ಮಂಡ್ಯ: ಕೆಆರ್‌ಎಸ್ ಡ್ಯಾಂಗೆ (KRS Dam) ರಾಜ್ಯ ಕಾಂಗ್ರೆಸ್ ಸರ್ಕಾರ ಟಿಪ್ಪು ಸುಲ್ತಾನ್ ಸಾಗರ ಎಂದು ಮರುನಾಮಕರಣ ಮಾಡಲು ಹುನ್ನಾರ ನಡೆಸುತ್ತಿದೆ ಎಂದು ವಿರೋಧ ಪಕ್ಷ ನಾಯಕ ಆರ್.ಅಶೋಕ್ (R Ashok) ಕಿಡಿಕಾರಿದ್ದಾರೆ.
ಮಂಡ್ಯದಲ್ಲಿ (Mandya) ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಿಂದ ಮೈಸೂರು ರಾಜ ಮನೆತನಕ್ಕೆ ಕಳಂಕ ತರುವಂತಹ ಹೇಳಿಕೆಗಳನ್ನು ನೀಡುತ್ತಿದ್ದು, ಈಗ ಕೆಆರ್‌ಎಸ್ ಇತಿಹಾಸಕ್ಕೆ ಮಸಿ ಬಳಿಯುವ ಕೆಲಸ ಮಾಡುತ್ತಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ರಾಯರ 354ನೇ ಆರಾಧನಾ ಮಹೋತ್ಸವ ಆಗಸ್ಟ್ 8ರಿಂದ ಆರಂಭ: ಮಂತ್ರಾಲಯ ಶ್ರೀ
ಪದೇ ಪದೇ ಟಿಪ್ಪು ಸುಲ್ತಾನರ (Tippu Sultan) ಹೆಸರು ತಂದು ಕಳಂಕಿತ ಹೇಳಿಕೆಗಳನ್ನು ನೀಡುತ್ತಿದ್ದು, ಇದೇ ಹಾದಿಯಲ್ಲಿ ನಡೆದಿರುವ ಸಚಿವ ಹೆಚ್.ಸಿ.ಮಹದೇವಪ್ಪ ಅವರು ಯಾವುದೋ ಇದುವರೆಗೂ ಕಾಣದ ಶಿಲಾನ್ಯಾಸವನ್ನು ಇಟ್ಟುಕೊಂಡು ಕೆಆರ್‌ಎಸ್‌ನ ಹೆಸರು ಬದಲಿಸಲು ಪೀಠಿಕೆ ಹಾಕಿದ್ದಾರೆ. ಕೆಆರ್‌ಎಸ್ ಹೆಸರು ಬದಲಿಸಲು ಯಾರದೋ ಕೈವಾಡವಿದ್ದು, ಹುನ್ನಾರವೆಸಗುತ್ತಿದ್ದಾರೆ ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಮತಗಳ್ಳತನದ ಬಗ್ಗೆ ದಾಖಲಾತಿ ಇವೆ, ರಾಹುಲ್ ಗಾಂಧಿ ಬಿಡುಗಡೆ ಮಾಡ್ತಾರೆ – ಪ್ರಿಯಾಂಕ್ ಖರ್ಗೆ
ಟಿಪ್ಪು ಸುಲ್ತಾನ್ ಕಾಂಗ್ರೆಸ್ ಪಕ್ಷ ಎಂದು ಹೆಸರಿಡಲಿ:
ಟಿಪ್ಪು ಎಂದರೆ ಸಿಎಂ ಸಿದ್ದರಾಮಯ್ಯಗೆ (Siddaramaiah) ಹೆಚ್ಚು ಪ್ರೀತಿ, ಟಿಪ್ಪುವಿನ ಮೇಲೆ ಅಷ್ಟು ಪ್ರೀತಿಯಿದ್ದರೆ, ತಮ್ಮ ಪಕ್ಷಕ್ಕೆ ಟಿಪ್ಪು ಸುಲ್ತಾನ್ ಕಾಂಗ್ರೆಸ್ ಪಕ್ಷ ಎಂದು ಹೆಸರಿಡಲಿ. ಟಿಪ್ಪು ಓರ್ವ ನಾಡದ್ರೋಹಿ, ಲಕ್ಷಾಂತರ ಹಿಂದುಗಳ ಹತ್ಯೆಗೈದ ಟಿಪ್ಪು, ಪರ್ಷಿಯಾ ದೇಶದವನಾಗಿದ್ದು, ಟಿಪ್ಪು ಸತ್ತ 112 ವರ್ಷಗಳ ನಂತರ 1911ರಲ್ಲಿ ಕೆಆರ್‌ಎಸ್ ಅಣೆಕಟ್ಟು ನಿರ್ಮಾಣ ಕಾರ್ಯ ಪ್ರಾರಂಭವಾಗಿದೆ. ಶಿಲಾನ್ಯಾಸ ಹೇಗೆ ಬಂತೆAದು ಪ್ರಶ್ನಿಸಿದ್ದಾರೆ.
ಟಿಪ್ಪು ಮರಣಕ್ಕೂ ಮುನ್ನವೇ ಶಿಲಾನ್ಯಾಸ ಮಾಡಲಾಗಿತ್ತು ಎಂದಾದರೆ, 1799ರ ಮೊದಲು ಹಳೆಗನ್ನಡ ಬಳಸಲಾಗುತ್ತಿತ್ತು. ಶಿಲಾನ್ಯಾಸದಲ್ಲಿ ಬಳಸಲಾದ ಕನ್ನಡ ಹಳೆಗನ್ನಡವಲ್ಲ. ಇಷ್ಟು ವರ್ಷಗಳು ಆ ಶಿಲಾನ್ಯಾಸವನ್ನು ಇಟ್ಟುಕೊಂಡಿದ್ದ ಮುಸ್ಲಿಂ ಯಾರು? ಯಾವ ವಸ್ತು ಸಂಗ್ರಹಾಲಯದಲ್ಲಿ ಇಡಲಾಗಿತ್ತು ಎಂಬುದು ಬಹಿರಂಗವಾಗಬೇಕಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: 1 ದಿನ ಸಾರಿಗೆ ಮುಷ್ಕರ ಮುಂದೂಡಿ: ಹೈಕೋರ್ಟ್ ಸೂಚನೆ
1911ರಲ್ಲಿ ನಾಲ್ವಡಿ ಅವರಿಗೆ ಅಣೆಕಟ್ಟು ಕಟ್ಟಲು 80 ಅಡಿಗಳಿಗೆ ಅನುಮತಿ ದೊರೆತಿತ್ತು. ಆದರೂ 124 ಅಡಿಗಳಿಗೆ ನಾಲ್ವಡಿಯವರು ಅಣೆಕಟ್ಟು ಕಟ್ಟಿದ್ದರು. ಅಣೆಕಟ್ಟು ಕಟ್ಟುವ ಆರಂಭಕ್ಕೆ 2.34 ಕೋಟಿ ರೂ. ಹಣ ವ್ಯಯಿಸಲಾಗಿತ್ತು. ಪೂರ್ಣಗೊಳಿಸಲು ಅರಮನೆಯ ಹಾಗೂ ಮಹಾರಾಣಿಯರ ಒಡವೆಗಳನ್ನು ಮುಂಬೈನಲ್ಲಿ ಮಾರಿ ಅಣೆಕಟ್ಟು ಪೂರ್ಣಗೊಳಿಸಿದ್ದನ್ನು ಹಳೆ ಮೈಸೂರು ಭಾಗದ ಜನತೆ ಮರೆತಿಲ್ಲ ಎಂದು ತಿಳಿಸಿದ್ದಾರೆ.
ಪ್ರಾರಂಭದಿಂದ ಇಲ್ಲಿಯವರೆಗೂ ದಾಖಲೆಗಳಿವೆ. ಈ ಟಿಪ್ಪು ಶಿಲಾನ್ಯಾಸಕ್ಕೆ ಇರುವ ದಾಖಲೆಯಾದರೂ ಏನು? ಉತ್ತರ ಕರ್ನಾಟಕದ ಭಾಗದಲ್ಲಿ ನಿಜಾಮರ ಆಳ್ವಿಕೆಯಿತ್ತು. ಅಲ್ಲಿ ಯಾವುದೇ ಅಭಿವೃದ್ಧಿಯಾಗಿಲ್ಲ. ಹಳೆ ಮೈಸೂರು ಭಾಗದಲ್ಲಿ ಅಭಿವೃದ್ಧಿ ಕಾಣುವಂತಾಗಲು ನಾಲ್ವಡಿ ಕೃಷ್ಣರಾಜ ಒಡೆಯರ್ ಕಾರಣ. ರಾಜ್ಯದ ಜನತೆಯ ಮನಸ್ಸಿನಲ್ಲಿ ಉಳಿಯುವಂತಹ ಕೆಲಸ ಮಾಡಿದ್ದಾರೆ. ಆದರೆ ಕಾಂಗ್ರೆಸ್‌ನಿಂದ ಪದೇ ಪದೇ ಕೃಷ್ಣರಾಜ ಒಡೆಯರ್ ಹೆಸರಿಗೆ ಅಪಮಾನ ಮಾಡುವ ಕೆಲಸವಾಗುತ್ತಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಸಹಮತದಿಂದ ಒಳಮೀಸಲಾತಿ ಹಂಚಿಕೆ – ಪರಮೇಶ್ವರ್ ಹೇಳಿಕೆಗೆ ಗೋವಿಂದ ಕಾರಜೋಳ ಆಕ್ರೋಶ
ಕೆಆರ್‌ಎಸ್‌ನ ಹೆಸರು ಬದಲಿಸಲು ಮುಂದಾಗಿರುವ ಮಹದೇವಪ್ಪ, ಬೆಂಗಳೂರಿಗೆ ಬಂದು ಟಿಪ್ಪು ಶಿಲಾನ್ಯಾಸಗಳನ್ನು ಹುಡುಕಿ, ನಾಡಪ್ರಭು ಕೆಂಪೇಗೌಡರ ಹೆಸರನ್ನು ಬದಲಿಸಿ. ನಾಡಪ್ರಭು ಟಿಪ್ಪು ಸುಲ್ತಾನ ಎಂದು ಹೇಳುತ್ತಾರೆ ಎಂದು ವ್ಯಂಗ್ಯವಾಡಿದ್ದಾರೆ. ಇದನ್ನೂ ಓದಿ: ಬಿಬಿಎಂಪಿ ಚುನಾವಣೆ; ನವೆಂಬರ್ 3ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂ
ಆರ್.ಅಶೋಕ್ ಒಂದು ಸಮುದಾಯದ ಮತಕ್ಕಾಗಿ ಎಷ್ಟು ಓಲೈಕೆ ಮಾಡುತ್ತೀರಿ? ಸಿದ್ದರಾಮಯ್ಯ ಅವರ ಸುಪುತ್ರ ಸಿದ್ದರಾಮಯ್ಯರನ್ನು ನಾಲ್ವಡಿ ಕೃಷ್ಣರಾಜ ಒಡೆಯರಿಗೆ ಹೋಲಿಕೆ ಮಾಡಿದ್ದಾರೆ. ಕೆಆರ್‌ಎಸ್ ಅಣೆಕಟ್ಟನ್ನು ಕಟ್ಟಿದ ಒಡೆಯರು ಯಾರ ಮೇಲು ಸಾಲದ ಹೊರೆ ಹಾಕಲಿಲ್ಲ. ಆದರೆ ಸಿದ್ದರಾಮಯ್ಯ ಕಳೆದ 2 ವರ್ಷಗಳಲ್ಲಿ 2 ಲಕ್ಷ ಕೋಟಿ ರೂ. ಸಾಲದ ಹೊರೆ ಹಾಕಿದ್ದಾರೆ. 14 ನಿವೇಶನಗಳನ್ನು ಕಬಳಿಸಿದ್ದಾರೆ. ಅವರನ್ನು ಒಡೆಯರಿಗೆ ಹೋಲಿಸುವುದ ಅಕ್ಷಮ್ಯ ಎಂದಿದ್ದಾರೆ.
ಸಿದ್ದರಾಮಯ್ಯ ಅವರನ್ನು ಹೋಲಿಕೆ ಮಾಡುವುದೇ ಆದರೆ ನೆಹರು, ಇಂದಿರಾ ಗಾಂಧಿ, ಹಾಲಿ ಕಾಂಗ್ರೆಸ್ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿಗೆ ಹೋಲಿಕೆ ಮಾಡಿಕೊಳ್ಳಲಿ ಎಂದು ತಾಕೀತು ಮಾಡಿದ್ದಾರೆ.