ಜ.3 ಕ್ಕೆ ನಟ ಅಲ್ಲು ಅರ್ಜುನ್ ಜಾಮೀನು ತೀರ್ಪು

Public TV
1 Min Read

ಹೈದರಾಬಾದ್‌:  ಪುಷ್ಪ 2 ಚಿತ್ರ ಪ್ರದರ್ಶನದ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ 35 ವರ್ಷದ ಮಹಿಳೆ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅಲ್ಲು ಅರ್ಜುನ್ ಸಲ್ಲಿಸಿರುವ ಸಾಮಾನ್ಯ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನಾಂಪಲ್ಲಿ ಜಿಲ್ಲಾ ನ್ಯಾಯಾಲಯದಲ್ಲಿ ಜನವರಿ 3 ರಂದು ತೀರ್ಪು ನೀಡುವುದಾಗಿ ಹೇಳಿದೆ.

ಪ್ರಕರಣದ ವಿಚಾರಣೆ ವೇಳೆ ಅಲ್ಲು ಅರ್ಜುನ್ ಅವರ ಸಾಮಾನ್ಯ ಜಾಮೀನು ಅರ್ಜಿಯನ್ನು ವಿರೋಧಿಸಿ ಚಿಕ್ಕಡಪಲ್ಲಿ ಪೊಲೀಸರು ಪ್ರತಿ-ಅಫಿಡವಿಟ್ ಸಲ್ಲಿಸಿದ್ದಾರೆ. ನಟ ಅಲ್ಲು ಅರ್ಜುನ್ ಗೆ ಸಾಮಾನ್ಯ ಜಾಮೀನು ನೀಡುವಂತೆ ಅವರ ಹಿರಿಯ ವಕೀಲ ನಿರಂಜನ್ ರೆಡ್ಡಿ ವಾದ ಮಂಡಿಸಿದರು. ಇದೇ ವೇಳೆ ಪಬ್ಲಿಕ್ ಪ್ರಾಸಿಕ್ಯೂಟರ್‌ ಜಾಮೀನು ಅರ್ಜಿಯನ್ನು ವಜಾಗೊಳಿಸುವಂತೆ ಮನವಿ ಮಾಡಿದರು.

ಬಾರಿ ಚರ್ಚೆಗೆ ಕಾರಣವಾದ ಪ್ರಕರಣದ ವಾದ ಪ್ರತಿವಾದ ಆಲಿಸಿದ ನ್ಯಾಯಾಲಯ ಜನವರಿ 3 ರಂದು ಈ ಪ್ರಕರಣದ ಬಗ್ಗೆ ತೀರ್ಪು ನೀಡುವುದಾಗಿ ಘೋಷಿಸಿತು. ಅಲ್ಲು ಅರ್ಜುನ್‌ಗೆ ಈಗಾಗಲೇ ಹೈಕೋರ್ಟ್ ನಾಲ್ಕು ವಾರಗಳ ಮಧ್ಯಂತರ ಜಾಮೀನು ನೀಡಿದ್ದು, ಇದೀಗ ಸಾಮಾನ್ಯ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ.

Share This Article