‘ದಿಯಾ’ ಫ್ಲೇವರ್‌ನಲ್ಲಿ ‘ಜೂನಿ’ ಕ್ಯಾರೆಕ್ಟರ್‌ ಟೀಸರ್‌ ಅನಾವರಣ – Chef ಆದ ಪೃಥ್ವಿ ಅಂಬಾರ್

Public TV
1 Min Read

ಸ್ಯಾಂಡವುಲ್‌ನಲ್ಲಿ ‘ದಿಯಾ’ (Dia) ಅನ್ನುವ ಸಿನಿಮಾ ಬಂದಿತ್ತು. ಈ ಚಿತ್ರದ ನಾಯಕ ಪೃಥ್ವಿ ಅಂಬಾರ್ (Pruthvi Ambaar) ಅದ್ಭುತವಾಗಿಯೇ ಅಭಿನಯಿಸಿದ್ದರು. ಇದೀಗ ಅಂತಹದ್ದೆ ಪ್ರೇಮಕಥೆಯ ಹೊತ್ತು ಬಂದಿರುವ ‘ಜೂನಿ’ ಕ್ಯಾರೆಕ್ಟರ್ ಟೀಸರ್ ಅನಾವರಣಗೊಂಡಿದೆ. ‘ಜೂನಿ’ ಕ್ಯಾರೆಕ್ಟರ್ ಟೀಸರ್ ದಿಯಾ ಸಿನಿಮಾ ಫ್ಲೇವರ್ ಕೊಡುತ್ತಿದೆ. ಚೆಫ್ ಅವತಾರದಲ್ಲಿ ಪೃಥ್ವಿ ಕಾಣಿಸಿಕೊಂಡಿದ್ದಾರೆ. ಸಖತ್ ಇಂಪ್ರೆಸಿವ್ ಆಗಿದೆ ಕ್ಯಾರೆಕ್ಟರ್ ಟೀಸರ್.

‘ಜನ್ನಿ’ ಎಂಬ ಕಿರುಚಿತ್ರ ನಿರ್ದೇಶಿಸಿದ್ದ ವೈಭವ್ ಮಹಾದೇವ್ ‘ಜೂನಿ’ ಸಿನಿಮಾ ಮೂಲಕ ನಿರ್ದೇಶಕರಾಗಿ ಮೊದಲ ಹೆಜ್ಜೆ ಇಡುತ್ತಿದ್ದಾರೆ. ಪ್ರಾಗ್ ಫಿಲ್ಮ್ ಸ್ಕೂಲ್ ನಲ್ಲಿ ನಿರ್ದೇಶಕರ ಕೋರ್ಸ್ ಮುಗಿಸಿರುವ ಅವರೀಗ ಈ ಚಿತ್ರಕ್ಕೆ ಕಥೆ ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ವಿಭಿನ್ನ ಟೈಟಲ್ `ಜೂನಿ’ ಸಿನಿಮಾದಲ್ಲಿ ನಾಯಕಿ ರಿಷಿಕಾ ನಾಯಕ್ ನಟಿಸಿದ್ದಾರೆ.

‘ಜೂನಿ’ (Juni) ರೊಮ್ಯಾಂಟಿಕ್ ಕಥಾಹಂದರದ ಸಿನಿಮಾ.’ದಿಯಾ’ (Dia Film) ಬಳಿಕ ಪೃಥ್ವಿ ಮತ್ತೊಮ್ಮೆ ಪ್ರೇಮಕಥೆಗೆ ಬಣ್ಣ ಹಚ್ಚಿದ್ದಾರೆ. ಯಾರ ಮೇಲೆ ಪ್ರೀತಿ ಹುಟ್ಟುತ್ತೋ ಅವರ ಮೇಲೆ ಪ್ರೀತಿ ಆಗುತ್ತಾ? ಎಂಬ ಕಥೆಯ ಎಳೆ ಇಟ್ಕೊಂಡು ಚಿತ್ರ ಹೆಣೆಯಲಾಗಿದೆ. ತ್ರಿಶೂಲ ಕ್ರಿಯೇಷನ್ ನಡಿ ಮೋಹನ್ ಕುಮಾರ್ ಎಸ್ ಹಣ ಹಾಕಿದ್ದು, ಶ್ರೇಯಸ್ ವೈ ಎಸ್ ಸಹ ನಿರ್ಮಾಪಕರಾಗಿ ಜವಾಬ್ದಾರಿ ಹೊತ್ತಿದ್ದಾರೆ. ಇದನ್ನೂ ಓದಿ:ಸ್ಟೈಲೀಶ್‌ ಆಗಿ ಫೋಟೋಶೂಟ್‌ನಲ್ಲಿ ಕಂಗೊಳಿಸಿದ ಸಾನ್ಯ ಅಯ್ಯರ್

ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ಮುಗಿಸಿರುವ ‘ಜೂನಿ’ ಸಿನಿಮಾ ಸದ್ಯದಲ್ಲೇ ರಿಲೀಸ್ ಆಗಲಿದೆ. ನಕುಲ್ ಅಭ್ಯಂಕರ್ ಸಂಗೀತ ನಿರ್ದೇಶನ ಮಾಡಿದ್ದಾರೆ. ಶಶಾಂಕ್ ನಾರಾಯಣ ಅವರು ಸಂಕಲನದ ಜವಾಬ್ದಾರಿ ನಿಭಾಯಿಸಿದ್ದಾರೆ. ಅಜಿನ್ ಬಿ, ಜಿತಿನ್ ದಾಸ್ ಛಾಯಾಗ್ರಹಣ ಮಾಡಿದ್ದಾರೆ. ನವೀನ್ ಅವರ ಕಲಾ ನಿರ್ದೇಶನ ಈ ಸಿನಿಮಾಗಿದೆ.

Share This Article