ರಸ್ತೆಯಲ್ಲಿ ನಿಂತು ವೇಶ್ಯವಾಟಿಕೆಗೆ ಪ್ರಚೋದನೆ – ಬೆಂಗ್ಳೂರಲ್ಲಿ 6 ವಿದೇಶಿ ಮಹಿಳೆಯರು ವಶಕ್ಕೆ

1 Min Read

ಬೆಂಗಳೂರು: ನಗರದ (Bengaluru) ಕೋರಮಂಗಲ (Koramangal) ಚೆಕ್‌ಪೋಸ್ಟ್‌ ಬಳಿ ರಸ್ತೆಯಲ್ಲಿ ನಿಂತು ವೇಶ್ಯವಾಟಿಕೆಗೆ (Prostitution) ಪ್ರಚೋದನೆ ನೀಡುತ್ತಿದ್ದ 6 ವಿದೇಶಿ ಮಹಿಳೆಯರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ರಸ್ತೆಯಲ್ಲಿ ನಿಂತು ಆರು ಮಹಿಳೆಯರು ಪುರುಷರನ್ನು ಲೈಂಗಿಕ ಕ್ರಿಯೆಗೆ ಪ್ರಚೋದಿಸುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಆಧರಿಸಿ ಪೊಲೀಸರು ದಾಳಿ ನಡೆಸಿದ್ದಾರೆ. 6 ಮಹಿಳೆಯರನ್ನು ವಶಕ್ಕೆ ಪಡೆಯಲಾಗಿದ್ದು ವಿಚಾರಣೆ ನಡೆಸಲಾಗುತ್ತಿದೆ. ಇದನ್ನೂ ಓದಿ: ಬೆಂಗಳೂರಲ್ಲಿ ಯುವತಿ ಅನುಮಾನಾಸ್ಪದ ಸಾವು – ಬೆತ್ತಲೆ, ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ

ವಿದೇಶಿ ಮಹಿಳೆಯರ ಬಳಿ ಇರುವ ಪಾಸ್‌ಪೋರ್ಟ್, ವೀಸಾ ಪರಿಶೀಲನೆ ನಡೆಸಲಾಗುತ್ತಿದೆ. ಈ ಸಂಬಂಧ ಕೋರಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ. ಇದನ್ನೂ ಓದಿ: ಪ್ಲಾಸ್ಟಿಕ್ ಗೋಡೌನ್‌ನಲ್ಲಿ ಅಗ್ನಿ ಅವಘಡ- ಗೋಡೆ ಹಾರಿ ಜೀವ ಉಳಿಸಿಕೊಂಡ ಬೆಂಗಳೂರಿನ ಪಿಜಿ ಯುವತಿಯರು

Share This Article