ಮತ್ತೆ ಬೀದಿಗಿಳಿದ ರೈತರು- ದೆಹಲಿ, ಚಂಡೀಗಢ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ

Public TV
1 Min Read

ಚಂಡೀಗಢ: ಬೆಂಬಲ ಬೆಲೆ ನೀಡಿ ಸೂರ್ಯಕಾಂತಿ (Sunflower Seeds) ಬೆಳೆ ಖರೀದಿಸದ ಹರಿಯಾಣ ಸರ್ಕಾರ (Haryana Government) ದ ವಿರುದ್ಧ ರೈತರು ಬೀದಿಗಿಳಿದು ಹೋರಾಟ ನಡೆಸುತ್ತಿದ್ದಾರೆ. ರೈತ ನಾಯಕ ರಾಕೇಶ್ ಟಿಕಾಯತ್  ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದ್ದು, ಪ್ರಮುಖ ಕುಸ್ತಿಪಟುಗಳು ಈ ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ.

ಸೂರ್ಯಕಾಂತಿ ಬೆಳೆಗೆ ಬೆಂಬಲ ನೀಡುವಂತೆ ಆಗ್ರಹಿಸಿ ಸೋಮವಾರ ಕುರುಕ್ಷೇತ್ರ (flyover near Pipli in Kurukshetra district) ಜಿಲ್ಲೆಯ ಪಿಪ್ಲಿ ಬಳಿಯ ಫ್ಲೈಓವರ್ ಮೇಲೆ ರೈತರು (Farmers Protest) ಜಮಾಯಿಸಿದ್ದರು. ರೈತರ ಪ್ರತಿಭಟನೆಯಿಂದ ದೆಹಲಿ-ಚಂಡೀಗಢ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿತು.

ಪ್ರತಿಭಟನೆಗೂ ಮುನ್ನ ಕುರುಕ್ಷೇತ್ರದಲ್ಲಿ ಮಹಾಪಂಚಾಯತ್ ನಡೆಸಲಾಯಿತು. ಭಾರತೀಯ ಕಿಸಾನ್ ಯೂನಿಯನ್ ನಾಯಕ ರಾಕೇಶ್ ಟಿಕಾಯತ್ ( Rakesh Tikait) ಸೇರಿದಂತೆ ಪ್ರಮುಖ ರೈತ ಮುಖಂಡರು, ಭಾರತೀಯ ಕುಸ್ತಿ ಫೆಡರೇಶನ್ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ( Brij Bhushan Sharan Singh) ವಿರುದ್ಧ ಕ್ರಮಕ್ಕೆ ಒತ್ತಾಯಿಸುತ್ತಿರುವ ಕುಸ್ತಿಪಟುಗಳಲ್ಲಿ ಒಬ್ಬರಾದ ಬಜರಂಗ್ ಪುನಿಯಾ ( Bajrang Punia) ಇಲ್ಲಿ ಭಾಗಿಯಾಗಿದ್ದರು.

ರಾಜ್ಯ ಸರ್ಕಾರವು ಸೂರ್ಯಕಾಂತಿ ಬೀಜಗಳನ್ನು MSPಯಲ್ಲಿ ಖರೀದಿಸುತ್ತಿಲ್ಲ, ಪ್ರತಿ ಕ್ವಿಂಟಾಲ್‍ಗೆ 6,400 ರೂ. ನೀಡಿ ಖರೀದಿಸಬೇಕಿದ್ದ ಸರ್ಕಾರ ಖಾಸಗಿ ಖರೀದಿದಾರರಿಗೆ ಕ್ವಿಂಟಾಲ್‍ಗೆ 4000ರೂ.ಗೆ ಮಾರಾಟ ಮಾಡಲು ಒತ್ತಾಯಿಸುತ್ತಿದೆ ಎಂದು ಪ್ರತಿಭಟನಾನಿರತ ರೈತರು ಆರೋಪಿಸಿದ್ದಾರೆ. ಇದನ್ನೂ ಓದಿ: ಅಪ್ಪ ತಿಹಾರ್ ಜೈಲಿನಲ್ಲಿ ಇದ್ದಾಗ ವೇಷ ಬದಲಿಸಿಕೊಂಡು ನೋಡಲು ಹೋಗಿದ್ದೆ : ಡಿಕೆಶಿ ಪುತ್ರಿ ಐಶ್ವರ್ಯಾ

ಬೇಡಿಕೆಗಳನ್ನು ಈಡೇರಿಸದ ಸರ್ಕಾರದ ವಿರುದ್ಧ ರೈತರು ಜೂನ್ 6 ರಂದು ಕುರುಕ್ಷೇತ್ರದಲ್ಲಿ ದೆಹಲಿ-ಅಮೃತಸರ ರಾಷ್ಟ್ರೀಯ ಹೆದ್ದಾರಿಯನ್ನು ತಡೆದು ಪ್ರತಿಭಟನೆ ನಡೆಸಿದರು. ಈ ವೇಳೆ ಪೊಲೀಸರು ರಸ್ತೆಯನ್ನು ತೆರವುಗೊಳಿಸಲು ಲಾಠಿಚಾರ್ಜ್ ಮಾಡಿದರು. ಅಧ್ಯಕ್ಷರು ಸೇರಿದಂತೆ ಒಂಬತ್ತು BKU ನಾಯಕರನ್ನು ಗಲಭೆ ಮತ್ತು ಕಾನೂನುಬಾಹಿರ ಸಭೆ ಸೇರಿದಂತೆ ವಿವಿಧ ಆರೋಪಗಳ ಮೇಲೆ ಬಂಧಿಸಲಾಗಿತ್ತು.

Share This Article