ಆರ್‌ಸಿಬಿಯಲ್ಲಿ ಆಡಲು ರಚಿನ್ ಉತ್ಸಾಹ – ಟ್ವೀಟ್ ವೈರಲ್

Public TV
1 Min Read

ನವದೆಹಲಿ: ಶ್ರೀಲಂಕಾ ಎದುರಿನ ಪಂದ್ಯದಲ್ಲಿ ಅದ್ಭುತ ಪ್ರದರ್ಶನ ತೋರಿದ್ದ ರಚಿನ್ ರವೀಂದ್ರ (Rachin Ravindra) ಬೆಂಗಳೂರಿನ (Bengaluru) ಬಗ್ಗೆ ಅಪಾರ ಒಲವು ಹೊಂದಿದ್ದಾರೆ. ಪಂದ್ಯದ ಬಳಿಕ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಮತ್ತಷ್ಟು ಕ್ರಿಕೆಟ್ ಆಡುವ ಕನಸಿನ ಬಗ್ಗೆ ಹೇಳಿಕೊಂಡಿದ್ದಾರೆ.

ರಚಿನ್ ರವೀಂದ್ರ ಮುಂಬರುವ 2024ರ ಇಂಡಿಯನ್ ಪ್ರೀಮಿಯರ್ ಲೀಗ್ (IPL) ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದಲ್ಲಿ ಆಡುವ ಹಂಬಲ ವ್ಯಕ್ತವಾಗಿದೆ. ಈ ಬಗ್ಗೆ ಅವರು ಮಾಡಿದ ಟ್ವೀಟ್ ಭಾರೀ ವೈರಲ್ ಆಗಿದೆ. ಇದನ್ನೂ ಓದಿ: ರಚಿನ್ ರವೀಂದ್ರಗೆ ದೃಷ್ಟಿ ತೆಗೆದ ಅಜ್ಜಿ – ವೀಡಿಯೋ ವೈರಲ್

2023ರ ಐಸಿಸಿ ಏಕದಿನ ವಿಶ್ವಕಪ್ (World Cup) ಟೂರ್ನಿಯ ಉದ್ಘಾಟನಾ ಪಂದ್ಯದಲ್ಲೇ ಶತಕ ಸಿಡಿಸುವ ಮೂಲಕ ಗಮನ ಸೆಳೆದಿದ್ದ ರಚಿನ್, ನಂತರವೂ ಉತ್ತಮ ಪ್ರದರ್ಶನ ನೀಡಿದ್ದಾರೆ. ಇದುವರೆಗೂ ನ್ಯೂಜಿಲೆಂಡ್ ಪರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯ ಗ್ರೂಪ್ ಹಂತದ ಎಲ್ಲಾ 9 ಪಂದ್ಯಗಳನ್ನಾಡಿ ಮೂರು ಶತಕ ಸಹಿತ 565 ರನ್ ಸಿಡಿಸಿದ್ದಾರೆ.

ಟ್ವಿಟ್ಟರ್‌ನಲ್ಲಿ ರಚಿನ್ ರವೀಂದ್ರ ಹಲೋ ಆರ್‌ಸಿಬಿ ಫ್ಯಾನ್ಸ್ ಎಂದು ಬರೆದುಕೊಂಡು ಆರ್‍ಸಿಬಿಯಲ್ಲಿ ಆಡುವ ಇಂಗಿತವನ್ನು ಈ ರೀತಿ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಪಾಕ್‌ ಮುಂದಿರುವ ಘೋರ ಸವಾಲು ಯಾವುದು? – ಎಷ್ಟು ರನ್‌ ಅಂತರದಲ್ಲಿ ಗೆದ್ದರೆ ಸೆಮಿಸ್‌ ತಲುಪಬಹುದು?

Share This Article