ಪಂಚಮಸಾಲಿ ಸ್ವಾಮೀಜಿಗೆ ಬಸವಣ್ಣನವರ ಹೆಸರು ಹೇಳೋ ನೈತಿಕತೆಯೇ ಇಲ್ಲ: ಪುಟ್ಟಸಿದ್ಧಶೆಟ್ಟಿ

By
1 Min Read

ಹುಬ್ಬಳ್ಳಿ: ಪಂಚಮಸಾಲಿ ಪೀಠದ ಸ್ವಾಮೀಜಿಯಾಗಿರುವ ಜಯಮೃತ್ಯುಂಜಯ ಸ್ವಾಮೀಜಿಯವರಿಗೆ ಬಸವಣ್ಣನವರ ಹೆಸರು ಹೇಳುವ ನೈತಿಕತೆಯೇ ಇಲ್ಲ. ಅಲ್ಲದೇ ಸ್ವಾಮೀಜಿ ಆದವರು ಅನ್ನದಾಸೋಹ ಮಾಡಬೇಕು ವಿನಃ ಅನ್ನ ಕಿತ್ತುಕೊಳ್ಳುವ ಕೆಲಸಕ್ಕೆ ಕೈ ಹಾಕುವುದು ನಾಚಿಕೆಗೇಡಿನ ಸಂಗತಿಯಾಗಿದೆ ಎಂದು ಕರ್ನಾಟಕ ರಾಜ್ಯ ಕಾಯಕ ಸಮಾಜ ಒಕ್ಕೂಟದ ಅಧ್ಯಕ್ಷ ಹಾಗೂ ಪರಿಷತ್ ಮಾಜಿ ಸದಸ್ಯ ಕೆ.ಸಿ.ಪುಟ್ಟಸಿದ್ಧಶೆಟ್ಟಿ ಆಕ್ರೋಶ ವ್ಯಕ್ತಪಡಿಸಿದರು.

ನಗರದಲ್ಲಿ ಇಂದು ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಸ್ವಾಮೀಜಿ ಆದವರು ಅನ್ನದಾಸೋಹದ ಮೂಲಕ ಮತ್ತೊಬ್ಬರಿಗೆ ಅನ್ನಹಾಕುವ ಕೆಲಸ ಮಾಡಬೇಕು. ಅದನ್ನು ಬಿಟ್ಟು 2ಎ ಸೇರ್ಪಡೆಗೆ ಹೋರಾಟ ಮಾಡುವ ಮೂಲಕ 102 ಜಾತಿಯ ಕಾಯಕ ಸಮಾಜದ ಅನ್ನವನ್ನು ಕಿತ್ತುಕೊಳ್ಳುವ ಕೆಲಸವನ್ನು ಮಾಡುತ್ತಿರುವುದು ನಿಜಕ್ಕೂ ಸಮಾಜ ಬಾಹಿರ ಕಾರ್ಯವಾಗಿದೆ ಎಂದರು. ಇದನ್ನೂ ಓದಿ: ಎದೆ ಮೇಲೆ ತಲೈವಾ ಭಾವಚಿತ್ರದ ಟ್ಯಾಟು ಹಾಕಿಸಿಕೊಂಡ ಹರ್ಭಜನ್ ಸಿಂಗ್

ಪಂಚಮಸಾಲಿ ಸಮಾಜದವರು ಈಗ 5% ಮೀಸಲಾತಿ ಪಡೆಯುತ್ತಿದ್ದಾರೆ. ಅದನ್ನು ಹೆಚ್ಚಿಸಿಕೊಳ್ಳಲಿ ಅದಕ್ಕೆ ನಮ್ಮ ವಿರೋಧವಿಲ್ಲ. ಆದರೆ 2ಎ ಗೆ ಪಂಚಮಸಾಲಿ ಸಮುದಾಯವನ್ನು ಸೇರ್ಪಡೆ ಮಾಡಲು ನೀವು ನಡೆಸುತ್ತಿರುವ ಹೋರಾಟ ಇದು ಬಡ ಜಾತಿಗಳ ಬದಕುವ ಹಕ್ಕನ್ನು ಕಿತ್ತುಕೊಳ್ಳುವ ಷಡ್ಯಂತ್ರ ಮಾಡಿದಂತಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಇದನ್ನೂ ಓದಿ: 1,743 ಕೋಟಿ ಆಸ್ತಿಯ ಒಡೆಯ ಕೆಜಿಎಫ್‌ ಬಾಬುಗೆ ಸೋಲು

ಇದೇ ವೇಳೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಪಂಚಮಸಾಲಿ ಸ್ವಾಮೀಜಿಯ ರಾಜಕೀಯ ತಂತ್ರಗಾರಿಕೆ ಮಾತುಗಳಿಗೆ ಒಳಗಾಗಿ ಯಾವುದೇ ರೀತಿಯಲ್ಲಿ 2ಎ ಸೇರ್ಪಡೆ ಮಾಡಕೂಡದು. ಒಂದು ವೇಳೆ ಮಾಡಿದ್ದೇ ಆದಲ್ಲಿ ಮುಂಬರುವ ದಿನಗಳಲ್ಲಿ ಉಗ್ರ ಹೋರಾಟವನ್ನು ಮಾಡಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

Share This Article
Leave a Comment

Leave a Reply

Your email address will not be published. Required fields are marked *