಿಸಲಾಗಿದೆ. ಯಾವಾಗ, ಯಾರು, ಎಲ್ಲಿ ವಿಡಿಯೋ ಮಾಡಿದ್ದಾರೆ. ಅದರ ಪರಿಶೀಲನೆ ಆಗಲಿದೆ. ಪ್ರಕರಣದ ತನಿಖೆಗಾಗಿ 3 ಇನ್ಸ್ಪೆಕ್ಟರ್‌ಗಳ ನೇತೃತ್ವದಲ್ಲಿ 3 ಟೀಂ ರಚಿಸಿದ್ದೇವೆ. ವಿಡಿಯೋದಲ್ಲಿ ಇರುವವರನ್ನು ಗುರುತಿಸುತ್ತಿದ್ದೇವೆ. ವಿಡಿಯೋದಲ್ಲಿರುವವರ ಶೋಧಕ್ಕಾಗಿಯೇ ಒಂದು ಟೀಂ ಟೀಮ್ ಕೆಲಸ ಮಾಡಲಿದೆ. ಈದ್ ಮೆರವಣಿಗೆ ವೇಳೆ ವಿಡಿಯೋ ರೆಕಾರ್ಡಿಂಗ್ ಸಹ ಮಾಡಲಾಗಿತ್ತು. ಎಲ್ಲವನ್ನು ಪರಿಶೀಲಿಸಿ, ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.

Share This Article