ಡಿಕೆಶಿಯನ್ನು ಮುಗಿಸಲು ನಡೆಸಿದ ಸಮಾವೇಶ: ಆರ್.ಅಶೋಕ್

Public TV
3 Min Read

– ಬೀದಿಯಲ್ಲಿ ಬಡಿದಾಡಿಕೊಳ್ಳುತ್ತಿರುವ ಕಾಂಗ್ರೆಸ್ ನಾಯಕರು

ಬೆಂಗಳೂರು: ಸಿಎಂ ಸಿದ್ದರಾಮಯ್ಯ ನಡೆಸಿದ ಸಮಾವೇಶ ಸರ್ಕಾರಿ ಕಾರ್ಯಕ್ರಮ ಅಲ್ಲ. ಅದು ಡಿ.ಕೆ ಶಿವಕುಮಾರ್ (D K Shivakumar) ಅವರನ್ನು ಮುಗಿಸಲು ಮಾಡಿದ ಕಾರ್ಯಕ್ರಮ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ (R Ashok) ವ್ಯಂಗ್ಯವಾಡಿದ್ದಾರೆ.

ಬೆಂಗಳೂರಿನಲ್ಲಿ (Bengaluru) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ (Siddaramaiah) ನಡೆಸಿದ ಸಮಾವೇಶ ಕಾಂಗ್ರೆಸ್‌ನ ಒಡಕನ್ನು ತೋರಿಸಿದೆ. ಅಲ್ಲಿ ಒಬ್ಬರೂ ಡಿಕೆಶಿ ಪರ ಮಾತಾಡಲಿಲ್ಲ. ಡಿಕೆಶಿಗೆ ಪಾಠ ಕಲಿಸಲು ಹಾಗೂ ಅಪಮಾನ ಮಾಡಲು ಈ ಸಮಾವೇಶ ನಡೆಸಲಾಗಿದೆ. ಡಿಕೆಶಿ ಈಗ ಎರಡನೇ ದರ್ಜೆಯ ನಾಯಕರಾಗಿಬಿಟ್ಟಿದ್ದಾರೆ. ಡಿಕೆಶಿಯನ್ನು ಮುಗಿಸಲು ಗುದ್ದಲಿ ಪೂಜೆ ಮಾಡಲಾಗಿದೆ ಎಂದಿದ್ದಾರೆ. ಇದನ್ನೂ ಓದಿ: Tamil Nadu | ಪತಿಯೊಂದಿಗೆ ಜಗಳ – ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪತ್ನಿಯನ್ನು ಇರಿದು ಕೊಂದ ಗಂಡ

ಕಾಂಗ್ರೆಸ್ (Congress) ಪಕ್ಷದ ನಾಯಕರು ಬೀದಿಯಲ್ಲಿ ಬಡಿದಾಡಿಕೊಳ್ಳುತ್ತಿದ್ದಾರೆ. ಇದು ಡಿಕೆಶಿ ಹಾಗೂ ಸಿದ್ದರಾಮಯ್ಯನವರ ಆಂತರಿಕ ಜಗಳ. ಬಿಜೆಪಿಗೆ ಸರ್ಕಾರವನ್ನು ಬೀಳಿಸುವ ಅಗತ್ಯವಿಲ್ಲ. ಈ ಸರ್ಕಾರ ಕಾಂಗ್ರೆಸ್‌ನ ಆಂತರಿಕ ಕಲಹದಿಂದಲೇ ಬಿದ್ದುಹೋಗಲಿದೆ. ಸುರ್ಜೇವಾಲಾ ರಾಜ್ಯಕ್ಕೆ ಬಂದು ಶಾಸಕರ ಅಹವಾಲುಗಳನ್ನು ಆಲಿಸಿದ್ದಾರೆ. ಇವರ ಜಗಳ ಜನರ ಮುಂದೆ ಬಯಲಾಗಿದೆ ಎಂದು ಲೇವಡಿ ಮಾಡಿದ್ದಾರೆ. ಇದನ್ನೂ ಓದಿ: ನಾನು ಹೂತಿಟ್ಟ ಶವಗಳಲ್ಲಿ ಮಹಿಳೆಯರದ್ದೇ ಹೆಚ್ಚು.. ನನಗೆ ಪಾಪಪ್ರಜ್ಞೆ ಕಾಡುತ್ತಿದೆ: ದೂರುದಾರ ಹೇಳಿದ್ದೇನು?

ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಮೈಸೂರಿನ ಸಮಾವೇಶದಲ್ಲಿ ಕೀಳಾಗಿ ಮಾತಾಡಿದ್ದಾರೆ. ಪ್ರಧಾನಿ ಬೊಗಳುತ್ತಾರೆಂದು ಹೇಳುವುದು ಕಾಂಗ್ರೆಸ್ ನಾಯಕರ ಮನಸ್ಥಿತಿಯನ್ನು ತೋರಿಸುತ್ತದೆ. ಈ ಹಿಂದೆ ಛಲವಾದಿ ನಾರಾಯಣಸ್ವಾಮಿ ಗಾದೆಮಾತು ಹೇಳಿದಾಗ ಸಂಸ್ಕೃತಿ ಬಗ್ಗೆ ಇವರೇ ಮಾತಾಡಿದ್ದರು. ಇನ್ನು ಅಧಿಕಾರಕ್ಕೆ ಬರುವುದಿಲ್ಲ ಎಂಬ ಕಾರಣಕ್ಕೆ ಇವರು ಈ ರೀತಿ ಕೀಳಾಗಿ ಮಾತಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರು ಹೋಳು
ಬೆಂಗಳೂರಿನಲ್ಲಿ ಅಭಿವೃದ್ಧಿ ಮಾಡದೆ ಹೋಳು ಮಾಡಲಾಗಿದೆ. ಟ್ರಾಫಿಕ್ ಜಾಮ್, ಪ್ರವಾಹ, ಕಸದ ಸಮಸ್ಯೆ ಯಾವುದು ಕೂಡ ಈ ಕ್ರಮದಿಂದ ನಿವಾರಣೆಯಾಗುವುದಿಲ್ಲ. ನಾಡಪ್ರಭು ಕೆಂಪೇಗೌಡರು ಕಟ್ಟಿದ ಬೆಂಗಳೂರನ್ನು ಒಡೆದರೆ ಪ್ರಗತಿಯಾಗಲ್ಲ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಕರೆಂಟ್ ಶಾಕ್ ನೀಡಿ ಮಾವನ ಕೊಲೆ – ಗಾಯ ಮರೆಮಾಚಲು ರೋಸ್ ವಾಟರ್, ಅರಶಿಣ ಪುಡಿ ಹಚ್ಚಿದ ಸೊಸೆ

ಬ್ರ‍್ಯಾಂಡ್ ಎಂಬ ಸ್ಲೋಗನ್‌ನಿಂದ ಮಾತ್ರ ಅಭಿವೃದ್ಧಿ ಮಾಡುತ್ತಿದ್ದಾರೆ. ನಗರವನ್ನು ಒಡೆಯುವುದರಿಂದ ಆದಾಯ ಹಂಚಿಕೆಯಲ್ಲಿ ತಾರತಮ್ಯ ಉಂಟಾಗಿ ಇನ್ನಷ್ಟು ಕಲಹ ಉಂಟಾಗಲಿದೆ. ಬೆಂಗಳೂರಿನ ಕೇಂದ್ರದಲ್ಲಿ ಎಲ್ಲೂ ಕಸದ ಘಟಕ ಇಲ್ಲ. ಈ ಕಸವನ್ನು ಹೊರವಲಯಕ್ಕೆ ಸಾಗಿಸಿದರೆ, ಸ್ವೀಕಾರ ಮಾಡುವುದಿಲ್ಲ ಎಂದು ಅಲ್ಲಿನ ಜನರು ಹೇಳಬಹುದು. ಇದರಿಂದ ಇನ್ನಷ್ಟು ಜಗಳವಾಗಲಿದೆ ಎಂದಿದ್ದಾರೆ. ಇದನ್ನೂ ಓದಿ: ವಿಧಾನಸಭೆ ಅಧಿವೇಶನದಲ್ಲಿ ರಮ್ಮಿ ಗೇಮ್‌ ಆಡಿದ ಕೃಷಿ ಸಚಿವ – ವಿಪಕ್ಷಗಳಿಂದ ಭಾರಿ ಟೀಕೆ

ಸುರಂಗ ರಸ್ತೆ ಮಾಡಲು ಕೇಂದ್ರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ. ಗುಂಡಿ ಬಿದ್ದ ರಸ್ತೆಗಳನ್ನು ದುರಸ್ತಿ ಮಾಡಲು ಸರ್ಕಾರದ ಬಳಿ ಹಣವಿಲ್ಲ. ಇಲ್ಲಿ ಗಟ್ಟಿಯಾದ ಬಂಡೆಗಳಿವೆ. ಇಲ್ಲಿ ಸುರಂಗ ಕೊರೆದು ರಸ್ತೆ ಮಾಡಲು ಸಾಧ್ಯವಿಲ್ಲ. ಕೇಂದ್ರ ಹೆದ್ದಾರಿ ಸಚಿವರನ್ನು ಭೇಟಿ ಮಾಡಿ, ಸುರಂಗ ರಸ್ತೆ ಬಗ್ಗೆ ಮನವರಿಕೆ ಮಾಡಿಕೊಡಲಾಗುವುದು. ಇದರ ಬದಲು ಮೆಟ್ರೋ ಯೋಜನೆಗೆ ಒತ್ತು ನೀಡಿದರೆ ಸಾಕಾಗುತ್ತದೆ. ಮೆಟ್ರೋ ಯೋಜನೆಯನ್ನು ಇನ್ನಷ್ಟು ವಿಸ್ತರಿಸಿದರೆ, ಟ್ರಾಫಿಕ್ ಜಾಮ್ ನಿವಾರಣೆಯಾಗುತ್ತದೆ ಎಂದು ಹೇಳಿದ್ದಾರೆ.

ಜನನಾಯಕರಲ್ಲ, ಲಾಟರಿ ಸಿಎಂ
ಇವರು ಲಾಟರಿ ಸಿಎಂ ಎಂದು ಶಾಸಕರೇ ಹೇಳಿದ್ದಾರೆ. ಇವರು ಜನನಾಯಕರಲ್ಲ, ಚುನಾಯಿತ ಸಿಎಂ ಅಲ್ಲ. ಆದ್ದರಿಂದ ಇನ್ನು ಮುಂದೆ ಸಿದ್ದರಾಮಯ್ಯ ತಾವು ಲಾಟರಿ ಮುಖ್ಯಮಂತ್ರಿ ಎಂದು ಹೇಳಿಕೊಳ್ಳಬೇಕು ಎಂದಿದ್ದಾರೆ.

Share This Article