ಚಂಡೀಗಢ: ಅಧಿಕಾರಿಯೊಬ್ಬರ ಆತ್ಮಹತ್ಯೆ ಪ್ರಕರಣದ ವಿವಾದದ ನಡುವೆಯೇ ಪಂಜಾಬ್ (Punjab) ಸಚಿವ ಲಾಲ್ಜಿತ್ ಸಿಂಗ್ ಭುಲ್ಲರ್ (Laljit Singh Bhullar) ಅವರು ಶನಿವಾರ ಮುಖ್ಯಮಂತ್ರಿ ಭಗವಂತ್ ಮಾನ್ (Bhagwant Mann) ನೇತೃತ್ವದ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ.
ಅಮೃತಸರದಲ್ಲಿ ಗೋದಾಮು ನಿಗಮದ ಜಿಲ್ಲಾ ವ್ಯವಸ್ಥಾಪಕರ ಆತ್ಮಹತ್ಯೆ ಪ್ರಕರಣದ ನಿಷ್ಪಕ್ಷಪಾತ ತನಿಖೆಯನ್ನು ಖಚಿತಪಡಿಸಿಕೊಳ್ಳಲು ಸಾರಿಗೆ ಸಚಿವ ಭುಲ್ಲರ್ ಅವರನ್ನು ರಾಜೀನಾಮೆ ನೀಡುವಂತೆ ಕೇಳಿಕೊಂಡಿದ್ದೇನೆ ಎಂದು ಸಿಎಂ ಮಾನ್ ತಿಳಿಸಿದ್ದಾರೆ. ಇದನ್ನೂ ಓದಿ: ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ನಾಳೆ ಬೆಳಗ್ಗೆ ಒಳಗೆ ಘೋಷಣೆ ಆಗಲಿದೆ: ರಣದೀಪ್ ಸುರ್ಜೇವಾಲಾ
ಮ್ಯಾನೇಜರ್ ಗಗನ್‌ದೀಪ್ ಸಿಂಗ್ ರಾಂಧವ ಎಂಬವರು ವಿಷಕಾರಿ ವಸ್ತು ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದರು. ಆತ್ಮಹತ್ಯೆಗೂ ಮುನ್ನ ವಿಡಿಯೋವೊಂದನ್ನು ಮಾಡಿದ್ದರು. ಅದರಲ್ಲಿ ಸಚಿವ ಭುಲ್ಲರ್ ಅವರ ಹೆಸರನ್ನು ಉಲ್ಲೇಖಿಸಿದ್ದಾರೆ.
ಸೆಲ್ಫೋಸ್ ಸೇವಿಸಿ ರಾಂಧವ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಬಿಕ್ರಮ್ ಸಿಂಗ್ ಮಜಿಥಿಯಾ ಆರೋಪಿಸಿದ್ದಾರೆ. ರಾಂಧವ ಅವರನ್ನು 10 ಲಕ್ಷ ಲಂಚ ಸ್ವೀಕರಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಿದ್ದಾರೆ.
ಸಚಿವರ ಸಹಾಯಕರಿಗೆ ಟೆಂಡರ್ ನೀಡಲು ಒತ್ತಡ ಹೇರಿದ್ದರೆಂಬ ಆರೋಪ ಕೇಳಿಬಂದಿದೆ. ಆದರೆ, ಕಾನೂನುಬದ್ಧ ಬಿಡ್‌ದಾರರನ್ನು ಆಯ್ಕೆ ಮಾಡಿದ್ದರು. ಆದ್ದರಿಂದ ಅಧಿಕಾರಿಯನ್ನು ಸಚಿವರ ಸ್ಥಳಕ್ಕೆ ಕರೆಸಿ ಹಲ್ಲೆ ನಡೆಸಿ ವಿಡಿಯೋ ರೆಕಾರ್ಡ್ ಮಾಡಲು ಮುಂದಾಗಿದ್ದರು ಎನ್ನಲಾಗಿದೆ. ಇದನ್ನೂ ಓದಿ: ದಾವಣಗೆರೆ ದಕ್ಷಿಣ: ಲಿಂಗಾಯತ v/s ಮುಸ್ಲಿಂ ಸಮುದಾಯ ನಾಯಕರ ನಡುವೆ ಕದನ – ಯಾರಿಗೆ ಟಿಕೆಟ್?
ಈ ಆರೋಪಗಳು ಆಧಾರ ರಹಿತ ಎಂದು ಸಚಿವ ಭುಲ್ಲರ್ ಸ್ಪಷ್ಟಪಡಿಸಿದ್ದಾರೆ. ‘ನಮ್ಮ ಪಕ್ಷವು ಯಾವಾಗಲೂ ಸತ್ಯವನ್ನು ಬೆಂಬಲಿಸುತ್ತದೆ. ಯಾವಾಗಲೂ ಸತ್ಯದ ಪರವಾಗಿ ನಿಲ್ಲುತ್ತದೆ. ಆದ್ದರಿಂದ, ನನ್ನ ವಿರುದ್ಧದ ಆ ಆರೋಪಗಳನ್ನು ಸರಿಯಾಗಿ ತನಿಖೆ ಮಾಡಬೇಕೆಂದು ನಾನು ಬಯಸುತ್ತೇನೆ. ಈ ತನಿಖೆ ಪೂರ್ಣಗೊಳ್ಳುವವರೆಗೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ. ರಾಜೀನಾಮೆ ಅನುಮೋದಿಸುವಂತೆ ಸಿಎಂ ಅವರಲ್ಲಿ ಮನವಿ ಮಾಡುತ್ತೇನೆ ಎಂದು ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

