ಡಿಂಪಲ್ ಕ್ವೀನ್ ರಚಿತಾ ರಾಮ್ (Rachita Ram) ಕೊನೆಗೂ ತಮ್ಮ ಮದ್ವೆ ಬಗ್ಗೆ ಸುಳಿವು ಕೊಟ್ಟಿದ್ದಾರೆ. ಹುಬ್ಬಳ್ಳಿಯಲ್ಲಿ (Hubballi) ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡುವಾಗ, ಇನ್ನೂ ಕೆಲವೇ ದಿನಗಳಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡುವುದಾಗಿ ಹೇಳಿದ್ದಾರೆ. ಇದು ರಚ್ಚು ಫ್ಯಾನ್ಸ್‌ಗೆ ಸಿಕ್ಕಾಪಟ್ಟೆ ಖುಷಿ ಕೊಟ್ಟಿದೆ.
ಹೌದು. ಇತ್ತೀಚೆಗೆ ತಮ್ಮ ಹುಟ್ಟುಹಬ್ಬದ ಸಂದರ್ಭದಲ್ಲೂ ಮದ್ವೆ (Rachita Ram Marriage) ಬಗ್ಗೆ ಸುಳಿವು ಕೊಟ್ಟಿದ್ದರು. ಮದುವೆಯಾಗುವ ಹುಡುಗ ಹೇಗಿರಬೇಕು ಎನ್ನುವ ಬಗ್ಗೆ ಯಾವ ಡ್ರೀಮ್ ಇಲ್ಲ. ಮನೆಯಲ್ಲಿ ಹುಡುಗನನ್ನ ಹುಡುಕುವ ಕಾರ್ಯ ನಡೆಯುತ್ತಿವೆ ಎನ್ನುವ ಅಭಿಪ್ರಾಯ ಹಂಚಿಕೊಂಡಿದ್ದರು. ಇದೀಗ ಮತ್ತೊಮ್ಮೆ ಮದ್ವೆ ಬಗ್ಗೆ ಸ್ಪಷ್ಟನೆ ಕೊಟ್ಟಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ರಚ್ಚು, ಸದ್ಯದಲ್ಲಿಯೇ ಮದುವೆ ಆಗುವೆ, ಅಭಿಮಾನಿಗಳಿಗೆ ಸಿಹಿ ಸುದ್ದಿ ಕೊಡುವೆ ಎಂದು ಹೇಳಿದರು. ಲವ್ ಮ್ಯಾರೇಜೋ & ಅರೇಂಜ್ ಮ್ಯಾರೇಜೋ ಏನೋ ಮ್ಯಾರೇಜ್ ಆಗುವೆ. ಒಟ್ನಲ್ಲಿ ಇನ್ನು ಕೆಲವೇ ದಿನಗಳಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡುವೆ ಅಂತ ಹೇಳಿದ್ದಾರೆ.
33ನೇ ವಸಂತಕ್ಕೆ ಕಾಲಿಟ್ಟಿರುವ ನಟಿ ರಚಿತಾ ರಾಮ್ ಪರಭಾಷಾ ಸಿನಿಮಾಗಳಲ್ಲೂ ನಟಿಸಿ ಸೈ ಎನಿಸಿಕೊಂಡಿದ್ದಾರೆ. ರಜನಿಕಾಂತ್ ಅವರ `ಕೂಲಿʼ ಸಿನಿಮಾದಲ್ಲೂ ವಿಲನ್ ಪಾತ್ರದಲ್ಲಿ ನಟಿಸಿ ಭಾರೀ ಮೆಚ್ಚುಗೆ ಗಳಿಸಿದ್ದರು. ಇದೀಗ ದುನಿಯಾ ವಿಜಯ್ ನಟನೆಯ ಲ್ಯಾಂಡ್ ಲಾರ್ಡ್, ಅಯೋಗ್ಯ-2 ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಹುಟ್ಟುಹಬ್ಬದ ಪ್ರಯುಕ್ತ ಇವೆರಡು ಸಿನಿಮಾಗಳ ಟೀಸರ್ ರಿಲೀಸ್ ಆಗಿದೆ. ವಿಭಿನ್ನ ಕಾನ್ಸೆಪ್ಟ್‌ನ ಲ್ಯಾಂಡ್ ಲಾರ್ಡ್ ಸಿನಿಮಾ ಮೂಲಕ ದುನಿಯಾ ವಿಜಯ್ ಜೊತೆ 2ನೇ ಬಾರಿ ಸ್ಕ್ರೀನ್ ಶೇರ್ ಮಾಡುತ್ತಿದ್ದಾರೆ ನಟಿ ರಚಿತಾ. ಅಲ್ಲದೇ ಇತ್ತೀಚೆಗೆ ವಿಲನ್ ಪಾತ್ರಗಳಿಗೆ ಬೇಡಿಕೆ ಹೆಚ್ಚಾಗ್ತಿದೆ ಎಂದು ನಟಿ ಹೇಳಿಕೊಂಡಿದ್ದರು.