ಕರ್ನಾಟಕ ರತ್ನ ಪುನೀತ್ ರಾಜ್‌ಕುಮಾರ್ ಜನ್ಮದಿನ; ಕಂಠೀರವ ಸ್ಟುಡಿಯೋದಲ್ಲಿ ಅಭಿಮಾನಿಗಳ ಸಾಗರ – ಅಪ್ಪು ಸಮಾಧಿ ದರ್ಶನ

By
1 Min Read

ಇಂದು (ಮಾ.17) ಸ್ಯಾಂಡಲ್‌ವುಡ್‌ ನಟ ಪವರ್‌ ಸ್ಟಾರ್‌ ದಿವಂಗತ ಪುನೀತ್‌ ರಾಜ್‌ಕುಮಾರ್‌ (Puneeth Rajkumar) ಅವರ ಜನ್ಮದಿನ. ನೆಚ್ಚಿನ ನಟ ಜನ್ಮದಿನವನ್ನು ಅಭಿಮಾನಿಗಳು ಸ್ಮರಣೀಯವಾಗಿ ಆಚರಿಸುತ್ತಿದ್ದಾರೆ. ನಿನ್ನೆ ರಾತ್ರಿಯಿಂದಲೇ ಕಂಠೀರವ ಸ್ಟುಡಿಯೋಗೆ ಅಭಿಮಾನಿಗಳು ಆಗಮಿಸುತ್ತಿದ್ದು, ಅಪ್ಪು ಸಮಾಧಿ ದರ್ಶನ ಪಡೆಯುತ್ತಿದ್ದಾರೆ.

ಅಪ್ಪು ಅವರ 49ನೇ ಜನ್ಮದಿನದ ಹಿನ್ನೆಲೆಯಲ್ಲಿ ಶನಿವಾರ ರಾತ್ರಿ ನಟ ಯುವ ರಾಜ್‌ಕುಮಾರ್‌ ಪುನೀತ್‌ ಸಮಾಧಿ ದರ್ಶನ ಪಡೆದಿದ್ದಾರೆ. ನಂತರ ಅಪ್ಪು ಪುತ್ಥಳಿ ಅನಾವರಣ ಮಾಡಿದ್ದಾರೆ. ಭಾನುವಾರವಾದ ಇಂದು ನಗರದೆಲ್ಲೆಡೆ ಅಪ್ಪು ಪುತ್ಥಳಿಯ ತೇರು ಸಂಚರಿಸಲಿದೆ. ಇದನ್ನೂ ಓದಿ: ಮಾರ್ಚ್ 17ರಂದು ಪುನೀತ್‌ ರಾಜ್‌ಕುಮಾರ್‌ ಹುಟ್ಟುಹಬ್ಬದ ಆಚರಣೆ ಹೇಗಿರಲಿದೆ?

ಕುಟುಂಬ ಸಮೇತ ಅಪ್ಪು ಸಮಾಧಿ ದರ್ಶನಕ್ಕೆ ಅಭಿಮಾನಿಗಳು ಆಗಮಿಸುತ್ತಿದ್ದಾರೆ. ಎಲ್ಲೆಡೆ ಫ್ಯಾನ್ಸ್‌ ಪಟಾಕಿ ಸಿಡಿಸಿ ಸಂಭ್ರಮಿಸುತ್ತಿದ್ದಾರೆ. ಶನಿವಾರ ರಾತ್ರಿ 11 ಗಂಟೆಯಿಂದಲೇ ಕಂಠೀರವ ಸ್ಟೂಡಿಯೋಗೆ ಅಪ್ಪು ಫ್ಯಾನ್ಸ್ ಆಗಮಿಸುತ್ತಿದ್ದಾರೆ.

ಮಹಾಲಕ್ಷ್ಮಿ ಲೇಔಟ್ ಕ್ಷೇತ್ರದ ಶಾಸಕ ಗೋಪಾಲಯ್ಯ ಕೂಡ ಅಪ್ಪು ಸಮಾಧಿಗೆ ಭೇಟಿ ನೀಡಿ ದರ್ಶನ ಪಡೆದರು. ಫ್ಯಾನ್ಸ್‌ ಸಂಖ್ಯೆ ಹೆಚ್ಚಾಗುತ್ತಿದ್ದಂತೆ ಪೊಲೀಸರ ಬಂದೋಬಸ್ತ್‌ ವ್ಯವಸ್ಥೆ ಕಲ್ಪಿಸಲಾಗಿದೆ. ಪುನೀತ್‌ ಫೋಟೊ, ಗುಲಾಬಿ ಹೂವನ್ನು ಸಮಾಧಿ ಬಳಿ ಇಟ್ಟು ಅಪ್ಪು ಫ್ಯಾನ್ಸ್‌ ತಮ್ಮ ನೆಚ್ಚಿನ ನಟನನ್ನು ಭಾವಪೂರ್ಣವಾಗಿ ನೆನಪಿಸಿಕೊಳ್ಳುತ್ತಿದ್ದಾರೆ.

Share This Article