ವಿಜಯಪುರ | ಪ್ರಚೋದನಕಾರಿ ಭಾಷಣ – ಕನ್ನೇರಿ ಶ್ರೀಗಳಿಗೆ ಜಿಲ್ಲಾ ಪ್ರವೇಶ ನಿರ್ಬಂಧಿಸಿದ ಡಿಸಿ

Public TV
1 Min Read

ವಿಜಯಪುರ: ಪ್ರಚೋದನಕಾರಿ ಭಾಷಣ ಹಿನ್ನೆಲೆ ಕನ್ನೇರಿ (Kanneri) ಅದೃಶ್ಯ ಕಾಡಸಿದ್ದೇಶ್ವರ ಶ್ರೀಗಳಿಗೆ 2 ತಿಂಗಳುಗಳ ಕಾಲ ವಿಜಯಪುರ (Vijayapura) ಜಿಲ್ಲಾ ಪ್ರವೇಶಕ್ಕೆ ಜಿಲ್ಲಾಧಿಕಾರಿ ಆನಂದ.ಕೆ ನಿರ್ಬಂಧ ವಿಧಿಸಿ ಆದೇಶಿಸಿದ್ದಾರೆ.

ಇತ್ತೀಚೆಗೆ ಮಹಾರಾಷ್ಟ್ರದ ಜತ್ತ ತಾಲೂಕಿನ ಬೀಳೂರು ಗ್ರಾಮದಲ್ಲಿ ಸಿಎಂ ಸಿದ್ಧರಾಮಯ್ಯ ವಿರುದ್ಧ ಕನ್ನೇರಿ ಶ್ರೀಗಳು ಗುಡುಗಿದ್ದರು. ಭಾಷಣ ವೇಳೆ ಸಿಎಂ ಸಿದ್ದರಾಮಯ್ಯ ಕೃಪಾಪೋಷಿತ ಲಿಂಗಾಯತ ಮಠಾಧೀಶರ ಒಕ್ಕೂಟ ಎಂದು ಭಾಷಣ ಮಾಡಿದ್ದರು. ಅಲ್ಲದೇ ಲಿಂಗಾಯತ ಮಠಾಧೀಶರ ಕುರಿತು ಆಕ್ಷೇಪಾರ್ಹ ಮಾತುಗಳನ್ನಾಡಿದ್ದರು. ಈ ಹಿನ್ನೆಲೆ ಜಿಲ್ಲಾಧಿಕಾರಿ ಕೆ.ಆನಂದ್ ಅವರು ಈ ನಿರ್ಧಾರ ತೆಗೆದುಕೊಂಡಿದ್ದು, ಎರಡು ತಿಂಗಳುಗಳ ಕಾಲ ಜಿಲ್ಲಾ ಪ್ರವೇಶಕ್ಕೆ ನಿರ್ಬಂಧ ಹೇರಿದ್ದಾರೆ.ಇದನ್ನೂ ಓದಿ: ನಾಮಪತ್ರ ಸಲ್ಲಿಕೆಗೆ ನಾಳೆ ಡೆಡ್‌ಲೈನ್‌| ಇನ್ನೂ ಅಂತಿಮಗೊಳ್ಳದ ಸೀಟ್‌ ಹಂಚಿಕೆ – ಲಾಲೂಗೆ ರಾಹುಲ್‌ ಕರೆ

ಇಂದಿನಿಂದ (ಅ.16) ಡಿಸೆಂಬರ್ 15ರವರೆಗೂ ಜಿಲ್ಲಾ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಇನ್ನೂ ಇಂದು ಹಾಗೂ ನಾಳೆ (ಅ.17) ಬಸವನ ಬಾಗೇವಾಡಿಯಲ್ಲಿ ಆಯೋಜಿಸಲಾಗಿದ್ದ ಸಿದ್ದರಾಮೇಶ್ವರ ಸಪ್ತಾಹ ಕಾರ್ಯಕ್ರಮಕ್ಕೆ ಬರುವುದಾಗಿ ಕನ್ಹೇರಿ ಶ್ರೀಗಳು ಹೇಳಿದ್ದರು. ಈ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ಆನಂದ.ಕೆ ಅವರು ಈ ಕ್ರಮ ಕೈಗೊಂಡಿದ್ದಾರೆ.

Share This Article