ಎಎಪಿ ತೊರೆದು ಬಿಜೆಪಿ ಸೇರಿದ 7 ರಾಜ್ಯಸಭಾ ಸಂಸದರು

1 Min Read

ನವದೆಹಲಿ: ಆಮ್‌ ಆದ್ಮಿ ಪಕ್ಷಕ್ಕೆ (AAP) ಬಿಗ್‌ ಶಾಕ್‌ ಎದುರಾಗಿದೆ. ರಾಘವ್‌ ಚಡ್ಡಾ (Raghav Chadha) ಸೇರಿದಂತೆ 7 ರಾಜ್ಯಸಭಾ ಸಂಸದರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

- Advertisement -

ರಾಘವ್ ಚಡ್ಡಾ, ಅಶೋಕ್ ಮಿತ್ತಲ್, ಸಂದೀಪ್ ಪಾಠಕ್ ಸೇರಿದಂತೆ 7 ರಾಜ್ಯಸಭಾ ಸಂಸದರು ಬಿಜೆಪಿಗೆ (BJP) ಬೆಂಬಲ ಘೋಷಿಸಿದ್ದಾರೆ. ರಾಜ್ಯಸಭಾ ಸದಸ್ಯರ ಪೈಕಿ 2/3 ಸದಸ್ಯರು ಬೆಂಬಲ ನೀಡಿರುವುದಾಗಿ ಸುದ್ದಿಗೋಷ್ಠಿಯಲ್ಲಿ ರಾಘವ್‌ ಚಡ್ಡಾ ತಿಳಿಸಿದ್ದಾರೆ. ಬಿಜೆಪಿಗೆ ಬೆಂಬಲಿಸುವ ಬಗ್ಗೆ ಕೂಡ ಮಾಹಿತಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: West Bengal Election| 152ರ ಪೈಕಿ 110ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು -ಬಿಜೆಪಿಗೆ ಅಧಿಕಾರ: ಅಮಿತ್‌ ಶಾ ವಿಶ್ವಾಸ

- Advertisement -

ರಾಜ್ಯಸಭೆಯಲ್ಲಿ ಎಎಪಿಗೆ ಸೇರಿದ 2/3 ಸದಸ್ಯರಾದ ನಾವು ಭಾರತದ ಸಂವಿಧಾನದ ನಿಬಂಧನೆಗಳನ್ನು ಚಲಾಯಿಸಲು ಮತ್ತು ಬಿಜೆಪಿಯೊಂದಿಗೆ ವಿಲೀನಗೊಳ್ಳಲು ನಿರ್ಧರಿಸಿದ್ದೇವೆ. ನಾನು ನನ್ನ ರಕ್ತ ಮತ್ತು ಬೆವರಿನಿಂದ ಪೋಷಿಸಿ, ನನ್ನ ಯೌವನದ 15 ವರ್ಷಗಳನ್ನು ನೀಡಿದ ಎಎಪಿ ತನ್ನ ತತ್ವಗಳು, ಮೌಲ್ಯಗಳು ಮತ್ತು ಮೂಲ ನೈತಿಕತೆಗಳಿಂದ ವಿಮುಖವಾಗಿದೆ. ಈಗ ಈ ಪಕ್ಷವು ರಾಷ್ಟ್ರದ ಹಿತಾಸಕ್ತಿಗಾಗಿ ಕೆಲಸ ಮಾಡುತ್ತಿಲ್ಲ. ಬದಲಾಗಿ ಅದರ ವೈಯಕ್ತಿಕ ಲಾಭಕ್ಕಾಗಿ ಕೆಲಸ ಮಾಡುತ್ತಿದೆ ಎಂದು ರಾಘವ್‌ ಚಡ್ಡಾ ಆರೋಪಿಸಿದ್ದಾರೆ.

- Advertisement -

- Advertisement -

ಕಳೆದ ಕೆಲವು ವರ್ಷಗಳಿಂದ, ನಾನು ತಪ್ಪು ಪಕ್ಷದಲ್ಲಿ ಕೆಲಸ ಮಾಡುವ ಸರಿಯಾದ ವ್ಯಕ್ತಿ ಎಂದು ನನಗೆ ಅನಿಸುತ್ತಿದೆ. ಆದ್ದರಿಂದ, ಇಂದು ನಾನು ಎಎಪಿಯಿಂದ ದೂರ ಸರಿಯುತ್ತಿದ್ದೇನೆ ಮತ್ತು ಸಾರ್ವಜನಿಕರಿಗೆ ಹತ್ತಿರವಾಗುತ್ತಿದ್ದೇನೆ ಎಂದು ಘೋಷಿಸಿದ್ದಾರೆ. ಇದನ್ನೂ ಓದಿ: ದೆಹಲಿ ಅಂಗಳದಲ್ಲಿ ಡಿಸಿಎಂ ಡಿಕೆಶಿ ಪವರ್ ಕ್ಲೈಮ್!

ರಾಜ್ಯಸಭಾ ಸದಸ್ಯರಾದ ಸ್ವಾತಿ ಮಲಿವಾಲ್, ಹರ್ಭಜನ್ ಸಿಂಗ್ ನಮ್ಮ ಜೊತೆಗಿದ್ದಾರೆ. ರಾಜ್ಯಸಭೆಯಲ್ಲಿ ಆಪ್‌ನ 10 ಸದಸ್ಯರಿದ್ದಾರೆ. ಇದರಲ್ಲಿ 2/3 ಸಂಸದರು ನಮ್ಮ ಜೊತೆಗಿದ್ದಾರೆ. ನಾವು ರಾಜ್ಯಸಭೆ ಸಭಾಪತಿಗೆ ಮಾಹಿತಿ ನೀಡಿದ್ದೇವೆ. ಸಂವಿಧಾನದ ಅಡಿಯಲ್ಲಿ ನಾವು ಬಿಜೆಪಿಯೊಂದಿಗೆ ವಿಲೀನಗೊಳ್ಳುತ್ತಿದ್ದೇವೆ ಎಂದು ತಿಳಿಸಿದ್ದಾರೆ.

Share This Article