ಮಾದಕ ಲುಕ್‌ನಲ್ಲಿ ಮಿಂಚಿದ ರಶ್ಮಿಕಾ- ಶ್ರೀವಲ್ಲಿ ಬ್ಯೂಟಿಗೆ ಫ್ಯಾನ್ಸ್ ಫಿದಾ

Public TV
1 Min Read

‘ಪುಷ್ಪ 2′ ಬೆಡಗಿ (Pushpa 2) ರಶ್ಮಿಕಾ ಮಂದಣ್ಣ (Rashmika Mandanna) ಮಾದಕ ಲುಕ್‌ನಲ್ಲಿ ಮಿಂಚಿದ್ದಾರೆ. ಹೊಸ ಫೋಟೋಶೂಟ್ ಅನ್ನು ನಟಿ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ಶ್ರೀವಲ್ಲಿ ಬ್ಯೂಟಿಗೆ ಫ್ಯಾನ್ಸ್ ಫಿದಾ ಆಗಿದ್ದಾರೆ. ಇದನ್ನೂ ಓದಿ:ಆ್ಯಕ್ಷನ್ ಸೀನ್ ಶೂಟಿಂಗ್ ವೇಳೆ ರಾಶಿ ಖನ್ನಾಗೆ ಗಾಯ- ಪೋಸ್ಟ್ ಹಂಚಿಕೊಂಡ ನಟಿ

ನ್ಯಾಷನಲ್ ಕ್ರಶ್ ರಶ್ಮಿಕಾ ಮಾದಕ ಲುಕ್‌ನಿಂದ ಇದೀಗ ಇಂಟರ್‌ನೆಟ್‌ಗೆ ಬೆಂಕಿ ಹಚ್ಚಿದ್ದಾರೆ. ಬ್ಲ್ಯಾಕ್‌ ಡ್ರೆಸ್‌ನಲ್ಲಿ ಶ್ರೀವಲ್ಲಿ ಮಸ್ತ್ ಆಗಿ ಪೋಸ್ ನೀಡಿದ್ದಾರೆ. ಅವರ ಈ ಲುಕ್ ಪಡ್ಡೆಹುಡುಗರ ನಿದ್ದೆಗೆಡಿಸಿದೆ. ರಶ್ಮಿಕಾ ಪೋಸ್ಟ್‌ಗೆ ಹಾಟ್, ಸೆಕ್ಸಿ, ಬ್ಯೂಟಿ ಎಂದೆಲ್ಲಾ ಬಗೆ ಬಗೆಯ ಕಾಮೆಂಟ್‌ಗಳನ್ನು ಹಾಕಿದ್ದಾರೆ. ಇದನ್ನೂ ಓದಿ:ಕಾನ್ 2025: ಕತ್ತಲ್ಲಿ ಮೋದಿ ಚಿತ್ರವಿರುವ ನೆಕ್ಲೆಸ್ ಧರಿಸಿ ನಟಿ ಗುಜ್ಜರ್ ವಾಕ್!

ರಶ್ಮಿಕಾ ಅವರು ಅವಾರ್ಡ್ ಕಾರ್ಯಕ್ರಮವೊಂದಕ್ಕೆ ಹಾಜರಿ ಹಾಕಿದ್ದರು. ಫಂಕ್ಷನ್ ತೆರಳುವ ಒಂದಿಷ್ಟು ಫೋಟೋಗಳನ್ನು ಕ್ಲಿಕ್ಕಿಸಿದ್ದರು. ಅದಷ್ಟೇ ಅಲ್ಲ, ಅವರು ಧರಿಸಿರುವ ಈ ಉಡುಗೆಗೆ ಪ್ರಶಂಸೆ ವ್ಯಕ್ತವಾಗಿದ್ದು, ಅದರ ಹಿಂದೆ ಹಲವರ ಶ್ರಮವಿದೆ. ಹಾಗಾಗಿ ಅವರ ಬಟ್ಟೆ ಡಿಸೈನ್ ಮಾಡಿದವರಿಗೆ, ಮೇಕಪ್ ಮಾಡುವರಿಗೆ ನಟಿ ಧನ್ಯವಾದ ಹೇಳಿದ್ದಾರೆ.

ಒಟ್ನಲ್ಲಿ ರಶ್ಮಿಕಾ ಈ ಲುಕ್ ಸೋಷಿಯಲ್ ಮೀಡಿಯಾದಲ್ಲಿ ಸಂಚಲನ ಸೃಷ್ಟಿಸಿದೆ. ನಟಿ ಈ ಫೋಟೋಗಳನ್ನು ಪೋಸ್ಟ್ ಮಾಡಿದ ಕೆಲವೇ ಗಂಟೆಗಳಲ್ಲಿ ಭರ್ಜರಿ ಲೈಕ್ಸ್ ಗಿಟ್ಟಿಸಿಕೊಂಡಿದೆ.

ಕನ್ನಡದ ‘ಕಿರಿಕ್ ಪಾರ್ಟಿ’ (Kirik Party) ಚಿತ್ರದ ಮೂಲಕ ಪರಿಚಿತರಾದ ರಶ್ಮಿಕಾ ಮಂದಣ್ಣ ಅವರು ಇದೀಗ ಸೌತ್ ಮತ್ತು ಬಾಲಿವುಡ್‌ನಲ್ಲಿ ಬೇಡಿಕೆಯ ನಟಿಯಾಗಿದ್ದಾರೆ. ಸಾಲು ಸಾಲು ಸಿನಿಮಾಗಳಲ್ಲಿ ಅವರು ತೊಡಗಿಸಿಕೊಂಡಿದ್ದಾರೆ.

Share This Article