ವೇಶ್ಯಾವಾಟಿಕೆ ದಂಧೆ: ಕಿರುತೆರೆ ನಟಿ ಆರತಿ ಅರೆಸ್ಟ್

Public TV
1 Min Read

ಕಿರುತೆರೆಯ ಖ್ಯಾತ ನಟಿ ಆರತಿ ಹರೀಶ್ ಚಂದ್ರ ಮಿತ್ತಲ್ (Aarti Harish Chandra Mittal) ಅವರನ್ನು ವೇಶ್ಯಾವಾಟಿಕೆ (Prostitution) ಆರೋಪದ ಅಡಿ ಪೊಲೀಸರು (Police)ಬಂಧಿಸಿದ್ದಾರೆ . ಮಾಡೆಲ್ ಗಳನ್ನು ಬಳಕೆ ಮಾಡಿಕೊಂಡು ಆರತಿ ವೇಶ್ಯಾವಾಟಿಕೆ ನಡೆಸುತ್ತಿದ್ದರು ಎಂದು ಗೊತ್ತಾಗಿದೆ. ಮಾಹಿತಿ ಸಿಗುತ್ತಿದ್ದಂತೆಯೇ ಆರತಿಯನ್ನು ಬೆನ್ನತ್ತಿದ್ದ ಪೊಲೀಸರು ರೆಡ್ ಹ್ಯಾಂಡ್ ಆಗಿಯೇ ಹಿಡಿದಿದ್ದಾರೆ.

ಅಪ್ನಾಪನ್ ಸೇರಿದಂತೆ ಹಲವು ಜನಪ್ರಿಯ ಧಾರಾವಾಹಿಗಳಲ್ಲಿ ನಟಿಸಿರುವ ಆರತಿ, ಕಾಸ್ಟಿಂಗ್ ಡೈರೆಕ್ಟರ್ ಆಗಿಯೂ ಗುರುತಿಸಿಕೊಂಡವರು. ಇವುಗಳ ಜೊತೆಗೆ ಮುಂಬೈನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದರು ಎಂದು ಹೇಳಲಾಗುತ್ತಿದೆ. ಗ್ರಾಹಕರ ಮಾರುವೇಶದಲ್ಲಿ ಆರತಿಯನ್ನು ಸಂಪರ್ಕಿಸಿರುವ ಪೊಲೀಸರು ನಂತರ ಆರತಿಯನ್ನು ಬಂಧಿಸಿದ್ದಾರೆ. ಇವರ ಜೊತೆ ರಾಕೆಟ್ ನಲ್ಲಿ ಇಬ್ಬರು ಮಾಡೆಲ್ ಗಳು ಇದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಪೊಲೀಸ್ ಅಧಿಕಾರಿ ಮನೋಜ್ ಸುತಾರ್ ಅವರಿಗೆ ಆರತಿ ನಡೆಸುತ್ತಿದ್ದ ವೇಶ್ಯಾವಾಟಿಕೆ ದಂಧೆಯ ಬಗ್ಗೆ ಸುಳಿವು ಸಿಕ್ಕಿತ್ತು. ಕೂಡಲೇ ಎಚ್ಚೆತ್ತುಕೊಂಡ ಅಧಿಕಾರಿ ತಮಗೆ ಇಬ್ಬರು ಹುಡುಗಿಯನ್ನು ಕಳುಹಿಸುವಂತೆ ಆರತಿಯನ್ನು ಸಂಪರ್ಕಿಸಿದ್ದಾರೆ. 60 ಸಾವಿರ ಬೇಡಿಕೆ ಇಟ್ಟು, ಹುಡುಗಿಯರನ್ನು ಕಳುಹಿಸುವುದಾಗಿ ಆರತಿ ತಿಳಿಸಿದ್ದರು. ಹಣ ಕೊಡುವುದಾಗಿಯೂ ಅಧಿಕಾರಿ ತಿಳಿಸಿದ್ದರು.

ಹೋಟೆಲ್ ರೂಮ್ ಗೆ ತೆರಳುವ ಮುನ್ನ ಸ್ವತಃ ಆರತಿಯೇ ಅಧಿಕಾರಿಗಳಿಗೆ ಕಾಂಡೋಮ್ ನೀಡಿದ್ದಾರೆ. ಇವೆಲ್ಲವನ್ನೂ ಪೊಲೀಸರು ರೆಕಾರ್ಡ್ ಮಾಡಿಕೊಂಡೇ ಆರತಿಯನ್ನು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಆರತಿ ಜೊತೆ ಯಾರೆಲ್ಲ ಇದ್ದಾರೆ ಎನ್ನುವುದರ ಕುರಿತು ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ.

Share This Article