ಪುಣೆ: ಕಳೆದ ವರ್ಷ ಪುಣೆಯಲ್ಲಿ ಕುಡಿದ ಮತ್ತಿನಲ್ಲಿ ಪೋರ್ಷೆ ಕಾರನ್ನು (Porsche Car) ಚಲಾಯಿಸಿ ಇಬ್ಬರು ವ್ಯಕ್ತಿಗಳ ಸಾವಿಗೆ ಕಾರಣನಾದ 17 ವರ್ಷದ ಬಾಲಕನನ್ನು ಬಾಲಾಪರಾಧಿ ಎಂದು ಪರಿಗಣಿಸಿ ವಿಚಾರಣೆ ನಡೆಸಲಾಗುವುದು ಎಂದು ಬಾಲ ನ್ಯಾಯ ಮಂಡಳಿ (Juvenile Justice Board) ತಿಳಿಸಿದೆ.
ಈ ಘಟನೆ ಕಳೆದ ವರ್ಷ ಮೇ 19ರಂದು ಕಲ್ಯಾಣಿ ನಗರ (Kalyani Nagar) ಪ್ರದೇಶದಲ್ಲಿ ನಡೆದಿತ್ತು. ಈ ಅಪಘಾತದಲ್ಲಿ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ಐಟಿ ಕಂಪನಿಯ ಉದ್ಯೋಗಿಗಳಾಗಿದ್ದ ಅನೀಶ್ ಅವಧಿಯಾ ಮತ್ತು ಅವರ ಸ್ನೇಹಿತೆ ಅಶ್ವಿನಿ ಕೋಸ್ಟಾ ಮೃತಪಟ್ಟಿದ್ದರು. ಇದನ್ನೂ ಓದಿ: ಯುಎಇಯಲ್ಲಿ ಕೇರಳದ ಮಹಿಳೆ ಆತ್ಮಹತ್ಯೆ; ಪತಿ, ಅತ್ತೆ-ಮಾವ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ
ಕಳೆದ ವರ್ಷ ಪುಣೆ ಪೊಲೀಸರು (Pune Police) ಆರೋಪಿಯನ್ನು ವಯಸ್ಕ ಎಂದು ಪರಿಗಣಿಸಿ ವಿಚಾರಣೆ ನಡೆಸಬೇಕೆಂದು ಕೋರಿದ್ದರು. ಅಪಘಾತ ಮಾಡಿ ಇಬ್ಬರನ್ನು ಕೊಂದಿದ್ದಲ್ಲದೇ ಸಾಕ್ಷ್ಯಗಳನ್ನು ತಿರುಚುವ ಪ್ರಯತ್ನಗಳು ನಡೆದಿವೆ ಎಂದು ಹೇಳಿದ್ದರು. ಇದನ್ನೂ ಓದಿ: ವಿದ್ಯಾರ್ಥಿನಿ ಮೇಲೆ ರೇಪ್,ಬ್ಲ್ಯಾಕ್‌ಮೇಲ್ – ಮೂಡುಬಿದಿರೆ ಕಾಲೇಜಿನ ಇಬ್ಬರು ಉಪನ್ಯಾಸಕರು, ಸ್ನೇಹಿತ ಅರೆಸ್ಟ್
ಮಂಗಳವಾರ, ಬಾಲ ನ್ಯಾಯ ಮಂಡಳಿಯು ಆರೋಪಿ ಬಾಲಕನನ್ನು ವಯಸ್ಕ ಎಂದು ಪರಿಗಣಿಸಬೇಕೆಂಬ ಪೊಲೀಸರ ಮನವಿಯನ್ನು ತಿರಸ್ಕರಿಸಿದೆ ಎಂದು ವಕೀಲರು ತಿಳಿಸಿದ್ದಾರೆ. ಈ ಅಪಘಾತ ನಡೆದ ಕೆಲವೇ ಗಂಟೆಗಳಲ್ಲಿ ಆರೋಪಿಗೆ ಜಾಮೀನು ಸಿಕ್ಕಿತ್ತು. ಇದನ್ನೂ ಓದಿ: ಇದೇ ರೀತಿ 20 ದೇಶದ ಕಾಡಿನಲ್ಲಿ ವಾಸವಿದ್ದೆವು – ಗೋಕರ್ಣ ಗುಹೆಯಲ್ಲಿ ವಾಸವಿದ್ದ ರಷ್ಯಾ ಮಹಿಳೆ ಮಾತು
ಜೂ.25, 2024ರಂದು, ಬಾಂಬೆ ಹೈಕೋರ್ಟ್ ಬಾಲಕನನ್ನು ತಕ್ಷಣವೇ ಬಿಡುಗಡೆ ಮಾಡುವಂತೆ ಆದೇಶ ನೀಡಿತ್ತು. ಬಾಲ ನ್ಯಾಯ ಮಂಡಳಿಯು ಅಪ್ರಾಪ್ತ ಆರೋಪಿಯನ್ನು ವೀಕ್ಷಣಾ ಗೃಹಕ್ಕೆ ಕಳುಹಿಸುವುದು ಕಾನೂನುಬಾಹಿರವಾಗಿದೆ ಎಂದು ಹೇಳಿತ್ತು.