ಅಪ್ರಾಪ್ತನ ಹುಚ್ಚಾಟಕ್ಕೆ ಇಬ್ಬರು ಟೆಕ್ಕಿಗಳು ಬಲಿ – ಅಪಘಾತದ ಬಗ್ಗೆ ಪ್ರಬಂಧ ಬರೆಯುವಂತೆ ಸೂಚಿಸಿದ ಕೋರ್ಟ್‌

Public TV
1 Min Read

ಮುಂಬೈ: ಮಹಾರಾಷ್ಟ್ರದ ಪುಣೆಯಲ್ಲಿ (Pune) ಅಪ್ರಾಪ್ತನ ನಿರ್ಲಕ್ಷ್ಯಕ್ಕೆ ಇಬ್ಬರ ಜೀವ ಬಲಿ ಪಡೆದಿದೆ. ಈ ಪ್ರಕರಣದಲ್ಲಿ ಅಪ್ರಾಪ್ತನಿಗೆ ಜಾಮೀನು (Bail) ನೀಡುವ ಸಮಯದಲ್ಲಿ ಕೋರ್ಟ್ (Court) ವಿಧಿಸಿದ ಷರತ್ತು ಚರ್ಚೆಗೆ ಗ್ರಾಸವಾಗಿದೆ.

ಭಾನುವಾರ ರಾತ್ರಿ ಪ್ರತಿಷ್ಠಿತ ಬಿಲ್ಡರ್‌ನ 17 ವರ್ಷದ ಪುತ್ರನೊಬ್ಬ ಮದ್ಯದ ಅಮಲಿನಲ್ಲಿ ಐಷಾರಾಮಿ ಪೋರ್ಶೆ ಕಾರನ್ನು ಅಡ್ಡಾದಿಡ್ಡಿಯಾಗಿ ಚಲಾಯಿಸಿ ಇಬ್ಬರ ಟೆಕ್ಕಿಗಳನ್ನ ಬಲಿ ಪಡೆದಿದ್ದ.


ಆರೋಪಿಯನ್ನು ಬಂಧಿಸಿದ ಪೊಲೀಸರು ಕೋರ್ಟ್ ಮುಂದೆ ಹಾಜರುಪಡಿಸಿದರು. ವಿಚಾರಣೆ ನಡೆಸಿದ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಈ ಸಂದರ್ಭದಲ್ಲಿ ಅಪಘಾತದ ಬಗ್ಗೆ ಪ್ರಬಂಧ ಬರೆಯಬೇಕು. 15 ದಿನ ಟ್ರಾಫಿಕ್ ಪೊಲೀಸರ ಜೊತೆ ಕೆಲಸ ಮಾಡಬೇಕು. ಮಾನಸಿಕ ತಜ್ಞರಿಂದ ಕೌನ್ಸಿಲಿಂಗ್ ತೆಗೆದುಕೊಳ್ಳಬೇಕು ಎಂಬ ಷರತ್ತುಗಳನ್ನು ವಿಧಿಸಿದೆ. ಇದನ್ನೂ ಓದಿ: ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಗೌರವಾರ್ಥ ಮಂಗಳವಾರ ಭಾರತದಲ್ಲಿ ಶೋಕಾಚರಣೆ

ಇದು ಭಾರೀ ಚರ್ಚೆಗೆ ಗುರಿಯಾಗಿದೆ. ಇಬ್ಬರ ಸಾವಿಗೆ ಇದೇನಾ ನ್ಯಾಯ ಎಂದು ಪ್ರಶ್ನಿಸಿ ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

Share This Article