Pushpa 2 ಚಿತ್ರೀಕರಣದಲ್ಲಿ ಐಕಾನ್ ಸ್ಟಾರ್- ಚಿತ್ರದ ಬಗ್ಗೆ ಬಿಗ್ ಅಪ್‌ಡೇಟ್

Public TV
2 Min Read

ಲ್ಲು ಅರ್ಜುನ್- ರಶ್ಮಿಕಾ ಮಂದಣ್ಣ (Rashmika Mandanna) ನಟನೆಯ ಪ್ಯಾನ್ ಇಂಡಿಯಾ ಸಿನಿಮಾ ‘ಪುಷ್ಪ 2’ (Pushpa 2) ಸಿನಿಮಾದ ಬಗ್ಗೆ ಬಿಗ್ ಅಪ್‌ಡೇಟ್ ಸಿಕ್ಕಿದೆ. ಸಿನಿಮಾದ 2ನೇ ಹಂತದ ಶೂಟಿಂಗ್ ಹೈದರಾಬಾದ್‌ನಲ್ಲಿ ಶುರುವಾಗಿದೆ. ಪುಷ್ಪರಾಜ್ ಆಗಿ ಚಿತ್ರೀಕರಣದಲ್ಲಿ ಅಲ್ಲು ಅರ್ಜುನ್ ಭಾಗಿಯಾಗಿದ್ದಾರೆ. ಇದನ್ನೂ ಓದಿ:ಕೊನೆಗೂ ರಿವೀಲ್‌ ಆಯ್ತು ನಟಿ ಇಲಿಯಾನಾ ಮದುವೆ ಗುಟ್ಟು

ಕೊವೀಡ್ ಸಂದರ್ಭದಲ್ಲಿ ‘ಪುಷ್ಪ’ (Pushpa) ಚಿತ್ರ ತೆರೆಯ ಮೇಲೆ ಗೆದ್ದು ಬೀಗಿದ ಸಿನಿಮಾ. ಪುಷ್ಪರಾಜ್- ಶ್ರೀವಲ್ಲಿ ಕಾಂಬೋ, ಸಮಂತಾ(Samantha) ಡ್ಯಾನ್ಸ್, ಅನಸೂಯ ಮತ್ತು ಫಯಾದ್ ಫಾಸಿಲ್, ಡಾಲಿ ಅಬ್ಬರದ ಜೊತೆಗೆ ಸುಕುಮಾರ್ ಕಥೆ- ನಿರ್ದೇಶನ ಕಮಾಲ್ ಮಾಡಿತ್ತು. ಬಳಿಕ 2022ರಿಂದ ‘ಪುಷ್ಪ 2’ ಅಕ್ಟೋಬರ್ ತಿಂಗಳಲ್ಲಿ ಸಿನಿಮಾದ ಚಿತ್ರೀಕರಣ ಪ್ರಾರಂಭವಾಗಿದೆ. ಸತತವಾಗಿ ಚಿತ್ರೀಕರಣ ನಡೆಯುತ್ತಿದೆಯಾದರೂ ಸಿನಿಮಾದ ಚಿತ್ರೀಕರಣ ಇನ್ನೂ ಮುಗಿದಿಲ್ಲ. ಆಗಾಗ್ಗೆ ಸಿನಿಮಾದ ಕತೆ, ಚಿತ್ರಕತೆಯಲ್ಲಿ ನಿರ್ದೇಶಕ ಸುಕುಮಾರ್ ಬದಲಾವಣೆ ಮಾಡುತ್ತಲೇ ಬಂದಿದ್ದರಿಂದ ಸಿನಿಮಾದ ಚಿತ್ರೀಕರಣ ವಿಳಂಬವಾಗಿತ್ತು. ‘ಪುಷ್ಪ 2’ ಸಿನಿಮಾದ ಟ್ರೈಲರ್ ಮೂರು ತಿಂಗಳ ಹಿಂದೆಯೇ ಬಿಡುಗಡೆ ಆಗಿತ್ತು. ಟ್ರೈಲರ್ ನೋಡಿದ ಹಲವರು ಸಿನಿಮಾದ ಚಿತ್ರೀಕರಣ ಮುಗಿದಿದೆ ಎಂದೇ ಭಾವಿಸಿದ್ದರು. ಆದರೆ ಸಿನಿಮಾದ ಚಿತ್ರೀಕರಣ ಇನ್ನೂ ಪೂರ್ಣಗೊಂಡಿಲ್ಲ, ಇದೀಗಷ್ಟೆ ಎರಡನೇ ಹಂತದ ಚಿತ್ರೀಕರಣ ಪ್ರಾರಂಭಗೊಂಡಿದೆ.

ಹೈದರಾಬಾದ್‌ನ ರಾಮೋಜಿರಾವ್ ಫಿಲ್ಮ್ಂ ಸಿಟಿಯಲ್ಲಿ ಸಿನಿಮಾದ ಎರಡನೇ ಹಂತದ ಚಿತ್ರೀಕರಣ ಪ್ರಾರಂಭವಾಗಿದೆ. ಕೆಲವು ಮೂಲಗಳ ಪ್ರಕಾರ ಸಿನಿಮಾದ ಟಾಕಿ ಭಾಗದ ಚಿತ್ರೀಕರಣ ಪೂರ್ಣಗೊಂಡಿದ್ದು, ಹಾಡುಗಳು ಹಾಗೂ ಕೆಲವು ಪ್ಯಾಚ್ ವರ್ಕ್ ಚಿತ್ರೀಕರಣವಷ್ಟೆ ಬಾಕಿ ಇದೆ ಎನ್ನಲಾಗುತ್ತಿದೆ. ಜೊತೆಗೆ ಕೆಲ ಫೈಟ್ ಚಿತ್ರೀಕರಣವೂ ಆಗಬೇಕಿದೆ ಎನ್ನಲಾಗುತ್ತಿದೆ. ಇದೇ ಕಾರಣಕ್ಕೆ ರಾಮೋಜಿ ರಾವ್ ಫಿಲ್ಮ್ಂ ಸಿಟಿಯಲ್ಲಿ ಸೆಟ್‌ಗಳನ್ನು ಹಾಕಿ ಸಿನಿಮಾದ ಚಿತ್ರೀಕರಣ ಮಾಡಲಾಗುತ್ತಿದೆ.

ಎರಡನೇ ಹಂತದ ಚಿತ್ರೀಕರಣದಲ್ಲಿ ಅಲ್ಲು ಅರ್ಜುನ್(Allu Arjun), ರಶ್ಮಿಕಾ ಮಂದಣ್ಣ, ಫಹಾದ್ ಫಾಸಿಲ್ ಅವರುಗಳ ಜೊತೆಗೆ ಡಾಲಿ ಧನಂಜಯ್ (Daali Dhananjay) ಸಹ ಭಾಗಿಯಾಗಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ರಾಮೋಜಿ ರಾವ್ ಫಿಲ್ಮ್ಂ ಸಿಟಿಯಲ್ಲಿ ಚಿತ್ರೀಕರಣ ಮುಗಿದ ಬಳಿಕ ಹೊರಾಂಗಣದಲ್ಲಿ ಕೆಲವು ದೃಶ್ಯಗಳ ಚಿತ್ರೀಕರಣವನ್ನು ಚಿತ್ರತಂಡ ಮಾಡಲಿದೆ. ಆ ನಂತರ ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಕಾರ್ಯ ಪ್ರಾರಂಭವಾಗಲಿದೆ. ಪುಷ್ಪ ಸಿನಿಮಾವನ್ನು ಸುಕುಮಾರ್ ನಿರ್ದೇಶನ ಮಾಡುತ್ತಿದ್ದಾರೆ. ಮೈತ್ರಿ ಮೂವಿ ಮೇಕರ್ಸ್ ನಿರ್ಮಾಣ ಮಾಡಿದ್ದಾರೆ.

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್