ದುಬೈನಲ್ಲಿ ಸಿಲುಕಿದ್ದ ಬ್ಯಾಡ್ಮಿಂಟನ್‌ ತಾರೆ ಪಿ.ವಿ.ಸಿಂಧು ಸುರಕ್ಷಿತವಾಗಿ ಬೆಂಗಳೂರಿಗೆ ವಾಪಸ್‌

1 Min Read

ಬೆಂಗಳೂರು: ದುಬೈನಲ್ಲಿ ಸಿಲುಕಿದ್ದ ಬ್ಯಾಡ್ಮಿಂಟನ್‌ ತಾರೆ ಪಿ.ವಿ.ಸಿಂಧು (P.V.Sindhu) ಅವರು ಸುರಕ್ಷಿತವಾಗಿ ಬೆಂಗಳೂರಿಗೆ (Bengaluru) ಬಂದಿಳಿದಿದ್ದಾರೆ.

ಆಲ್‌ ಇಂಗ್ಲೆಂಡ್‌ ಚಾಂಪಿಯನ್‌ಶಿಪ್‌ ಹಿನ್ನೆಲೆ ಬರ್ಮಿಂಗ್‌ಹ್ಯಾಮ್‌ಗೆ ಪಿ.ವಿ.ಸಿಂಧು ಪ್ರಯಾಣ ಬೆಳೆಸಿದ್ದರು. ಮಧ್ಯಪ್ರಾಚ್ಯದ ಉದ್ವಿಗ್ನತೆ ಕಾರಣದಿಂದ ದುಬೈ ಏರ್‌ಪೋರ್ಟ್‌ನಲ್ಲಿ ಸಿಲುಕಿಕೊಂಡಿದ್ದರು. ದುಬೈನಲ್ಲಿ ತೀವ್ರ ಮತ್ತು ಅನಿಶ್ಚಿತ ಕೆಲವು ದಿನಗಳ ಕಾಲ ಕಳೆದ ನಂತರ ತಾಯ್ನಾಡಿಗೆ ಕ್ಷೇಮವಾಗಿ ಮರಳಿದ್ದಾರೆ. ಇದನ್ನೂ ಓದಿ: ರಾಷ್ಟ್ರಗೀತೆಯನ್ನು ಹಾಡಲ್ಲ – ಇರಾನ್‌ ಮಹಿಳಾ ತಂಡದಿಂದ ಮೈದಾನದಲ್ಲೇ ಇಸ್ಲಾಮಿಕ್‌ ಆಡಳಿತದ ವಿರುದ್ಧ ಪ್ರತಿಭಟನೆ

ಈ ಕುರಿತು ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಸಿಂಧು, ಸುರಕ್ಷಿತವಾಗಿ ಬೆಂಗಳೂರಿಗೆ ಹಿಂತಿರುಗಿದ್ದೇನೆ. ತುಂಬಾ ಕಷ್ಟದ ಸಮಯದಲ್ಲಿ ಸಹಾಯ ಮಾಡಿದ ದುಬೈ ಅಧಿಕಾರಿಗಳು, ವಿಮಾನ ನಿಲ್ದಾಣ ಸಿಬ್ಬಂದಿ ಎಲ್ಲರಿಗೂ ಧನ್ಯವಾದಗಳು ಎಂದು ಕೃತಜ್ಞತೆ ತಿಳಿಸಿದ್ದಾರೆ.

ಅಮೆರಿಕ-ಇಸ್ರೇಲ್‌-ಇರಾನ್‌ ನಡುವಿನ ಸಂಘರ್ಷ ತೀವ್ರಗೊಂಡಿದೆ. ಯುಎಸ್‌ ಮಿಲಿಟರಿ ನೆಲೆಗಳಾದ ಮಧ್ಯಪ್ರಾಚ್ಯ ಮೇಲೆ ಇರಾನ್‌ ಡ್ರೋನ್‌ ಮತ್ತು ಕ್ಷಿಪಣಿ ದಾಳಿಗಳನ್ನು ನಡೆಸುತ್ತಿದೆ. ಇದರಿಂದ ದುಬೈ ಸೇರಿದಂತೆ ಅನೇಕ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಪರಿಸ್ಥಿತಿ ಹದಗೆಟ್ಟಿದೆ. ವಿಮಾನ ಕಾರ್ಯಾಚರಣೆಗಳಿಗೂ ಅಡಚಣೆ ಉಂಟಾಗಿದ್ದು, ಪ್ರವಾಸಿಗರು ಭೀತಿಯಲ್ಲಿದ್ದಾರೆ. ಇದನ್ನೂ ಓದಿ: ದುಬೈ ಏರ್‌ಪೋರ್ಟ್‌ನಲ್ಲಿ ಸಿಲುಕಿದ ಬ್ಯಾಡ್ಮಿಂಟನ್‌ ತಾರೆ ಪಿ.ವಿ.ಸಿಂಧು

ಪಿ.ವಿ.ಸಿಂಧು ಕೂಡ ದುಬೈ ಏರ್‌ಪೋರ್ಟ್‌ನಲ್ಲಿ ಸಂಕಷ್ಟಕ್ಕೆ ಸಿಲುಕಿದ್ದರು. ಅವರು ತಂಗಿದ್ದ ಪ್ರದೇಶದ ಬಳಿ ಸ್ಫೋಟ ಸಂಭವಿಸಿದೆ ಎಂದು ಸಿಂಧು ಹೇಳಿಕೊಂಡಿದ್ದರು. ಆ ಉದ್ವಿಗ್ನ ಮತ್ತು ಭಯಾನಕ ಕ್ಷಣವನ್ನು ವಿವರಿಸಿದ್ದರು.

Share This Article