ಶ್ರೀನಗರದಲ್ಲಿ ಪಂಜಾಬ್‌ ನಿವಾಸಿಯನ್ನು ಗುಂಡಿಟ್ಟು ಕೊಂದ ಭಯೋತ್ಪಾದಕರು

By
1 Min Read

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಬುಧವಾರ ಪಂಜಾಬ್ (Punjab) ನಿವಾಸಿಯೊಬ್ಬರನ್ನು ಭಯೋತ್ಪಾದಕರು ಗುಂಡಿಕ್ಕಿ ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತರನ್ನು ಅಮೃತಸರ ಮೂಲದ ಅಮೃತಪಾಲ್ ಸಿಂಗ್ (Amritpal Singh) ಎಂದು ಗುರುತಿಸಲಾಗಿದೆ. ಶ್ರೀನಗರದ (Srinagar) ಶಹೀದ್ ಗುಂಜ್ ಪ್ರದೇಶದಲ್ಲಿ ಅಮೃತಪಾಲ್ ಮೇಲೆ‌ ಈ ದಾಳಿ ನಡೆದಿದೆ. ದಾಳಿಯಲ್ಲಿ ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಘಟನಾ ಸ್ಥಳವನ್ನು ಪೊಲೀಸರು ಬೀಡುಬಿಟ್ಟಿದ್ದಾರೆ. ಇದನ್ನೂ ಓದಿ: AAP ಸಂಸದ ಸಂಜಯ್ ಸಿಂಗ್ ಜಾಮೀನು ಅರ್ಜಿ ತಿರಸ್ಕರಿಸಿದ‌ ದೆಹಲಿ ಹೈಕೋರ್ಟ್

ಈ ಸಂಬಂಧ ಕಾಶ್ಮೀರ ವಲಯ ಪೊಲೀಸರು ತಮ್ಮ ಎಕ್ಸ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಶಹೀದ್ ಗುಂಜ್ ಶ್ರೀನಗರದಲ್ಲಿ ಅಮೃತಸರ ನಿವಾಸಿ ಅಮೃತಪಾಲ್ ಸಿಂಗ್ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದ್ದಾರೆ. ಘಟನೆಯಲ್ಲಿ ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಚಿಕಿತ್ಸೆಗಾಗಿ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಗುಂಡಿನ ದಾಳಿ ನಡೆದ ಪ್ರದೇಶವನ್ನು ಸುತ್ತುವರಿಯಲಾಗಿದೆ ಎಂದು ತಿಳಿಸಿದ್ದಾರೆ.

Share This Article