ರಾಜ್ಯ ಪರಿವರ್ತನಾ ಸಂಸ್ಥೆ ಉಪಾಧ್ಯಕ್ಷರಾಗಿ ಪ್ರೋ.ರಾಜೀವ್ ಗೌಡ ನೇಮಕ

Public TV
2 Min Read

ಬೆಂಗಳೂರು: ಪ್ರೋ.ಎಂ.ವಿ ರಾಜೀವ್ ಗೌಡ (MV Rajeev Gowda) ಅವರನ್ನು ಕರ್ನಾಟಕ ರಾಜ್ಯ ಪರಿವರ್ತನಾ ಸಂಸ್ಥೆಯ (SITK) ಉಪಾಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ರಾಜ್ಯ ಸರ್ಕಾರ ಈ ಸಂಬಂಧ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ ರಾಜ್ಯ ಯೋಜನಾ ಮಂಡಳಿ ಎಂಬ ಹೆಸರಿನಲ್ಲಿ ಅಸ್ತಿತ್ವದಲ್ಲಿದ್ದ ಸಂಸ್ಥೆಗೆ ಈಗ ರಾಜ್ಯ ಪರಿವರ್ತನಾ ಸಂಸ್ಥೆ ಎಂದು ಮರು ನಾಮಕರಣ ಮಾಡಲಾಗಿದೆ. ಇದು ಕರ್ನಾಟಕದ ಪಾಲಿಗೆ ನೀತಿ ಆಯೋಗದ ಹೊಣೆಗಾರಿಕೆಗೆ ಸಮಾನವಾಗಿದೆ. ರಾಜೀವ್ ಗೌಡ ಅವರಿಗೆ ಸಂಪುಟ ದರ್ಜೆಯ ಸ್ಥಾನಮಾನದೊಂದಿಗೆ ಈ ಜವಬ್ದಾರಿ ವಹಿಸಲಾಗಿದೆ.

ಪ್ರೋ.ರಾಜೀವ್ ಗೌಡ ಅವರು 2014- 20ರ ವರೆಗೆ ರಾಜ್ಯಸಭಾ ಸದಸ್ಯರಾಗಿದ್ದರು. ಅಲ್ಲದೇ ಎಐಸಿಸಿಯ ಸಂಶೋಧನಾ ವಿಭಾಗದ ಮುಖ್ಯಸ್ಥರಾಗಿದ್ದರು. 2019ರ ಲೋಕಸಭಾ ಚುನಾವಣೆಯ ಪ್ರಣಾಳಿಕೆ ಸಮಿತಿಯ ಸಂಚಾಲಕರಾಗಿಯೂ ಆಗಿದ್ದರು. ಜೊತೆಗೆ ಕಾಂಗ್ರೆಸ್‍ನ ರಾಷ್ಟ್ರೀಯ ವಕ್ತಾರರಾಗಿ ಕೂಡ ಕಾರ್ಯ ನಿರ್ವಹಿಸಿದ್ದಾರೆ. ಅವರು ಬೆಂಗಳೂರಿನ ಐಐಎಂನಲ್ಲಿ ಅರ್ಥಶಾಸ್ತ್ರ ಹಾಗೂ ಸಮಾಜ ವಿಜ್ಞಾನದ ಪ್ರೊಫೆಸರ್ ಆಗಿ ಕೆಲಸ ಮಾಡಿದ್ದಾರೆ. ಅಲ್ಲದೇ ಆರ್‌ಬಿಐನ ಕೇಂದ್ರ ಮಂಡಳಿಯ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿದ್ದರು. ಇದನ್ನೂ ಓದಿ: KRSನಿಂದ ತಮಿಳುನಾಡಿಗೆ ಹೆಚ್ಚಿನ ನೀರು ಬಿಡುಗಡೆ

ಕರ್ನಾಟಕದ ಸಾಮಾಜಿಕ ಮತ್ತು ಆರ್ಥಿಕ ಬೆಳವಣಿಗೆಗೆ ಪೂರಕವಾದ ಯೋಜನೆಗಳನ್ನು ರೂಪಿಸಿ ಸರ್ಕಾರಕ್ಕೆ ಶಿಫಾರಸು ಮಾಡುವುದು, ನೂತನ ಪರಿಹಾರ ಮಾರ್ಗಗಳನ್ನು ಸರ್ಕಾರಕ್ಕೆ ಸೂಚಿಸುವುದು ಎಸ್‍ಐಟಿಕೆಯ ಕಾರ್ಯವಾಗಿದೆ. ಅಲ್ಲದೇ ವಿವಿಧ ಸುಸ್ಥಿರ ಅಭಿವೃದ್ಧಿಯ ಗುರಿಗಳನ್ನು ಸಾಧಿಸಲು ರಾಜ್ಯ ಸರ್ಕಾರಕ್ಕೆ ಸಂಸ್ಥೆ ನೆರವಾಗಲಿದೆ. ಒಟ್ಟಾರೆ ರಾಜ್ಯದ ಸಮಗ್ರ ಅಭಿವೃದ್ಧಿಗೆ ಪೂರಕವಾಗಿ ರಾಜ್ಯ ಸರ್ಕಾರಕ್ಕೆ ರಾಜ್ಯ ಪರಿವರ್ತನಾ ಸಂಸ್ಥೆ ಕಾರ್ಯನಿರ್ವಹಿಸಲಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಪ್ರೋ.ರಾಜೀವ್ ಗೌಡ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ರಾಜ್ಯದ ಅಭಿವೃದ್ಧಿಗೆ ಕೊಡುಗೆ ನೀಡಲು ಇದೊಂದು ಉತ್ತಮ ಅವಕಾಶ ಎಂದು ಹೇಳಿದ್ದಾರೆ. ಈ ನಿಟ್ಟಿನಲ್ಲಿ ನಾನು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ರಾಯಚೂರಿಗೆ ಏಮ್ಸ್ ತರಲು ಸರ್ಕಾರ ಪ್ರಯತ್ನಿಸುತ್ತಿದೆ: ಡಾ.ಶರಣ ಪ್ರಕಾಶ್ ಪಾಟೀಲ್

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್