ಪುಣೆ ಏರ್‌ಪೋರ್ಟ್ ಹೆಸರು ಬದಲಾವಣೆ – ಜಗದ್ಗುರು ಸಂತ ತುಕಾರಾಂ ನಿಲ್ದಾಣವಾಗಿ ಮರುನಾಮಕರಣ

Public TV
1 Min Read

ಮುಂಬೈ: ಪುಣೆ ವಿಮಾನ ನಿಲ್ದಾಣಕ್ಕೆ (Pune Airport) ಜಗದ್ಗುರು ಸಂತ ತುಕಾರಾಂ ಮಹಾರಾಜ್ ವಿಮಾನ ನಿಲ್ದಾಣ (Jagadguru Saint Tukaram Maharaj Airport) ಎಂದು ಮರುನಾಮಕರಣ ಮಾಡುವಂತೆ ಮಹಾರಾಷ್ಟ್ರ ಸರ್ಕಾರ ನಿರ್ಧರಿಸಿದೆ.

ಪುಣೆಯ ಲೋಹೆಗಾಂವ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು (International Airport) ಜಗದ್ಗುರು ಸಂತ ತುಕಾರಾಂ ಮಹಾರಾಜ್ ಪುಣೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಯನ್ನು ಏಕನಾಥ್ ಶಿಂಧೆ (Ekanath Shinde) ನೇತೃತ್ವದ ಮಹಾರಾಷ್ಟ್ರ ಸರ್ಕಾರ (Maharashtra Government) ಸೋಮವಾರ ಅನುಮೋದಿಸಿದೆ.ಇದನ್ನೂ ಓದಿ: PUBLiC TV Impact – ವರದಿಯ ಬೆನ್ನಲ್ಲೇ ಅಧಿಕಾರಿಗಳು ಎಚ್ಚೆತ್ತು ಬಾಲಕನಿಗೆ ಶಿಕ್ಷಣ ಭಾಗ್ಯ

ಇದಕ್ಕೂ ಮೊದಲು ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ (Nithin Gadkari) ಪುಣೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮರುನಾಮಕರಣ ಮಾಡುವಂತೆ ಶಿಫಾರಸು ಮಾಡಿದ್ದರು.

ವಿಮಾನಯಾನ ಸಚಿವ ಮುರುಳೀಧರ್ ಮೊಹೇಲ್ (Murlidhar Mohol) ಮಾತನಾಡಿ, ಇದೀಗ ಏಕ್‌ನಾಥ್ ಶಿಂಧೆ ನೇತೃತ್ವದ ಸರ್ಕಾರವು ಮಹಾರಾಜ್ ಪುಣೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಮರುನಾಮಕರಣ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಇಂದು ಸಲ್ಲಿಸಿದೆ. ಮರುನಾಮಕರಣ ನಿಟ್ಟಿನಲ್ಲಿ ಇದು ನಮ್ಮ ಮೊದಲ ಹೆಜ್ಜೆಯಾಗಿದೆ ಎಂದು ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಾಕಿಕೊಂಡಿದ್ದಾರೆ.

ಕೇಂದ್ರ ಸರ್ಕಾರ ಮತ್ತು ಸಚಿವ ಸಂಪುಟಕ್ಕೆ ಪ್ರಸ್ತಾವನೆ ಕಳುಹಿಸಲಾಗಿದ್ದು, ವಿಮಾನ ನಿಲ್ದಾಣಕ್ಕೆ ಮರುನಾಮಕರಣ ಮಾಡುವ ಕುರಿತು ಅಂತಿಮ ನಿರ್ಧಾರ ಕೈಗೊಳ್ಳಲಿದೆ ಎಂದು ಮೂಲಗಳು ತಿಳಿಸಿವೆ.ಇದನ್ನೂ ಓದಿ: 5 ಲಕ್ಷ ಪಾವತಿಸಿ ಇಲ್ಲವೇ ದುರ್ಗಾ ಪೂಜೆ ಆಚರಿಸಬೇಡಿ: ಬಾಂಗ್ಲಾ ಹಿಂದೂ ದೇವಾಲಯಗಳಿಗೆ ಬೆದರಿಕೆ

Share This Article