ಪಿಎಸ್‌ಐ ನೇಮಕಾತಿ ಅಕ್ರಮ : ಅಶ್ವಥ್ ನಾರಾಯಣ ವಿಚಾರಣೆ

Public TV
1 Min Read

ಬೆಂಗಳೂರು: ರಾಜ್ಯದಲ್ಲಿ ಸಂಚಲನ ಸೃಷ್ಟಿ ಮಾಡಿದ್ದ ಪ್ರಕರಣದಲ್ಲಿ ರಾಜ್ಯದ ಮಾಜಿ ಉಪಮುಖ್ಯಮಂತ್ರಿ ಅಶ್ವಥ್ ನಾರಾಯಣ (Ashwath Narayana) ಅವರನ್ನು ವಿಶೇಷ ತನಿಖಾ ತಂಡದ (SIT) ಪೊಲೀಸರು ವಿಚಾರಣೆ ನಡೆಸಿದ್ದಾರೆ.

ನೇಮಕಾತಿ ಹಗರಣದಲ್ಲಿ ಮಾಗಡಿ (Magadi) ಮೂಲದವರು ಅತಿ ಹೆಚ್ಚಾಗಿ ಮತ್ತು ಸಂಬಂಧಿಕರು ಆಯ್ಕೆ ಆಗಿದ್ದಾರೆ. ಇದನ್ನೆಲ್ಲಾ ಅಶ್ವಥ್‌ ನಾರಾಯಣ ಮಾಡಿಸಿದ್ದಾರೆ ಎಂದು ಕಾಂಗ್ರೆಸ್ ಆರೋಪ ಮಾಡಿತ್ತು. ಇದನ್ನೂ ಓದಿ: ಕುಂಭ ಮೇಳ ಕಾಲ್ತುಳಿತದ ಹಿಂದೆ ಇದ್ಯಾ ಪಿತೂರಿ? – ಸಕ್ರಿಯವಾಗಿದ್ದ 16 ಸಾವಿರ ಮೊಬೈಲ್‌ಗಳ ಪೈಕಿ ಬಹುತೇಕ ಸ್ವಿಚ್‌ ಆಫ್‌!

 

ಕಾಂಗ್ರೆಸ್ ಸರ್ಕಾರ ಪಿಎಸ್‌ಐ ಹಗರಣದ ಮರುತ‌ನಿಖೆಗೆ ಆದೇಶಿಸಿತ್ತು. ಈ ಬಗ್ಗೆ ತನಿಖೆ ನಡೆಸುತ್ತಿರುವ ಎಸ್‌ಐಟಿ ಅಶ್ವಥ್ ನಾರಾಯಣ ಅವರಿಗೆ ನೋಟಿಸ್ ನೀಡಿ ವಿಚಾರಣೆ ನಡೆಸಿದೆ.

ವಿಚಾರಣೆಗೆ ಹಾಜರಾದ ಅಶ್ವಥ್ ನಾರಾಯಣ ಇದಕ್ಕೂ ನನಗೂ ಯಾವುದೇ ಸಂಬಂಧ ಇಲ್ಲ, ಇದೊಂದು ರಾಜಕೀಯ ಪ್ರೇರಿತ ಎಂದು ಹೇಳಿಕೆ ನೀಡಿದ್ದಾರೆ.

 

Share This Article