ಸರ್ಕಾರಿ ಕಚೇರಿ, ಮಾಲ್, ಹೋಟೆಲ್‍ಗಳಲ್ಲಿ ಕೆಲಸ ಮಾಡೋರಿಗೆ ಎರಡು ಡೋಸ್ ಕಡ್ಡಾಯ: ಆರ್. ಅಶೋಕ್

Public TV
2 Min Read

-ಕೊರೊನಾ ಹೊಸ ಮಾರ್ಗಸೂಚಿ ಸದ್ಯದಲ್ಲೇ ಪ್ರಕಟ

ಬೆಂಗಳೂರು: ಕೊರೊನಾ ವೈರಸ್‍ನ ರೂಪಾಂತರ ತಳಿ ಓಮಿಕ್ರಾನ್ ಕುರಿತಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಇಂದು ವಿಶೇಷ ಸಭೆ ನಡೆಯಿತು. ರಾಜ್ಯದ ಜನತೆಗೆ ಸರ್ಕಾರ ಕೆಲವು ಸೂಚನೆಯನ್ನು ನೀಡಿದೆ.

ಈ ಕುರಿತಾಗಿ ಮಾಧ್ಯಮದವರ ಜೊತೆಗೆ ಮಾತನಾಡಿದ ಕಂದಾಯ ಸಚಿವ ಆರ್, ಅಶೋಕ್ ಅವರು, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸರ್ಕಾರ ಬ್ರೇಕ್ ಹಾಕಿದೆ. ಕೋವಿಡ್ ಇರೋ ಜಿಲ್ಲೆಗಳಲ್ಲಿ ಕಟ್ಟುನಿಟ್ಟಿನ ಕ್ರಮಕೊಳ್ಳುತ್ತಿದ್ದು, ಆಯಾ ಜಿಲ್ಲೆಯ ಡಿಸಿಗಳಿಗೆ ಜಿಲ್ಲಾವಾರು ಕೋವಿಡ್ ಪರಿಸ್ಥಿತಿ ಗಮನಿಸಿ ಕ್ರಮ ತೆಗೆದುಕೊಳ್ಳಬೇಕು. ಜನ ಗುಂಪು, ಗುಂಪು ಸೇರದಂತೆ ಕ್ರಮಕ್ಕೆ ಸೂಚನೆ ನೀಡಲಾಗಿದೆ. ಮಾಸ್ಕ್ ಹಾಕದವರಿಗೆ ದಂಡ ಹಾಕಲು ಪಾಲಿಕೆ ಆಯುಕ್ತರಿಗೆ ಸೂಚನೆ ನೀಡಲಾಗಿದೆ. ಮದುವೆ ಸಮಾರಂಭಗಳಿಗೆ ಸದ್ಯಕ್ಕೆ ಯಾವುದೇ ನಿರ್ಬಂಧ ಇಲ್ಲ, ರಾಜ್ಯ ಸರ್ಕಾರದಿಂದ ಹೊಸ ಮಾರ್ಗಸೂಚಿ ಸದ್ಯದಲ್ಲೇ ಪ್ರಕಟವಾಗಲಿದೆ. ಸೋಂಕಿನ ಸ್ವರೂಪದ ಬಗ್ಗೆ ಅಧ್ಯಯನ ನಡೆಸಲು ತಜ್ಞರಿಗೆ ಸೂಚನೆಯನ್ನು ನೀಡಲಾಗಿದೆ. ಇದನ್ನೂ ಓದಿ: ಕೋವಿಡ್ ಹೊಸ ರೂಪಾಂತರಿ ವೈರಾಣು ನಿಯಂತ್ರಣಕ್ಕೆ ಕ್ರಮ: ಸುಧಾಕರ್

ಕೇರಳದಲ್ಲಿ ಸೋಂಕು ಹೆಚ್ಚಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿದೆ. ಕೇರಳ, ಮಹಾರಾಷ್ಟ್ರ ಗಡಿಜಿಲ್ಲೆಗಳಲ್ಲಿ ಕಟ್ಟೆಚ್ಚರ ನೀಡಿದ್ದು, ಮಂಗಳೂರು, ಮೈಸೂರು, ಕೊಡಗು, ಚಾಮರಾಜನಗರಗಳಲ್ಲಿ ಕಟ್ಟೆಚ್ಚರಕ್ಕೆ ಸೂಚನೆ ನೀಡುವಂತೆ ಡಿಸಿಗಳಿಗೆ ಹೇಳಲಾಗಿದೆ. ಪೊಲೀಸ್ ಇಲಾಖೆ ಸಿಬ್ಬಂದಿ ಜೊತೆಗೆ ಬೇರೆ ಇಲಾಖೆಗಳ ಸಿಬ್ಬಂದಿ ಮೂಲಕವೂ ಕಟ್ಟೆಚ್ಚರ ನೀಡಲಾಗುತ್ತಿದೆ. ಕೇರಳದಿಂದ ಬರೋರಿಗೆ ಆರ್ಟಿಪಿಸಿಆರ್ ಟೆಸ್ಟ್ ಕಡ್ಡಾಯವಾಗಿದ್ದು, ಕೇರಳದಿಂದ ಈಗಾಗಲೇ ಬಂದಿರುವ ವಿದ್ಯಾರ್ಥಿಗಳಿಗೂ ಆರ್ಟಿಪಿಸಿಆರ್ ಟೆಸ್ಟ್ ಮಾಡಿಸಬೇಕು ಎಂದಿದ್ದಾರೆ. ಇದನ್ನೂ ಓದಿ: ಓಮಿಕ್ರಾನ್‌ ಆತಂಕ- ಅಂತಾರಾಷ್ಟ್ರೀಯ ವಿಮಾನಯಾನ ನಿರ್ಬಂಧ ಸಡಿಲಗೊಳಿಸುವ ಯೋಜನೆ ಪರಾಮರ್ಶಿಸಲು ಪ್ರಧಾನಿ ಸೂಚನೆ

ಸರ್ಕಾರಿ ಕಚೇರಿ, ಮಾಲ್, ಹೋಟೆಲ್‍ಗಳಲ್ಲಿ ಕೆಲಸ ಮಾಡೋರಿಗೆ ಎರಡು ಡೋಸ್ ಕಡ್ಡಾಯ. ಎರಡು ಡೋಸ್ ಆಗದಿದ್ದರೆ ಕೆಲಸ ಮಾಡುವಂತಿಲ್ಲ. ಕೋವಿಡ್ ಹೆಚ್ಚು ಇರೋ ಜಿಲ್ಲೆಗಳ ಡಿಸಿಗಳಿಗೆ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ. ಶಾಲಾ ಕಾಲೇಜುಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ಮಾಡುವಂತಿಲ್ಲ, ನಿಗದಿಯಾಗಿರುವ ಕಾರ್ಯಕ್ರಮಗಳು ಬಿಟ್ಟು ಬೇರೆ ಯಾವುದೇ ಕಾರ್ಯಕ್ರಮಗಳಿಗೆ ಅವಕಾಶವಿಲ್ಲ ಎಂದು ಸರ್ಕಾರ ಸೂಚನೆ ನೀಡಿದೆ.

ವೈದ್ಯಕೀಯ ಕಾಲೇಜು ಮತ್ತು ನರ್ಸಿಂಗ್ ಕಾಲೇಜುಗಳ ವಿದ್ಯಾರ್ಥಿಗಳಿಗೆ ಕೋವಿಡ್ ಪರೀಕ್ಷೆಗಳನ್ನು ಹೆಚ್ಚಿಸುವುದು. ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತಪಾಸಣೆಗಳನ್ನು ತೀವ್ರಗೊಳಿಸುವುದು. ನೆಗಟಿವ್ ಇದ್ದವರಿಗೆ ನಗರ ಪ್ರವೇಶಕ್ಕೆ ಅನುಮತಿ. ಪಾಸಿಟಿವ್ ಇದ್ದವರಿಗೆ ಚಿಕಿತ್ಸೆಗೆ ಆಸ್ಪತ್ರೆಗೆ ಕಳುಹಿಸುವುದು. ಹಾಸ್ಟೆಲ್ ಗಳಲ್ಲಿ ವಾಸಿಸುತ್ತಿರುವ ವಿದ್ಯಾರ್ಥಿಗಳಿಗೆ ನೆಗಟಿವ್ ರಿಪೋರ್ಟ್ ಬಂದ ನಂತರದ 7 ನೇ ದಿನಕ್ಕೆ ಮತ್ತೊಮ್ಮೆ ಆರ್.ಟಿ.ಪಿ.ಸಿ.ಆರ್ ಪರೀಕ್ಷೆ ಮಾಡುವುದು ಗಡಿ ಜಿಲ್ಲೆಗಳಲ್ಲಿ ಮೂರು ಶಿಫ್ಟ್‌ಗಳಲ್ಲಿ ಕೆಲಸ ಮಾಡುವಂತೆ ಡಿಸಿಗಳಿಗೆ ಸೂಚನೆ. ಇದಕ್ಕೆ ಎಲ್ಲ ಇಲಾಖೆಗಳ ಸಹಕಾರ ಪಡೆಯಬೇಕು. ಈ ಎಲ್ಲಾ ವಿಚಾರಗಳ ಕುರಿತಾಗಿ ಇಂದಿನ ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ಹೇಳಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *