ಚಂಡೀಗಢ ವಿಮಾನ ನಿಲ್ದಾಣಕ್ಕೆ ಭಗತ್ ಸಿಂಗ್ ಹೆಸರು!

Public TV
1 Min Read

ಚಂಡೀಗಢ: ಚಂಡೀಗಢದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಸ್ವಾತಂತ್ರ್ಯ ಹೋರಾಟಗಾರ ಶಹೀದ್ ಭಗತ್ ಸಿಂಗ್ ಅವರ ಹೆಸರಿನಿಂದ ಮರುನಾಮಕಾರಣ ಮಾಡಲು ಪಂಜಾಬ್ ಹಾಗೂ ಹರಿಯಾಣ ಸರ್ಕಾರಗಳು ನಿರ್ಧರಿಸಿದೆ.

ಈ ಬಗ್ಗೆ ಉಭಯ ಸರ್ಕಾರಗಳ ಸಭೆ ನಡೆದಿದ್ದು, ಹರಿಯಾಣದ ಉಪಮುಖ್ಯಮಂತ್ರಿ ದುಷ್ಯಂತ್ ಚೌತಾಲಾ ಉಪಸ್ಥಿತರಿದ್ದರು.

ಈ ಬಗ್ಗೆ ಪಂಜಾಬ್‍ನ ಮುಖ್ಯಮಂತ್ರಿ ಭಗವಂತ್ ಮಾನ್ ಟ್ವೀಟ್ ಮಾಡಿ, ಚಂಡೀಗಢ ವಿಮಾನ ನಿಲ್ದಾಣಕ್ಕೆ ಭಗತ್ ಸಿಂಗ್ ಹೆಸರನ್ನು ಇಡಲು ಪಂಜಾಬ್ ಹಾಗೂ ಹರಿಯಾಣ ಸರ್ಕಾರಗಳೆರಡು ಒಪ್ಪಿಕೊಂಡಿವೆ. ಈ ವಿಷಯದ ಕುರಿತು ಇಂದು ಹರಿಯಾಣ ಉಪಮುಖ್ಯಮಂತ್ರಿ ದುಶ್ಯಂತ್ ಚೌತಾಲಾ ಅವರನ್ನು ಭೇಟಿ ಮಾಡಿದ್ದೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಸಾವರ್ಕರ್ ಪಾರ್ಕ್ ನಿರ್ಮಾಣ – ಸ್ವಾತಂತ್ರ್ಯ ಸೇನಾನಿ ಎಂದು ಒಪ್ಪಿದ್ದ ಕಾಂಗ್ರೆಸ್ಸಿಗರು

ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಹೆಸರಿಡಲು ಸಲಹೆ ನೀಡಿರುವುದು ಇದೇ ಮೊದಲಲ್ಲ. 2016ರಲ್ಲಿ ಹರಿಯಾಣ ವಿಧಾನಸಭೆಯು ಚಂಡೀಗಢ ವಿಮಾನ ನಿಲ್ದಾಣಕ್ಕೆ ಭಗತ್ ಸಿಂಗ್ ಹೆಸರಿಡಲು ಸರ್ವಾನುಮತದಿಂದ ನಿರ್ಣಯವನ್ನು ಅಂಗೀಕರಿಸಿತ್ತು. ಇದನ್ನೂ ಓದಿ: ಸಿದ್ದರಾಮಯ್ಯಗೆ ಡಿಕೆಶಿಯವರೇ ಮೊಟ್ಟೆ ಹೊಡೆಸಿರಬೇಕು: ಕಟೀಲ್

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *