ಪಠ್ಯಪುಸ್ತಕದಲ್ಲಿ ಪ್ರವಾದಿ, ಇಸ್ಲಾಂ ಅವಹೇಳನ – ಪ್ರೊ.ಬಿ.ಆರ್.ರಾಮಚಂದ್ರಯ್ಯರನ್ನು ಕೆಲಸದಿಂದ ವಜಾಗೊಳಿಸಿಲು ಆಗ್ರಹ

Public TV
1 Min Read

ತುಮಕೂರು: ರಾಜ್ಯದ ಎಲ್ಲ ವಿಶ್ವವಿದ್ಯಾನಿಲಯಗಳಿಗೆ ಅನ್ವಯಗೊಂಡ ಬಿಎಡ್ ಮೂರನೇ ಸೆಮಿಸ್ಟರ್ ಮೌಲ್ಯಾಧಾರಿತ ಶಿಕ್ಷಣದ ಹೆಸರಿನಲ್ಲಿರುವ ಪಠ್ಯಪುಸ್ತಕದಲ್ಲಿ ಇಸ್ಲಾಂ ಧರ್ಮ ಮತ್ತು ಮುಸ್ಲಿಮರ ಪ್ರವಾದಿ ಮುಹಮ್ಮದ್(ಸ) ಅವರ ಕುರಿತು ಪೂರ್ವಗ್ರಹಪೀಡಿತ, ಅವಹೇಳನಾಕಾರಿ ಅಂಶಗಳನ್ನು ಬರೆದ ಪ್ರೊ.ಬಿ.ಆರ್.ರಾಮಚಂದ್ರಯ್ಯ ವಿರುದ್ಧ ತುಮಕೂರಿನ ಹೊಸ ಬಡಾವಣೆ ಪೊಲೀಸ್ ಠಾಣೆಯಲ್ಲಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕರ್ನಾಟಕ ರಾಜ್ಯ ಸಮಿತಿಯು ಪ್ರಕರಣ ದಾಖಲಿಸಿದೆ.

ತುಮಕೂರಿನ ಕಾಲೇಜೊಂದರ ಸಹಾಯಕ ಪ್ರಾಧ್ಯಾಪಕ ಬಿ.ಆರ್.ರಾಮಚಂದ್ರಯ್ಯ ಎಂಬವರು ಬರೆದಿರುವ ಮೈಸೂರಿನ ವಿಸ್ಮಯ ಪ್ರಕಾಶನ ಪ್ರಕಟಿಸಿರುವ ‘ಮೌಲ್ಯ ದರ್ಶನ ದಿ ಎಸ್ಸೆನ್ಸ್ ಆಫ್ ವ್ಯಾಲ್ಯೂ ಎಜುಕೇಶನ್’ ಎಂಬ ಆಂಗ್ಲ ಕೃತಿಯಲ್ಲಿ ಇಸ್ಲಾಂ, ಮುಸ್ಲಿಮರನ್ನು ಮತ್ತು ಪ್ರವಾದಿ ಮುಹಮ್ಮದ್(ಸ) ಅವರನ್ನು ನಿಂದಿಸಲಾಗಿದೆ. ಈ ಕೃತಿಯನ್ನು ರಾಜ್ಯದ ಎಲ್ಲ ವಿಶ್ವವಿದ್ಯಾನಿಲಯಗಳು ಕೂಡ ಬಿಎಡ್ ಮೂರನೇ ಸೆಮಿಸ್ಟರ್ ಪಠ್ಯಪುಸ್ತಕವಾಗಿ ಆಯ್ಕೆ ಮಾಡಿಕೊಂಡಿದೆ. ಇದನ್ನೂ ಓದಿ:  ಅಲ್ಪಸಂಖ್ಯಾತರ ಬಗ್ಗೆ ಬಿಜೆಪಿ ದ್ವಂದ್ವ ನೀತಿ: ಹೆಚ್‍ಡಿಕೆ ತರಾಟೆ

ಉದ್ದೇಶಪೂರ್ವಕರಾಗಿ ಕೋಮುಭಾವನೆಯನ್ನು ಕೆರಳಿಸಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಯತ್ನಿಸಿದ ಲೇಖಕ ಹಾಗೂ ವಿಸ್ಮಯ ಪಬ್ಲಿಕೇಶನ್ ವಿರುದ್ಧ ಕ್ಯಾಂಪಸ್ ಫ್ರಂಟ್ ವಿದ್ಯಾರ್ಥಿಗಳು ನೀಡಿದ ದೂರಿನನ್ವಯ ಇದೀಗ ತುಮಕೂರಿನ ಹೊಸ ಬಡಾವಣೆ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಿಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಗೆ ಕಠಿಣ ಕಾನೂನು ಕ್ರಮ ಜರುಗಿಸಬೇಕು. ಚಲಾವಣೆಯಲ್ಲಿರುವ ಬಿಎಡ್ ಮೂರನೇ ಸೆಮಿಸ್ಟರ್ ಮೌಲ್ಯ ಶಿಕ್ಷಣ ಎಂಬ ಪುಸ್ತಕವನ್ನು ತಕ್ಷಣ ಸ್ಥಗಿತಗೊಳಿಸಿ, ಸಂಪೂರ್ಣವಾಗಿ ನಾಶಗೊಳಿಸಬೇಕು.

ರಾಮಚಂದ್ರಯ್ಯ ಅವರನ್ನು ಪ್ರೊಫೆಸರ್ ಹುದ್ದೆಯಿಂದ ತಕ್ಷಣ ವಜಾಗೊಳಿಸಬೇಕು. ವಿಸ್ಮಯ ಪಬ್ಲಿಕೇಶನ್ ವಿರುದ್ಧ ಕಠಿಣ ಕಾನೂನು ಕ್ರಮ ತಗೆದುಕೊಂಡು ಪರವಾನಿಗೆ ರದ್ದುಗೊಳಿಸಬೇಕೆಂದು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕರ್ನಾಟಕ ರಾಜ್ಯ ಸಮಿತಿಯು ಆಗ್ರಹಿಸುತ್ತಿದೆ. ಇದನ್ನೂ ಓದಿ:  ಮಹಿಳೆಯರ ಆತ್ಮರಕ್ಷಣೆಗಾಗಿ ವಿಶೇಷ ತರಬೇತಿ: ಬಸವರಾಜ ಬೊಮ್ಮಾಯಿ

Share This Article
Leave a Comment

Leave a Reply

Your email address will not be published. Required fields are marked *