ಬೆಂಗಳೂರು: ರಾಜ್ಯದಲ್ಲಿರುವ ಮಹಿಳೆಯರಲ್ಲಿ ಗರ್ಭಕಂಠ ಕ್ಯಾನ್ಸರ್ (Cervical Cancer) ತಡೆಗಟ್ಟುವ ನಿಟ್ಟಿನಲ್ಲಿ ಉಚಿತ ಲಸಿಕೆ ನೀಡುವಂತೆ ಅವರು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ (Nagalakshmi Choudhary) ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಗರ್ಭಕಂಠ ಕ್ಯಾನ್ಸರ್ ತಡೆಯುವ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಪತ್ರ ಬರೆದಿದ್ದಾರೆ.
ತಮಿಳುನಾಡು (TamilNadu) ರಾಜ್ಯದಲ್ಲಿ ಗರ್ಭಕಂಠ ಕ್ಯಾನ್ಸರ್‌ಗೆ ಕಾರಣವಾಗುವ ಎಚ್.ಪಿ.ವಿ. ವೈರಸ್ ತಡೆಗಟ್ಟಲು ಉಚಿತ ಲಸಿಕೆ ನೀಡುತ್ತಿದೆ. ರಾಜ್ಯದಲ್ಲೂ ಗರ್ಭಕಂಠ ಕ್ಯಾನ್ಸರ್‌ಗೆ ಕಾರಣವಾಗುವ ವೈರಸ್ ತಡೆಗಟ್ಟುವಲ್ಲಿ ಮಹಿಳೆಯರಿಗೆ ಉಚಿತವಾಗಿ ಲಸಿಕೆ ನೀಡಿ, ಅವರಲ್ಲಿ ಕ್ಯಾನ್ಸರ್ ತಡೆಗಟ್ಟಲು ನೆರವಾಗಬೇಕು ಎಂದು ಮನವಿ ಮಾಡಿದ್ದಾರೆ.


