Public TV Exclusive: ಬೆಂಗ್ಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಇಟ್ಟ ಶಂಕಿತನ ಫೋಟೋ ‌ಲಭ್ಯ

Public TV
1 Min Read

ಬೆಂಗಳೂರು: ಶುಕ್ರವಾರ ಮಧ್ಯಾಹ್ನ ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ (Rameshwaram Cafe) ನಡೆದ ಬಾಂಬ್‌ ಬ್ಲಾಸ್ಟ್‌ ಪ್ರಕರಣ ಇಡೀ ಬೆಂಗಳೂರನ್ನೇ ಬೆಚ್ಚಿ ಬೀಳಿಸಿದೆ. ಇದೀಗ ಆರೋಪಿಯ ಎಕ್ಸ್‌ ಕ್ಲೂಸೀವ್‌ ವೀಡಿಯೋ ಹಾಗೂ ಫೋಟೋ ಪಬ್ಲಿಕ್‌ ಟಿವಿಗೆ ಲಭ್ಯವಾಗಿದೆ.

ತನ್ನ ಚಹರೆ ಎಲ್ಲೂ ಬೀಳದಿರಲಿ ಅಂತಾ ಶಂಕಿತ ಉಗ್ರ ಮುಖಕ್ಕೆ ಮಾಸ್ಕ್ ಕಣ್ಣಿಗೆ ಕೂಲಿಂಗ್ ಗ್ಲಾಸ್, ತಲೆ ಮೇಲೆ ವೈಟ್ ಹ್ಯಾಟ್ ಹಾಕಿಕೊಳ್ಳುವ ಮೂಲಕ ಮೊದಲೇ ಪ್ರೀ ಪ್ಲಾನ್ ಮಾಡಿಕೊಂಡು ಕೆಫೆಗೆ ಎಂಟ್ರಿ ಕೊಟ್ಟಿದ್ದಾನೆ. ಜೊತೆಗೆ ಬಲಭುಜದ ಹಿಂಬದಿಗೆ ಕಪ್ಪು ಬಣ್ಣದ ಬ್ಯಾಗ್ ಹಾಕಿಕೊಂಡು ಹೋಟೆಲ್ ಗೆ ಬಂದಿರುವ ಆರೋಪಿ ಹೋಟೆಲ್ ನಲ್ಲಿ ತಿಂಡಿ  ತಿಂದು ಸಾಗುವ ಎಕ್ಸ್ ಕ್ಲೂಸಿವ್ ಫೋಟೋ ಕೂಡ ಸಿಕ್ಕಿದೆ.

ಟೋಕನ್ ತೆಗೆದುಕೊಂಡ ಶಂಕಿತ ರವೆ ಇಡ್ಲಿ ತಿಂದು ಹ್ಯಾಡ್ ವಾಶಿಂಗ್‌ಗೆ ಹೋಗಿದ್ದಾನೆ. ಹ್ಯಾಂಡ್ ವಾಶ್ ಮಾಡಿ ಬ್ಯಾಗ್ ಅಲ್ಲೇ ಇಟ್ಟು ಬೈಕ್‌ನಲ್ಲಿ ತೆರಳಿದ್ದಾನೆ. ಆತ ಹೋದ ಸುಮಾರು ಒಂದು ಗಂಟೆಯ ಬಳಿಕ ಈ ಬ್ಯಾಗ್‌ ಬ್ಲಾಸ್ಟ್‌ ಆಗಿದೆ. ಸದ್ಯ ಬೈಕ್ ಮಾಲೀಕ ಯಾರು..? ಬೈಕ್ ಎಲ್ಲಿನದ್ದು ಎಂಬುದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಬ್ರ್ಯಾಂಡ್ ಬೆಂಗಳೂರು ಮಾಡದಿದ್ದರೂ ಪರವಾಗಿಲ್ಲ, ಬಾಂಬ್ ಬೆಂಗಳೂರು ಮಾಡಬೇಡಿ: ಅಶೋಕ್‌ ಕಿಡಿ

ಬಾಂಬ್ ಬ್ಲಾಸ್ಟ್ ಸಮಯ
11:35 – ಹೋಟೆಲ್‌ಗೆ ಬಾಂಬರ್‌ ಆಗಮನ
11:35 – ಕ್ಯಾಶ್ ಕೌಂಟರ್ ಅಲ್ಲಿ ರವೆ ಇಡ್ಲಿ ಟೋಕನ್‌ ಖರೀದಿ
11:42 – ಇಡ್ಲಿ ತಿಂದು ಕೈ ತೊಳೆಯುವ ಜಾಗಕ್ಕೆ ಬಂದ ಆರೋಪಿ
11:44 – ಕೈತೊಳೆಯುವ ಜಾಗದಲ್ಲೇ ಬ್ಯಾಗ್ ಇರಿಸಿ ಪರಾರಿ
12:55 – ಬಾಂಬ್‌ ಸ್ಫೋಟ

Share This Article