ಕುಂಟುತ್ತಾ ಸಾಗುತ್ತಿದೆ ‘ಪುಷ್ಪ 2’ ಶೂಟಿಂಗ್: ಈವರೆಗೂ ಆಗಿದ್ದೆಷ್ಟು?

Public TV
2 Min Read

ಲ್ಲು ಅರ್ಜುನ್ ಮುಖ್ಯಭೂಮಿಕೆಯ ಪುಷ್ಪಾ 2 ಸಿನಿಮಾದಿಂದ ಹೊಸ ಅಪ್ ಡೇಟ್ ಬಂದಿದ್ದು, ಅದು ಅಲ್ಲು ಅಭಿಮಾನಿಗಳ ನಿರಾಸೆಗೆ ಕಾರಣವಾಗಿದೆ. ಹಲವು ತಿಂಗಳಿಂದ ಸಿನಿಮಾದ ಶೂಟಿಂಗ್ ನಡೆಯುತ್ತಿದ್ದು, ಶೇಕಡಾ 90ರಷ್ಟು ಚಿತ್ರೀಕರಣ ಆಗಿದೆ ಎಂದು ನಂಬಲಾಗಿತ್ತು. ಆದರೆ, ಈವರೆಗೂ ಶೂಟಿಂಗ್ ಆಗಿದ್ದು ಕೇವಲ ಶೇಕಡಾ 30 ರಿಂದ 40ರಷ್ಟು ಅಷ್ಟೇ ಎಂದು ಗೊತ್ತಾಗಿದೆ. ಹಾಗಾಗಿ ಅಂದುಕೊಂಡ ಸಮಯಕ್ಕೆ ಸಿನಿಮಾ ರಿಲೀಸ್ ಆಗುವುದು ಅನುಮಾನವಾಗಿದೆ.

ಒಂದು ಕಡೆ ಚಿತ್ರೀಕರಣ ಕುಂಟುತ್ತಾ ಸಾಗಿದ್ದರೂ, ಮತ್ತೊಂದು ಕಡೆ ಚಿತ್ರತಂಡದಿಂದ ಸುದ್ದಿ ಮೇಲೆ ಸುದ್ದಿಗಳು ಸಿಗುತ್ತಿವೆ. ಅದರಲ್ಲೂ ಈ ಸಿನಿಮಾದ ಐಟಂ ಸಾಂಗ್ ಕುರಿತಾಗಿ ದಿನಕ್ಕೊಂದು ಸುದ್ದಿಗಳು ಹರಿದಾಡುತ್ತಿವೆ. ಹಲವಾರು ನಟಿಯರ ಹೆಸರು ಕೂಡ ಈವರೆಗೂ ಕೇಳಿ ಬಂದಿವೆ. ಇದನ್ನೂ ಓದಿ:ರಿಸೆಪ್ಷನ್ ಸಂಭ್ರಮದಲ್ಲಿ ‘ಕಾಮಿಡಿ ಕಿಲಾಡಿಗಳು’ ಸಂಜು ಬಸಯ್ಯ- ಪಲ್ಲವಿ ಜೋಡಿ

ಪುಷ್ಪ ಸಿನಿಮಾ ಹಿಟ್ ಆಗಲುಹುಂ ಅಂಟವಾ ಮಾವಐಟಂ ಸಾಂಗ್ (Item Song) ಕೂಡ ಕಾರಣ ಎನ್ನುವುದನ್ನು ಅಲ್ಲಗಳೆಯುವಂತಿಲ್ಲ. ಸಮಂತಾ ಹಾಡಿಗೆ ಮೈಚಳಿ ಬಿಟ್ಟು ಕುಣಿದಿದ್ದರು. ಪಡ್ಡೆಗಳ ಹೃದಯದಲ್ಲಿ ಚಿಟ್ಟೆ ಹಾರಿಸಿದ್ದರು. ಹಾಡು ಹಿಟ್ ಆಗಿದ್ದರಿಂದ, ಚಿತ್ರದ ಗೆಲುವಿಗೂ ಅದು ಸಹಕಾರಿ ಆಯಿತು. ಪುಷ್ಪ 2ನಲ್ಲೂ ಅಂಥದ್ದೊಂದು ಫಾರ್ಮುಲಾವನ್ನು ಮತ್ತೆ ವರ್ಕ್ ಮಾಡುತ್ತಿದ್ದಾರೆ ನಿರ್ದೇಶಕರು. ಪುಷ್ಪ 2ನಲ್ಲೂ ಒಂದು ಐಟಂ ಸಾಂಗ್ ಇರಲಿದ್ದು, ಅದಕ್ಕೆ ಬಾಲಿವುಡ್ ನಟಿ ಊರ್ವಶಿ ರೌಟೇಲಾ (Urvashi Rautela) ಹೆಜ್ಜೆ ಹಾಕಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಊವರ್ಶಿ ಬದಲು ಕನ್ನಡದ ನಟಿ ಶ್ರೀಲೀಲಾ (Sreeleela)  ಡಾನ್ಸ್ ಮಾಡಲಿದ್ದಾರೆ ಎಂದು ವರದಿಯಾಗಿದೆ.

ಸದ್ಯ ತೆಲುಗು ಚಿತ್ರೋದ್ಯಮದಲ್ಲಿ ರಶ್ಮಿಕಾ ಮಂದಣ್ಣ ಮತ್ತು ಶ್ರೀಲೀಲಾ ಸ್ಪರ್ಧೆಗೆ ಬಿದ್ದಿದ್ದಾರೆ. ರಶ್ಮಿಕಾಗೆ ಸಿಗಬೇಕಿದ್ದ ಹಲವು ಅವಕಾಶಗಳನ್ನು ಶ್ರೀಲೀಲಾ ಕಿತ್ತುಕೊಂಡಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಪುಷ್ಪಾ 2 ಸಿನಿಮಾದಲ್ಲಿ ರಶ್ಮಿಕಾ ನಾಯಕಿಯಾಗಿ ನಟಿಸುತ್ತಿದ್ದರೆ, ಶ್ರೀಲೀಲಾ ಕೇವಲ ಐಟಂ ಹಾಡಿಗೆ ಸೊಂಟ ಬಳುಕಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಚಿತ್ರತಂಡದಿಂದ ಯಾವುದೇ ಮಾಹಿತಿ ಅಧಿಕೃತವಾಗಿ ಹೊರ ಬೀಳದೇ ಇದ್ದರೂ, ಸುದ್ದಿಯಂತೂ ಸಖತ್ ಸೇಲ್ ಆಗುತ್ತಿದೆ.

 

ಅಲ್ಲು ಅರ್ಜುನ್ (Allu Arjun) ನಟನೆಯ ಪುಷ್ಪ 2 ಸಿನಿಮಾದ ಶೂಟಿಂಗ್ ಕುಂಟುತ್ತಾ ಸಾಗಿದೆ. ಸದ್ಯ ಚಿತ್ರದ ಕ್ಲೈಮ್ಯಾಕ್ಸ್ (Climax) ದೃಶ್ಯದ ಚಿತ್ರೀಕರಣವನ್ನು ಮಾಡಲು ನಿರ್ದೇಶಕ ಸುಕುಮಾರನ್ (Sukumaran) ಪ್ಲ್ಯಾನ್ ಮಾಡಿದ್ದು, ಅದೊಂದು ರೋಮಾಂಚನಕಾರಿ ನೀಡುವಂತಹ ಸನ್ನಿವೇಶವಾಗಿದೆ ಎಂದು ಹೇಳಲಾಗುತ್ತಿದೆ. ದೃಶ್ಯವನ್ನು ತಿರುಪತಿ ಜಿಲ್ಲೆಯ ಪೂರ್ವ ಘಟ್ಟದಲ್ಲಿರುವ ಸ್ವರ್ಣಮುಖಿ (Swarnamukhi) ನದಿಯ ತೀರದಲ್ಲಿ ಶೂಟ್ ಮಾಡಲು ಚಿತ್ರತಂಡ ನಿರ್ಧರಿಸಿದೆ.

Web Stories

Share This Article
ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್ ಬೋಲ್ಡ್ ಅವತಾರ ತಾಳಿದ ಪ್ರಣೀತಾ