ಸಾರ್ವಜನಿಕ ಸ್ಥಳಗಳಲ್ಲಿ ಮಕ್ಕಳಿಗೆ ಹಾಲುಣಿಸಲು ಸೂಕ್ತ ಸೌಕರ್ಯ ಕಲ್ಪಿಸಿ – ಸರ್ಕಾರಗಳಿಗೆ ಸುಪ್ರೀಂ ಸೂಚನೆ

Public TV
1 Min Read

ನವದೆಹಲಿ: ತಾಯಂದಿರು ಮಕ್ಕಳಿಗೆ ಹಾಲುಣಿಸಲು ನೆರವಾಗುವ ಸಾಕಷ್ಟು ಸೌಲಭ್ಯಗಳನ್ನು ಒದಗಿಸಲು ಸರ್ಕಾರ ಬದ್ಧವಾಗಿರಬೇಕು ಎಂದು ಮಹಿಳಾ ಹಕ್ಕುಗಳ ಕುರಿತಂತೆ ಸುಪ್ರೀಂಕೋರ್ಟ್ (Supreme Court) ಮಹತ್ವದ ತೀರ್ಪು ನೀಡಿದೆ.

ಹಾಲುಣಿಸುವಿಕೆಯು ಮಹಿಳೆಯ ಸಂತಾನೋತ್ಪತ್ತಿ ಪ್ರಕ್ರಿಯೆಯ ಅವಿಭಾಜ್ಯ ಅಂಗವಾಗಿದ್ದು, ತಾಯಿ ಮತ್ತು ಮಗುವಿನ ಆರೋಗ್ಯ, ಯೋಗಕ್ಷೇಮಕ್ಕೆ ಅದು ಅತ್ಯಗತ್ಯ ಎಂದು ನ್ಯಾಯಮೂರ್ತಿಗಳಾದ ಬಿ.ವಿ ನಾಗರತ್ನ ಮತ್ತು ಪ್ರಸನ್ನ ಬಿ. ವರಾಳೆ ಅವರಿದ್ದ ಪೀಠ ತಿಳಿಸಿದೆ. ಮಕ್ಕಳಿಗೆ ಹಾಲುಣಿಸುವ ಹಕ್ಕನ್ನು ತಾಯಂದಿರು ಚಲಾಯಿಸಲು ಅನುಕೂಲವಾಗುವಂತೆ ಮಾಡುವುದು ಸರ್ಕಾರದ ಅತಿ ಪ್ರಾಶಸ್ತ್ಯದ ಕರ್ತವ್ಯವಾಗಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಮತ್ತು ಕೆಲಸದ ಸ್ಥಳಗಳಲ್ಲಿ ಸ್ತನ್ಯಪಾನ ಮಾಡಿಸುವುದಕ್ಕೆ ಕಳಂಕ ಬಾರದಂತೆ ನಾಗರಿಕರು ನೋಡಿಕೊಳ್ಳಬೇಕು ಎಂದು ಕೂಡ ನ್ಯಾಯಾಲಯ ಹೇಳಿದೆ. ಇದನ್ನೂ ಓದಿ: ಸ್ವ ಇಚ್ಛೆಯಿಂದ ಗ್ಯಾರಂಟಿ ಬಿಟ್ಟುಕೊಡುವ ಜನರಿಗಾಗಿ ವ್ಯವಸ್ಥೆ ಮಾಡುವ ಬಗ್ಗೆ ಚಿಂತನೆ: ಹೆಚ್.ಎಂ.ರೇವಣ್ಣ

ಸಾರ್ವಜನಿಕ ಸ್ಥಳಗಳಲ್ಲಿ ಶಿಶುಗಳು ಮತ್ತು ತಾಯಂದಿರಿಗೆ ಅಗತ್ಯವಿರುವ ಹಾಲುಣಿಸುವ ಕೊಠಡಿಗಳು ಮತ್ತು ಮಕ್ಕಳ ಆರೈಕೆ ಕೊಠಡಿಗಳು ಅಥವಾ ಅಂತಹ ಬೇರೆ ಸೌಲಭ್ಯಗಳನ್ನು ಸರ್ಕಾರ ರೂಪಿಸಲು ನಿರ್ದೇಶನ ನೀಡುವಂತೆ ಕೋರಿ ಅವ್ಯಾನ್ ಪ್ರತಿಷ್ಠಾನ ಅರ್ಜಿ ಸಲ್ಲಿಸಿತ್ತು.

ಸಾರ್ವಜನಿಕ ಸ್ಥಳಗಳಲ್ಲಿ ಹಾಲುಣಿಸುವ ಕೇಂದ್ರ, ಶಿಶುವಿಹಾರಗಳ ನಿರ್ಮಿಸುವ ಸಂಬಂಧ ಕೇಂದ್ರ ಸರ್ಕಾರ 2024ರ ಫೆಬ್ರವರಿಯಲ್ಲಿ ನೀಡಿದ್ದ ಸಲಹೆಯನ್ನು ಜ್ಞಾಪನಾಪತ್ರದ ರೂಪದಲ್ಲಿ ಇನ್ನೆರಡು ವಾರಗಳಲ್ಲಿ ರಾಜ್ಯ ಸರ್ಕಾರಗಳಿಗೆ ನೀಡಬೇಕೆಂದು ನ್ಯಾಯಾಲಯ ಇದೇ ವೇಳೆ ಕೇಂದ್ರ ಸರ್ಕಾರಕ್ಕೆ ನಿರ್ದೇಶಿಸಿದೆ.ಇದನ್ನೂ ಓದಿ: ಹಾವೇರಿ| ಕೆರೆಗೆ ಹಾರಿ ಎಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ

Share This Article