ಪಂಜಾಬ್‌ನಲ್ಲಿ ಗುಂಡಿಟ್ಟು ಆಪ್‌ ನಾಯಕನ ಹತ್ಯೆ

1 Min Read

ಚಂಡೀಗಢ: ಪಂಜಾಬ್‌ನ ಜಲಂಧರ್‌ನಲ್ಲಿ(Jalandhar) ಅಪರಿಚಿತ ದುಷ್ಕರ್ಮಿಗಳು ಆಮ್ ಆದ್ಮಿ ಪಕ್ಷದ (AAP) ನಾಯಕ ಲಕ್ಕಿ ಒಬೆರಾಯ್(Lucky Oberoi) ಅವರನ್ನು ಗುಂಡಿಟ್ಟು ಹತ್ಯೆ ಮಾಡಿದ್ದಾರೆ

ಒಬೆರಾಯ್ ಗುರುದ್ವಾರದ ಹೊರಗೆ ತಮ್ಮ ಕಾರನ್ನು ನಿಲ್ಲಿಸುತ್ತಿದ್ದಾಗ ದ್ವಿಚಕ್ರ ವಾಹನದಲ್ಲಿ ಬಂದ ದಾಳಿಕೋರರು ಅವರ ಮೇಲೆ ಗುಂಡು ಹಾರಿಸಿದ್ದಾರೆ.

ಕಾರಿನಲ್ಲಿದ್ದಾಗ ಐದು ಗುಂಡುಗಳು ಅವರ ದೇಹವನ್ನು ಹೊಕ್ಕಿದ್ದವು. ಕೂಡಲೇ ಅವರನ್ನು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟರು.

ಲಕ್ಕಿ ಒಬೆರಾಯ್ ಅವರ ಪತ್ನಿ ಈ ಹಿಂದೆ ಎಎಪಿ ಅಭ್ಯರ್ಥಿಯಾಗಿ ಪುರಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತಿದ್ದರು. ಇದನ್ನೂ ಓದಿ: ಅಲ್ಪಸಂಖ್ಯಾತರ ಕಲ್ಯಾಣಕ್ಕೆ ಮೀಸಲಾಗಿದ್ದ ಸರ್ಕಾರಿ ಜಾಗದಲ್ಲಿ ಪೇ & ಪಾರ್ಕ್ ವ್ಯವಹಾರ: ಒತ್ತುವರಿ ತೆರವು

 

ಪಂಜಾಬ್ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಪ್ರತಾಪ್ ಸಿಂಗ್ ಬಾಜ್ವಾ ಅವರು ರಾಜ್ಯ ಸರ್ಕಾರವನ್ನು ತೀವ್ರವಾಗಿ ಟೀಕಿಸಿದ್ದಾರೆ. ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಆಡಳಿತದಲ್ಲಿ ಪಂಜಾಬ್‌ನ ಕಾನೂನು ಸುವ್ಯವಸ್ಥೆ ಕುಸಿದಿದೆ” ಎಂದು ಅವರು ಸಿಟ್ಟು ಹೊರಹಾಕಿದರು.

ಜಲಂಧರ್‌ನ ಗುರುದ್ವಾರದ ಹೊರಗೆ ನಾಯಕ ಲಕ್ಕಿ ಒಬೆರಾಯ್ ಅವರನ್ನು ಹಗಲಿನಲ್ಲೇ ಹತ್ಯೆ ಮಾಡಿರುವುದು ರಾಜ್ಯದ ಕಾನೂನು ಪರಿಸ್ಥಿತಿಯ ವಾಸ್ತವವನ್ನು ಬಹಿರಂಗಪಡಿಸುತ್ತದೆ. ಆಡಳಿತ ಪಕ್ಷದ ನಾಯಕರು ಸಹ ಸುರಕ್ಷಿತವಾಗಿಲ್ಲದಿದ್ದರೆ ಸಾಮಾನ್ಯ ನಾಗರಿಕರಿಗೆ ಇನ್ನೇನು ಭರವಸೆ ಉಳಿದಿದೆ ಎಂದು ಪ್ರಶ್ನಿಸಿದ್ದಾರೆ.

Share This Article