ಸ್ಪಾ ಹೆಸರಲ್ಲಿ ವೇಶ್ಯಾವಾಟಿಕೆ ದಂಧೆ – ಐವರು ಯುವತಿಯರ ರಕ್ಷಣೆ, ಇಬ್ಬರು ಅರೆಸ್ಟ್

1 Min Read

ಬೀದರ್: ಸ್ಪಾ ಹೆಸರಿನಲ್ಲಿ ನಡೆಸುತ್ತಿದ್ದ ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ ಮಾಡಿ, ಹೊರರಾಜ್ಯದ ಐವರು ಯುವತಿಯರ ರಕ್ಷಣೆ ಮಾಡಿ ಬೀದರ್ ಪೊಲೀಸರು (Bidar) ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ.

ಬೀದರ್ ನಗರದ ಶಿವನಗರದಲ್ಲಿ ಸ್ಪಾ ಹೆಸರಿನಲ್ಲಿ ವೇಶ್ಯಾವಾಟಿಕೆ ಮಾಡುತ್ತಿದ್ದಾಗ ಪೊಲೀಸರು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದಾರೆ. ದಾಳಿ ಮಾಡಿ ಮಹಾರಾಷ್ಟ್ರ, ಅಸ್ಸಾಂ, ಹರಿಯಾಣ, ಮಧ್ಯಪ್ರದೇಶ ಸೇರಿದಂತೆ ವೇಶ್ಯಾವಾಟಿಕೆಯಲ್ಲಿ ಭಾಗಿಯಾಗಿದ್ದ ಐದು ಯುವತಿಯರ ಪೊಲೀಸರು ರಕ್ಷಣೆ ಮಾಡಿದ್ದಾರೆ. ಇದನ್ನೂ ಓದಿ: ಬಡವರ ತಲೆ ಮೇಲೆ ಆರ್ಥಿಕ ಭಾರ ಹೇರಿದ ಶೂನ್ಯ ಸಾಧನೆ ಸಮಾವೇಶ: ಬಸವರಾಜ ಬೊಮ್ಮಾಯಿ 

ಜೊತೆಗೆ ಸ್ಪಾ ಹೆಸರಿನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಇಬ್ಬರು ಆರೋಪಿಗಳನ್ನು ಅರೆಸ್ಟ್ ಮಾಡಿ, ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಬೀದರ್ ಎಸ್ಪಿ ಪ್ರದೀಪ್ ಗುಂಟಿ ಮಾರ್ಗದರ್ಶನಲ್ಲಿ ಕಾರ್ಯಾಚರಣೆ ಮಾಡಲಾಗಿದ್ದು, ನೂತನ ಠಾಣೆಯ ಪೊಲೀಸರು ಸೇರಿದಂತೆ ಬೀದರ್ ಪೊಲೀಸರು ಸೇರಿ ಭರ್ಜರಿ ಕಾರ್ಯಾಚರಣೆ ಮಾಡಿ, ಯಶಸ್ವಿಯಾಗಿದ್ದಾರೆ.ಇದನ್ನೂ ಓದಿ: ಕರ್ನಾಟಕದ 22,000ಕ್ಕೂ ಹೆಚ್ಚು ರೈತರಿಗೆ ಪಿಎಂ-ಕಿಸಾನ್ ಹಣ ಬಿಡುಗಡೆ

Share This Article