ಡಿಸಿ ಕಚೇರಿ ಆವರಣದಲ್ಲಿ ಮೃತದೇಹ ಇಟ್ಟು ಪ್ರತಿಭಟನೆ

Public TV
1 Min Read

ಬೆಳಗಾವಿ: ಸ್ಮಶಾನಕ್ಕೆ ತೆರಳಲು ದಾರಿ ಇಲ್ಲದಿದ್ದಕ್ಕೆ ಬೆಳಗಾವಿ ಡಿಸಿ ಕಚೇರಿ ಆವರಣದಲ್ಲಿ ಮೃತದೇಹ ಇಟ್ಟು ಗ್ರಾಮಸ್ಥರು ಪ್ರತಿಭಟನೆ ನಡೆಸಿದ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಏಣಗಿ ಗ್ರಾಮದಲ್ಲಿ ಸ್ಮಶಾನಕ್ಕೆ ತೆರಳಲು ದಾರಿ ಇಲ್ಲವಾಗಿತ್ತು. ಇದರಿಂದಾಗಿ ಏಣಗಿ ಗ್ರಾಮಸ್ಥರು ಅಬ್ದುಲ್ ಖಾದರ್ ಮಿಶ್ರಿಕೋಟಿ (65) ಮೃತದೇಹವನ್ನು ಇಟ್ಟು ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ. ಮೃತರ ಸಂಬಂಧಿ ಇಬ್ರಾಹಿಂ ನೇತೃತ್ವದಲ್ಲಿ ಗ್ರಾಮಸ್ಥರಿಂದ ಈ ಪ್ರತಿಭಟನೆ ನಡೆದಿದ್ದು, ಸ್ಮಶಾನಕ್ಕೆ ಹಾದಿ ಕೊಡದ ಸರ್ಕಾರಕ್ಕೆ ಧಿಕ್ಕಾರ ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಿಂದೂ, ಮುಸ್ಲಿಂ ಎರಡೂ ಸಮುದಾಯದ ಸ್ಮಶಾನಗಳಿಗೆ ತೆರಳಲು ಹಾದಿ ಇಲ್ಲ. ಈ ಬಗ್ಗೆ ಹಲವು ಬಾರಿ ಮನವಿ ಮಾಡಿದರೂ ಸಹ ಯಾವುದೇ ಕ್ರಮ ಕೈಗೊಂಡಿಲ್ಲ. ಹೀಗಾಗಿ ಬೆಳಗಾವಿ ಡಿಸಿ ಕಚೇರಿಗೆ ಮೃತದೇಹ ತಂದು ಪ್ರತಿಭಟನೆ ಮಾಡುತ್ತಿದ್ದೇವೆ. ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಇಲ್ಲೇ ಸಮಾಧಿ ಮಾಡುತ್ತೇವೆ ಎಂದು ಸಂಬಂಧಿಕರು, ಗ್ರಾಮಸ್ಥರು ಎಚ್ಚರಿಕೆ ನೀಡಿದರು.

ಬೆಳಗಾವಿ ಡಿಸಿ ಕಚೇರಿ ಎದುರು ಮೃತದೇಹವಿಟ್ಟು ಗ್ರಾಮಸ್ಥರ ಪ್ರತಿಭಟನೆ ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸರಿಂದ ಗ್ರಾಮಸ್ಥರ ಮನವೊಲಿಕೆಗೆ ಯತ್ನಿಸಿದ್ದಾರೆ. ಆದರೂ ಇದಕ್ಕೆ ಕರಗದೇ ಸ್ಮಶಾನಕ್ಕೆ ದಾರಿ ಮಾಡಿಕೊಡುವರೆಗೂ ಪ್ರತಿಭಟನೆ ಹಿಂಪಡೆಯಲ್ಲ ಎಂದು ರೈತರು ಪಟ್ಟು ಹಿಡಿದಿದ್ದಾರೆ. ಈ ಸಂದರ್ಭದಲ್ಲಿ ಮಾರ್ಕೆಟ್ ಠಾಣೆ ಸಿಪಿಐ ಮಲ್ಲಿಕಾರ್ಜುನ ತುಳಸಿಗೇರಿ, ಸಿಸಿಬಿ ಸಿಪಿಐ ನಿಂಗನಗೌಡ ಪಾಟೀಲ್ ಇದ್ದರು. ಇದನ್ನೂ ಓದಿ: ಇಂದಿನಿಂದ SSLC ಸಪ್ಲಿಮೆಂಟರಿ ಎಕ್ಸಾಂ – ಆಗಸ್ಟ್ ಮೊದಲ ವಾರದಲ್ಲಿ ರಿಸಲ್ಟ್

ಸ್ಥಳಕ್ಕೆ ಅಪರ ಜಿಲ್ಲಾಧಿಕಾರಿ ಅಶೋಕ್ ದುಡಗುಂಟಿ ಭೇಟಿ ನೀಡಿ ಪ್ರತಿಭಟನಾನಿರತರ ಮನವೊಲಿಕೆಗೆ ಯತ್ನಿಸಿದ್ದಾರೆ. ಸ್ಥಳಕ್ಕೆ ಅಧಿಕಾರಿಗಳ ಕಳಿಸಿ ಸಮಸ್ಯೆ ಬಗೆಹರಿಸುತ್ತೇವೆ ಎಂದ ಎಡಿಸಿ ಭರವಸೆ ನೀಡಿದ್ದಾರೆ. ಜೆಸಿಬಿ ದಾರಿ ಹೋಗುವಷ್ಟು ರಸ್ತೆ ಮಾಡಿಸಿ ಕೊಡಿ ತೆರಳುತ್ತೇವೆ ಎಂದ ಗ್ರಾಮಸ್ಥರು  ತಿಳಿಸಿದರು. ಆ ಬಳಿಕ ಗ್ರಾಮಸ್ಥರು ಪ್ರತಿಭಟನೆ ಕೈಬಿಟ್ಟರು. ಇದನ್ನೂ ಓದಿ: ಜುಲೈ 1ರಿಂದ ಕಬ್ಬನ್ ಪಾರ್ಕ್‍ನಲ್ಲಿ ನಾಯಿಗಳಿಗೆ ನಿಷೇಧ

Live Tv

Share This Article
Leave a Comment

Leave a Reply

Your email address will not be published. Required fields are marked *